Viral: ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್

ನೀಟ್‌ ಕೋಚಿಂಗ್‌ ಸೆಂಟರ್‌ನ ಬಯಾಲಜಿ ಟೀಚರ್‌ ತಾನೊಬ್ಬ ಶಿಕ್ಷಕನೆಂಬುದನ್ನೂ ಮರೆತು ವಿದ್ಯಾರ್ಥಿನಿಯನ್ನು ತಬ್ಬಿ ಮುತ್ತಿಟ್ಟಿದ್ದು ಮಾತ್ರವಲ್ಲದೆ ಆಕೆಯನ್ನು ಶೌಚಗೃಹಕ್ಕೆ ಕರೆದುಕೊಂಡು ಹೋಗಿ ಅನುಚಿತ ವರ್ತನೆಯನ್ನು ತೋರಿದ್ದಾನೆ. ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

Viral: ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 01, 2024 | 3:45 PM

ಶಿಕ್ಷಕರು ವಿದ್ಯಾರ್ಥಿಗಳಿಗೆ ಬೆಳಕು ತೋರುವ ದೀವಿಗೆ ಇದ್ದಂತೆ. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಬೇಕಿದ್ದ ಶಿಕ್ಷಕನೇ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಹೌದು ನೀಟ್‌ ಕೋಚಿಂಗ್‌ ಸೆಂಟರ್‌ನ ಬಯಾಲಜಿ ಟೀಚರ್‌ ತಾನೊಬ್ಬ ಶಿಕ್ಷಕನೆಂಬುದನ್ನೂ ಮರೆತು ವಿದ್ಯಾರ್ಥಿನಿಯೊಬ್ಬಳನ್ನು ತಬ್ಬಿ ಮುತ್ತಿಟ್ಟಿದ್ದಾನೆ. ಮಾತ್ರವಲ್ಲದೆ ಆಕೆಯನ್ನು ಶೌಚಗೃಹಕ್ಕೆ ಕರೆದುಕೊಂಡು ಹೋಗಿ ಅನುಚಿತ ವರ್ತನೆಯನ್ನು ತೋರಿದ್ದಾನೆ. ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಕಾನ್ಪುರದ ಪ್ರತಿಷ್ಠಿತ ಕಾಕದೇವ್‌ ನೀಟ್‌ ಕೋಚಿಂಗ್‌ ಸೆಂಟರ್‌ನಲ್ಲಿ ನಡೆದಿದ್ದು, ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ತಬ್ಬಿ ಮುತ್ತಿಟ್ಟು ಅನುಚಿತವಾಗಿ ವರ್ತಿಸಿದ್ದಾನೆ. ಬಯಾಲಜಿ ಶಿಕ್ಷಕನಾಗಿರು ಸಾಹಿಲ್‌ ಸಿದ್ದಿಕಿ ಈ ಅಸಹ್ಯ ಕೃತ್ಯವನ್ನು ಎಸಗಿದ್ದು, ಈ ದೃಶ್ಯಗಳು ಕೋಚಿಂಗ್‌ ಸೆಂಟರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆತನ ಅಶ್ಲೀಲ ಕೃತ್ಯಗಳು ವೈರಲ್‌ ಆಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಕೋಚಿಂಗ್‌ ಸೆಂಟರ್‌ನ ಡೈರೆಕ್ಟರ್‌ ಆಶಿಶ್‌ ಶ್ರೀವಾಸ್ತವ ಮಾತನಾಡಿದ್ದು, ʼಈ ಹಿಂದೆಯೂ ಸಹ ಕೋಚಿಂಗ್‌ ಸೆಂಟರ್‌ನ ಅನೇಕ ವಿದ್ಯಾರ್ಥಿನಿಯರು ಸಾಹಿಲ್‌ ನಡವಳಿಕೆ ಸರಿಯಿಲ್ಲ ಎಂಬ ಬಗ್ಗೆ ದೂರನ್ನು ನೀಡಿದ್ದರು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರೀ ಸರಿಯಾದ ಸಾಕ್ಷಿ ಸಿಕ್ಕಿದ್ದು, ಈ ಬಗ್ಗೆ ದೂರು ನೀಡಿದ ಬಳಿಕ ಅತನನ್ನು ಪೊಲೀಸರು ಬಂಧಿಸಿದ್ದಾರೆʼ ಎಂದು ಹೇಳಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು ಗೌರವ್‌ ತ್ರಿವೇದಿ (gaurav3vedi) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ನೀಟ್‌ ಕೋಚಿಂಗ್‌ ಸೆಂಟರ್‌ನ ಬಯಾಲಜಿ ಶಿಕ್ಷಕ ತನ್ನ ವಿದ್ಯಾರ್ಥಿನಿಯೊಂದಿಗೆಯೇ ಅಶ್ಲೀಲ ಕೃತ್ಯದಲ್ಲಿ ತೊಡಗಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಶಿಕ್ಷಕ ಸಾಹಿಲ್‌ ಸಿದ್ದಿಕಿ ತನ್ನ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಆಕೆಗೆ ಮುತ್ತಿಡುವ ಅಹಸ್ಯಕರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಇಸ್ಲಾಂ ಧರ್ಮ ತ್ಯಜಿಸಿ ಸನಾತನ ಧರ್ಮವನ್ನು ಸ್ವೀಕರಿಸಿದ ಎಂ.ಟೆಕ್‌ ಪದವೀಧರೆ

ಸೆಪ್ಟೆಂಬರ್‌ 29 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 52 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇಂತಹ ಶಿಕ್ಷಕನಿಂದ ಗುರು-ಶಿಷ್ಯ ಪರಂಪರೆಗೆ ಕಳಂಕʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಇಬ್ಬರ ನಡುವಿನ ಒಮ್ಮತದ ನಡವಳಿಕೆಯಂತೆ ಕಾಣುತ್ತದೆʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಗುರು-ಶಿಷ್ಯ ಪರಂಪರೆಗೆ ಕಳಂಕ ತರುವ ಇಂತಹ ಕೆಟ್ಟ ವ್ಯಕ್ತಿಗಳಿಗೆ ಮರಣದಂಡನೆ ವಿಧಿಸಬೇಕುʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ಬಿಗ್​ಬಾಸ್ ಮನೆಯಲ್ಲಿ ಭೂತ, ಬಿದ್ದು ಒದ್ದಾಡಿದ ಚೈತ್ರಾ, ಮನೆ ಮಂದಿಗೆ ಭಯ
ಬಿಗ್​ಬಾಸ್ ಮನೆಯಲ್ಲಿ ಭೂತ, ಬಿದ್ದು ಒದ್ದಾಡಿದ ಚೈತ್ರಾ, ಮನೆ ಮಂದಿಗೆ ಭಯ