Viral: ಅಯ್ಯಯ್ಯೋ… ತಾಜ್‌ ಮಹಲ್‌ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ವಿಡಿಯೋ ವೈರಲ್‌

ಸಾರ್ವಜನಿಕ ಸ್ಥಳಗಳಲ್ಲಿ, ಪ್ರವಾಸಿ ಸ್ಥಳಗಳಲ್ಲಿ ಹೀಗೆ ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ರೂ ಕೆಲವೊಬ್ರು ಇದಕ್ಕೆಲ್ಲಾ ಕ್ಯಾರೇ ಅನ್ನದೇ ಎಲ್ಲೆಂದರಲ್ಲಿ ಮೂತ್ರ ವಿಸರ್ಜಿಸುತ್ತಾರೆ. ಅದೇ ರೀತಿ ಇಲ್ಲಿಬ್ಬರು ಪ್ರವಾಸಿಗರು ವಿಶ್ವ ಪ್ರಸಿದ್ಧ ತಾಜ್‌ ಮಹಲ್‌ನ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಪ್ರವಾಸಿಗರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದಾರೆ.

Viral: ಅಯ್ಯಯ್ಯೋ… ತಾಜ್‌ ಮಹಲ್‌ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ವಿಡಿಯೋ ವೈರಲ್‌
Follow us
| Updated By: ಅಕ್ಷತಾ ವರ್ಕಾಡಿ

Updated on: Sep 15, 2024 | 12:58 PM

ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳ, ಪ್ರವಾಸಿ ಸ್ಥಳಗಳು ಸೇರಿದಂತೆ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವಂತಿಲ್ಲ, ಉಗುಳುವಂತಿಲ್ಲ, ಮಲ ವಿಸರ್ಜನೆ ಮಾಡುವಂತಿಲ್ಲ, ಕಂಡ ಕಂಡಲ್ಲಿ ಕಸ ಕಡ್ಡಿಗಳನ್ನು ಎಸೆಯುವಂತಿಲ್ಲ ಎಂದು ಸರ್ಕಾರಗಳು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಲೇ ಇರುತ್ತವೆ. ಆದ್ರೆ ಈ ಕೆಲವೊಬ್ರು ಇದಕ್ಕೆಲ್ಲ ಕ್ಯಾರೇ ಅನ್ನದೇ ಎಲ್ಲೆಂದರಲ್ಲಿ ಮೂತ್ರ ವಿಸರ್ಜಿಸುತ್ತಾರೆ. ಅದೇ ರೀತಿ ಇಲ್ಲಿಬ್ಬರು ಪ್ರವಾಸಿಗರು ವಿಶ್ವ ಪ್ರಸಿದ್ಧ ತಾಜ್‌ ಮಹಲ್‌ನ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಪ್ರವಾಸಿಗರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದಾರೆ.

ಹಲವಾರು ಪ್ರವಾಸಿಗರು ಪ್ರತಿನಿತ್ಯ ವಿಶ್ವ ಪ್ರಸಿದ್ಧ ತಾಜ್‌ ಮಹಲ್‌ಗೆ ಭೇಟಿ ನೀಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಇಲ್ಲಿ ಪ್ರತಿ ಮೂಲೆಯಲ್ಲೂ ಸಿಐಎಸ್‌ಎಫ್‌ ಮತ್ತು ಎಎಸ್‌ಐ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇಷ್ಟು ಬಿಗಿ ಭದ್ರತೆಯ ನಡುವೆಯೂ ಪ್ರವಾಸಿಗರಿಬ್ಬರು ಶೌಚಾಲಯದ ವ್ಯವಸ್ಥೆಗಳಿದ್ದರೂ ಕೂಡಾ ತಾಜ್‌ ಮಹಲ್‌ ಆವರಣದಲ್ಲಿರುವ ಉದ್ಯಾನವನದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಇದನ್ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ವಿಡಿಯೋ ಆಧರಿಸಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್​​ ಕೆಲಸ ಬಿಟ್ಟು, ಹುಡುಗಿಯರನ್ನು ಹೇಗೆ ಪಟಾಯಿಸುವುದು ಎಂದು ಹೇಳಿ ಕೊಡ್ತಾರೆ ಈ ಅಧಿಕಾರಿ

ಈ ಕುರಿತ ವಿಡಿಯೋವನ್ನು News1Indiatweet ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಸೊಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಶೌಚಾಲಯದ ವ್ಯವಸ್ಥೆ ಇದ್ದರೂ ಪುರುಷರಿಬ್ಬರು ತಾಜ್‌ ಮಹಲ್‌ ಆವರಣದಲ್ಲಿನ ಉದ್ಯಾನವನದಲ್ಲಿ ಮೂತ್ರ ವಿಸರ್ಜಿಸುತ್ತಿರುವ ದೃಶ್ಯವನ್ನು ಕಾಣಬಹುದು. ವಿಡಿಯೋವನ್ನು ಕಂಡು ಗರಂ ಆದ ನೆಟ್ಟಿಗರು ಇವರುಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?