ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ

ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ತೀರಿಸಿಕೊಂಡಿದ್ದಾನೆ. ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್‌ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ.

ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ
Viral News
Follow us
ಅಕ್ಷತಾ ವರ್ಕಾಡಿ
|

Updated on: Dec 22, 2023 | 11:56 AM

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬ ಮಾತಿಗೆ. ಇದೀಗಾ ಅಂತದ್ದೇ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಆದರೆ ಇಲ್ಲಿ ಬಡವಾಗಿದ್ದು ಕೂಸಲ್ಲ, ಬದಲಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮಾಲೀಕರು.  ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಂಡಿದ್ದಾನೆ. ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್‌ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿತ್ತು ಮತ್ತು ಆ ವ್ಯಕ್ತಿಯ ಮನೆ ಆ ಶೋರೂಮ್ ಬಳಿ ಇತ್ತು. ಸೋಮವಾರ ಬೆಳಗ್ಗೆ ವಾಹನಗಳ ಇಂತಹ ಸ್ಥಿತಿ ಕಂಡು ಶೋರೂಂ ಮಾಲೀಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪ್ರದೇಶದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ಆರಂಭಿಸಿದ್ದು, ವ್ಯಕ್ತಿಯ ವಿಕೃತಿ ಮೆರೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುಬಾಲನ್ ಎಂದು ಗುರುತಿಸಲಾಗಿದ್ದು, ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಲ್ಲದೇ ಈ ವ್ಯಕ್ತಿ ನಗರದ ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆ ನಡೆಯುವ ಎರಡು ದಿನಗಳ ಹಿಂದಷ್ಟೇ ಅಲ್ಲಿಂದ ಬಿಡುಗಡೆಗೊಂಡಿರುವುದು ಪೊಲೀಸರಿಗೆ ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ:  3000 ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಫೋಟೋ ವೈರಲ್​​

ಪೊಲೀಸರು ಬುಬಾಲನ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ, ನನ್ನ ಹೆಂಡತಿ ನನಗೆ ಮೋಸ ಮಾಡುತ್ತಿದ್ದಾಳೆ ಎಂಬ ಅನುಮಾನದಿಂದ ಆ ದಿನ ಹೆಂಡತಿಯೊಂದಿಗೆ ಜಗಳವಾಡಿದ್ದನು. ಈ ವಿಚಾರವಾಗಿ ಆಕೆಯನ್ನು ಪ್ರಶ್ನಿಸಿದಾಗ ಆಕೆ ನನ್ನೊಂದಿಗೆ ಜಗಳವಾಡಿದಳು. ಇದರಿಂದ ಕೋಪಗೊಂಡು ಹೊರಗೆ ನಿಲ್ಲಿಸಿದ್ದ ಎಲ್ಲಾ ವಾಹನಗಳನ್ನು ಒಡೆದು ಹಾಕಿದೆ ಎಂದು ಹೇಳಿಕೊಂಡಿದ್ದಾನೆ. ಸದ್ಯ ಈ ವ್ಯಕ್ತಿ ಪೊಲೀಸರ ವಶದಲ್ಲಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ತೀರ್ಪು ಇನ್ನಷ್ಟೇ ಬರಬೇಕಿದೆ.

ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್