Viral : ಬಾತ್ ರೂಮ್ ಗೆ ಹೋಗುವ ನೆಪದಲ್ಲಿ ಚಿನ್ನಾಭರಣ ನಗದು ಜೊತೆ ಪರಾರಿ ಆದ ವಧು, ಕಂಗಾಲಾದ ವರ

ಇತ್ತೀಚೆಗಿನ ದಿನಗಳಲ್ಲಿ ಮದುವೆ ಹೆಸರಿನಲ್ಲಿ ವಂಚಿಸುತ್ತಿರುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಇದೀಗ ಇಂತಹದೊಂದು ಘಟನೆ ನಡೆದಿದ್ದು, ಮದುವೆಯ ದಿನವೇ ವಧುವು ಬಾತ್ ರೂಮ್ ಗೆ ಹೋಗುವ ನೆಪದಲ್ಲಿ ಚಿನ್ನಾಭರಣ ಹಾಗೂ ನಗದು ಜೊತೆಗೆ ಮದುವೆ ಮಂಟಪದಿಂದ ಪರಾರಿಯಾಗಿದ್ದಾಳೆ. ಈ ಘಟನೆಯು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

Viral : ಬಾತ್ ರೂಮ್ ಗೆ ಹೋಗುವ ನೆಪದಲ್ಲಿ ಚಿನ್ನಾಭರಣ  ನಗದು ಜೊತೆ ಪರಾರಿ ಆದ ವಧು, ಕಂಗಾಲಾದ ವರ
Bride Runs Away With Cash, JewelleryImage Credit source: Pinterest
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Jan 05, 2025 | 1:19 PM

ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ ಎಂಬ ಮಾತು ಕೆಲವು ಘಟನೆಗಳ ಬಗ್ಗೆ ಕೇಳಿದಾಗ ಸತ್ಯವೆನಿಸುತ್ತದೆ. ಮದುವೆಯ ಹೆಸರಿನಲ್ಲಿ ವಂಚನೆಗಳು ನಡೆಯುತ್ತಿರುವ ಸುದ್ದಿಗಳನ್ನು ಆಗಾಗ ಕೇಳುತ್ತೀರಾ. ಈಗಾಗಲೇ ಅನೇಕ ಕಾರಣಗಳಿಗೆ ಮದುವೆ ಮಂಟಮದಲ್ಲಿಯೇ ಅದೆಷ್ಟೋ ಮದುವೆಗಳು ಮುರಿದು ಬಿದ್ದಿದೆ. ಇಲ್ಲೊಂದು ಅಂತಹದ್ದೇ ವಿಚಿತ್ರ ಘಟನೆ ನಡೆದಿದ್ದು, ಮದುವೆ ದಿನವೇ ವಧುವು ಬಾತ್ ರೂಮ್ ಗೆ ಹೋಗುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣದೊಂದಿಗೆ ಮದುವೆ ಮಂಟಪದಿಂದ ಎಸ್ಕೇಪ್ ಆಗಿದ್ದಾಳೆ. ಈ ಘಟನೆಯು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

ಸೀತಾಪುರ ಜಿಲ್ಲೆಯ ಗೋವಿಂದ್ ಪುರ ಗ್ರಾಮದ ರೈತ ಕಮಲೇಶ್ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ಮೊದಲ ಪತ್ನಿಯ ಮರಣದ ನಂತರ 40 ವರ್ಷದ ಕಮಲೇಶ್ ಎರಡನೇ ಮದುವೆಗೆ ಸಿದ್ಧನಾಗಿದ್ದರು. ಹುಡುಗಿಯನ್ನು ಹುಡುಕಲು ಸ್ಥಳೀಯ ದಲ್ಲಾಳಿಗೆ 30 ಸಾವಿರ ರೂಪಾಯಿ ನೀಡಿದ್ದರು. ದಲ್ಲಾಳಿ ಮೂಲಕವೇ ಒಂದು ಹೆಣ್ಣನ್ನು ನೋಡಲಾಗಿತ್ತು. ಕೊನೆಗೆ ಎರಡೂ ಮನೆಯವರು ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು.

ಶುಕ್ರವಾರದಂದು ಗೋರಖ್‌ಪುರದ ಖಜ್ನಿ ಪ್ರದೇಶದ ಭರೋಹಿಯಾದಲ್ಲಿರುವ ಶಿವ ದೇವಾಲಯದಲ್ಲಿ ಮದುವೆ ಆಯೋಜಿಸಲಾಗಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರದಂದು ವಧು, ತನ್ನ ತಾಯಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದರು. ಇತ್ತ ಕಮಲೇಶ್ ಅವರ ಕುಟುಂಬದೊಂದಿಗೆ ಮದುವೆ ಮಂಟಪಕ್ಕೆ ಬಂದಿದ್ದರು. ಮದುವೆ ಶಾಸ್ತ್ರಗಳು ನಡೆಯುತ್ತಿರುವಾಗಲೇ ವಧುವು ಬಾತ್ ರೂಮ್ ಗೆ ಹೋಗಬೇಕೆಂದು ಕೇಳಿಕೊಂಡಿದ್ದು, ಆ ವೇಳೆ ವಧುವಿನ ಜೊತೆಗೆ ಆಕೆಯ ತಾಯಿಯನ್ನು ಕಳುಹಿಸಲಾಗಿದೆ. ಬಾತ್ ರೂಮ್ ಗೆ ತೆರಳಿ ತುಂಬಾನೇ ಹೊತ್ತಾದರೂ ಮರಳದ ಕಾರಣ ಅನುಮಾನ ಬಂದಿದೆ. ಈ ವೇಳೆ ಕುಟುಂಬಸ್ಥರು ಹೋಗಿ ನೋಡಿದಾಗ ಈ ಪ್ರಕರಣವು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಚಪಾತಿ ಮಾಡುವುದರಿಂದ ಹಿಡಿದು ಪಾತ್ರೆ ತೊಳೆಯುವವರೆಗೆ ಹೆಣ್ಮಕ್ಕಳಿಗಿಂತ ಸೂಪರ್ ಆಗಿ ಮನೆ ಕೆಲಸ ಮಾಡುವ ಕೋತಿಯಿದು

ವಂಚನೆಗೊಳಗಾದ ಕಮಲೇಶ್, ಮದುವೆ ನಿಶ್ಚಯವಾದ ಬಳಿಕ ತನ್ನನ್ನು ಮದುವೆಯಾಗುವ ಹುಡುಗಿಗೆ ಸೀರೆ, ಒಡವೆ ಹಾಗೂ ಬ್ಯೂಟಿ ಪ್ರಾಡೆಕ್ಟ್ಸ್ ಕೊಡಿಸಿದ್ದೆ. ಮಾತನಾಡಲು ಒಳ್ಳೆಯ ಫೋನ್ ಅವಳಿಗೆ ಕೊಡಿಸಿದ್ದೆ. ಮದುವೆಯ ವೆಚ್ಚವನ್ನು ಭರಿಸಿದ್ದೆ. ನಾನು ನನ್ನ ಕುಟುಂಬವನ್ನು ಪುನರ್ನಿರ್ಮಿಸಲು ಬಯಸಿದ್ದೆ ಆದರೆ ಎಲ್ಲವನ್ನೂ ಕಳೆದುಕೊಂಡೆ. ಎರಡನೇ ಮದುವೆಯಾಗಲು ಹೊರಟದ್ದು ನಾನು ಮಾಡಿದ ತಪ್ಪು ಎಂದಿದ್ದಾರೆ. ಆದರೆ, ಈ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ದೂರು ದಾಖಲಾಗಿಲ್ಲ. ದೂರು ದಾಖಲಿಸಿದರೆ ತನಿಖೆ ನಡೆಸಲಾಗುವುದು ಎಂದು ದಕ್ಷಿಣ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್