Viral: ಹೈ ಹೀಲ್ಸ್ ಚಪ್ಪಲಿ ಕೊಡಿಸದ ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹೆಂಡ್ತಿ
ಪತಿ ಪತ್ನಿಯರ ನಡುವೆ ಆಗಾಗ್ಗೆ ಸಣ್ಣಪುಟ್ಟ ವಿಚಾರಗಳಿಗೆ ಜಗಳ ನಡೆಯುತ್ತಿರುತ್ತವೆ. ಈ ಮನಸ್ತಾಪ ಅತಿರೇಕಕ್ಕೆ ತಿರುಗಿ ಠಾಣೆಯ ಮೆಟ್ಟಿಲೇರಿದ ಘಟನೆಗಳು ಕೂಡಾ ನಡೆದಿವೆ. ಇದೀಗ ಅಂತಹದ್ದೇ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಗಂಡ ಹೈ ಹೀಲ್ಸ್ ಚಪ್ಪಲಿ ಕೊಡಿಸಿಲ್ಲವೆಂದು ಮಹಿಳೆಯೊಬ್ಬಳು ತನ್ನ ಪತಿರಾಯನ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾಳೆ. ಅಷ್ಟೇ ಅಲ್ಲದೆ ಡಿವೋರ್ಸ್‌ಗಾಗಿ ಪಟ್ಟು ಹಿಡಿದಿದ್ದಾಳೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

ಗಂಡ ಹೆಂಡ್ತಿ ಮಧ್ಯೆ ಸಣ್ಣಪುಟ್ಟ ಜಗಳ, ಮನಸ್ತಾಪಗಳು ಏರ್ಪಡುವುದು ಸಾಮಾನ್ಯ. ಹೀಗೆ ಕ್ಷುಲ್ಲಕ ಕಾರಣಗಳಿಗೆ ಜಗಳ ನಡೆದು ಗಂಡನ ವಿರುದ್ಧ ಪತ್ನಿ ಪೊಲೀಸ್ ಕೇಸ್ ದಾಖಲಿಸಿದಂತ, ಪತಿ ಪತ್ನಿಯರು ಡಿವೋರ್ಸ್ ಪಡೆದುಕೊಂಡಂತಹ ಸಾಕಷ್ಟು ಪ್ರಕರಣಗಳು ಈ ಹಿಂದೆಯೂ ನಡೆದಿವೆ. ಇದೀಗ ಇಲ್ಲೊಂದು ಅಂತಹದ್ದೇ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಗಂಡ ಹೈ ಹೀಲ್ಸ್ ಚಪ್ಪಲಿ ಕೊಡಿಸಿಲ್ಲವೆಂದು ಮಹಿಳೆಯೊಬ್ಬಳು ತನ್ನ ಪತಿರಾಯನ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾಳೆ. ಹೌದು ಹೈ ಹೀಲ್ಸ್ ವಿಚಾರವಾಗಿ ನಡೆದ ಜಗಳ ವಿಚ್ಛೇದನ ಹಂತಕ್ಕೆ ತಲುಪಿದ್ದು, ನಂತರ ಕೌನ್ಸೆಲಿಂಗ್ ಸೆಂಟರ್‌ನಲ್ಲಿ ಪತಿ ಪತ್ನಿಯರ ಮಧ್ಯೆ ಸಂಧಾನ ನಡೆಸಿ ಮನೆಗೆ ಕಳುಹಿಸಲಾಗಿದೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.
ಈ ವಿಚಿತ್ರ ಪ್ರಕರಣ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು, ಗಂಡ ಹೈ ಹೀಲ್ಸ್ ಚಪ್ಪಲಿ ಕೊಡಿಸಿಲ್ಲವೆಂದು ಹೆಂಡತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. 2024 ರಲ್ಲಿ ಅಂದರೆ ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಈ ಜೋಡಿಯ ನಡುವೆ ಹೈ ಹೀಲ್ಸ್ ಚಪ್ಪಲಿಗೆ ಸಂಬಂಧಪಟ್ಟಂತೆ ಮನಸ್ತಾಪ ಏರ್ಪಟ್ಟಿದೆ. ಆ ಮಹಿಳೆಗೆ ಚಿಕ್ಕಂದಿನಿಂದಲೂ ಹೈ ಹೀಲ್ಸ್ ಚಪ್ಪಲಿ ಧರಿಸುವುದೆಂದರೆ ಬಲು ಇಷ್ಟವಂತೆ. ಅದಕ್ಕಾಗಿ ಆಕೆ ಪತಿಯ ಬಳಿ ಹೈ ಹೀಲ್ಸ್ ಕೊಡಿಸುವಂತೆ ಕೇಳಿದ್ದಾಳೆ. ಆಕೆಯ ಬೇಡಿಕೆಗೆ ಪತಿ ಒಪ್ಪದಿದ್ದಾಗ, ಇಬ್ಬರ ನಡುವೆ ಜಗಳ ಏರ್ಪಟ್ಟಿದೆ. ಇದೇ ಕೋಪದಲ್ಲಿ ಆಕೆ ತವರು ಮನೆಗೆ ಹೋಗಿದ್ದು ಮಾತ್ರವಲ್ಲದೆ, ಗಂಡ ಹೈ ಹೀಲ್ಸ್ ಕೊಡಿಸಿಲ್ಲವೆಂದು ಪೊಲೀಸ್ ದೂರನ್ನು ಕೂಡಾ ದಾಖಲಿಸಿದ್ದಾಳೆ. ಅಷ್ಟೇ ಅಲ್ಲದೆ ನನಗೆ ಡಿವೋರ್ಸ್ ಬೇಕೆಂದು ಕೇಳಿದ್ದಾಳೆ. ಆಕೆ ಒಮ್ಮೆ ಹೈ ಹೀಲ್ಸ್ ಧರಿಸಿ ಜಾರಿ ಬಿದ್ದಿದ್ದಳು, ಅಲ್ಲದೆ ಆಕೆಯ ಕಾಲಿಗೂ ಗಾಯಗಳಾಗಿತ್ತು. ಅದೇ ಕಾರಣಕ್ಕೆ ಹೈ ಹೀಲ್ಸ್ ಕೊಡಿಸಲು ನಿರಾಕರಿಸಿದ್ದು ಎಂದು ಪತಿರಾಯ ಹೇಳಿಕೊಂಡಿದ್ದಾನೆ.
ವೈರಲ್ ಪೋಸ್ಟ್ ಇಲ್ಲಿದೆ ನೋಡಿ:
A strange case has come to light from Agra, where a wife reached the police station and filed complaints against him after he refused to buy her heel sandals. The wife accused her husband of not buying her heels from the last 8 months & not fulfilling her wishes.
According to… pic.twitter.com/5PqpOO80Nl
— ForMenIndia (@ForMenIndia_) February 4, 2025
ಇವರಿಬ್ಬರ ಜಗಳಕ್ಕೆ ಕಾರಣವನ್ನು ತಿಳಿದ ಪೊಲೀಸರು ಇಬ್ಬರನ್ನೂ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇವರಿಬ್ಬರೂ ವಿಚ್ಛೇದನ ಬೇಕೇ ಬೇಕು ಎಂದು ಪಟ್ಟು ಹಿಡಿದಾಗ ಪೊಲೀಸರು ಗಂಡ ಹೆಂಡತಿ ಇಬ್ಬರನ್ನೂ ಕುಟುಂಬ ಸಲಹಾ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿ ಕೌನ್ಸೆಲಿಂಗ್ ನಡೆಸಿ ಇಬ್ಬರ ನಡುವಿನ ಜಗಳವನ್ನು ಬಗೆಹರಿಸಿ, ಸಂಧಾನ ನಡೆಸಿ ಮನೆಗೆ ಕಳುಹಿಸಲಾಗಿದೆ ಈ ವಿಚಿತ್ರ ಪ್ರಕರಣದ ಸುದ್ದಿ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಚಪ್ಪಲಿ ವಿಚಾರ ಕೂಡಾ ವಿಚ್ಛೇದನಕ್ಕೆ ಕಾರಣವಾಗುತ್ತಾ ಎಂದು ನೆಟ್ಟಿಗರು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ