Viral News: ಹೆಂಡತಿಗೆ ಕೈಕೊಟ್ಟು ಅತ್ತೆಯನ್ನೇ ಮದುವೆಯಾದ ಅಳಿಯ!

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿರುವ ಅತ್ಯಂತ ವಿಲಕ್ಷಣ ಅಚ್ಚರಿಯ ಘಟನೆ ವೈರಲ್ ಆಗಿದೆ. ತನಗೆ ಮಗಳನ್ನು ಧಾರೆ ಎರೆದುಕೊಟ್ಟಿದ್ದ ಅತ್ತೆಯ ಮೇಲೆ ಪ್ರೀತಿಯಾಗಿ, ಹೆಂಡತಿಗೆ ವಿಚ್ಛೇದನ ನೀಡಿದ ಮಹಾನುಭಾವನೊಬ್ಬ ಆ ಅತ್ತೆಯನ್ನೇ ಮದುವೆಯಾಗಿರುವ ವಿಚಿತ್ರ ಘಟನೆ ಇಲ್ಲಿ ನಡೆದಿದೆ. ಕೋರ್ಟ್​ನಲ್ಲಿ ಇಬ್ಬರೂ ಮದುವೆಯಾಗಿದ್ದು, ಅಳಿಯನಾಗಿದ್ದ ವ್ಯಕ್ತಿ ಈಗ ಆ ಮಹಿಳೆಯ ಪತಿಯಾಗಿದ್ದಾನೆ.

Viral News: ಹೆಂಡತಿಗೆ ಕೈಕೊಟ್ಟು ಅತ್ತೆಯನ್ನೇ ಮದುವೆಯಾದ ಅಳಿಯ!
Man Marries His Mother In Law
Image Credit source: x

Updated on: Jun 08, 2026 | 7:40 PM

ಕಾನ್ಪುರ, ಜೂನ್ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ ಅತ್ಯಂತ ಅಚ್ಚರಿಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ. ಸದ್ಯ ಈ ವಿಲಕ್ಷಣ ಮದುವೆಯ ವಿಡಿಯೋ (Viral Video) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಳಿಯ ಮತ್ತು ಅತ್ತೆ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ. ಇವರಿಬ್ಬರು ನ್ಯಾಯಾಲಯದಲ್ಲಿ ನೋಂದಾಯಿತ ವಿವಾಹ (ಕೋರ್ಟ್ ಮ್ಯಾರೇಜ್) ಮಾಡಿಕೊಂಡಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದ್ದು, ಕೌಟುಂಬಿಕ ಸಂಬಂಧಗಳ ಪವಿತ್ರತೆಗೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ವಿಲಕ್ಷಣ ಕೌಟುಂಬಿಕ ಬಿಕ್ಕಟ್ಟು ಸದ್ಯ ಕಾನ್ಪುರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಏನಿದು ಘಟನೆ?:

ಕಾನ್ಪುರದ ನಿವಾಸಿಯೊಬ್ಬರಿಗೆ ಕೆಲವು ವರ್ಷಗಳ ಹಿಂದೆ ವಿವಾಹವಾಗಿತ್ತು. ಮದುವೆಯಾದ ಆರಂಭದಲ್ಲಿ ದಂಪತಿಯ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕಾಲಕ್ರಮೇಣ ಪತ್ನಿಯ ತಾಯಿ ಈ ದಂಪತಿಗಳ ಮನೆಗೆ ಆಗಾಗ ಬಂದು ಉಳಿದುಕೊಳ್ಳಲು ಆರಂಭಿಸಿದ್ದರು. ಈ ಸಮಯದಲ್ಲಿ ಅಳಿಯ ಮತ್ತು ಅತ್ತೆಯ ನಡುವೆ ಪ್ರೇಮಾಂಕುರವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Video: ಕೇಕ್ ತೆಗೆದುಕೊಂಡು ಅತ್ತೆ ಮನೆಗೆ ಹೋಗಿ ನನ್ನ ಹೆಂಡ್ತಿನಾ ವಾಪಸ್‌ ಕಳಿಸಿ ಎಂದ ಅಳಿಯ

ಅತ್ತೆಯೊಂದಿಗಿನ ಸಂಬಂಧ ದಿನದಿಂದ ದಿನಕ್ಕೆ ಆಳವಾಗುತ್ತಿದ್ದಂತೆ, ಆ ವ್ಯಕ್ತಿ ತನ್ನ ಪತ್ನಿಯಿಂದ ದೂರವಾಗಲು ನಿರ್ಧರಿಸಿದ್ದ. ಕೌಟುಂಬಿಕ ಕಲಹ ಹಾಗೂ ಭಿನ್ನಾಭಿಪ್ರಾಯಗಳ ನೆಪವೊಡ್ಡಿ ಆತ ನ್ಯಾಯಾಲಯದ ಮೂಲಕ ತನ್ನ ಪತ್ನಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡಿದ್ದ. ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ, ಆ ವ್ಯಕ್ತಿ ತನ್ನ ಮಾಜಿ ಪತ್ನಿಯ ತಾಯಿಯನ್ನು ಅಂದರೆ ತನ್ನ ಅತ್ತೆಯನ್ನು ಮದುವೆಯಾಗಲು ನಿರ್ಧರಿಸಿದ್ದ. ಇಬ್ಬರೂ ಒಮ್ಮತದಿಂದ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ವಿಚಿತ್ರವಾದ ಮದುವೆಗೆ ಕುಟುಂಬದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಲಿಯುಗದ ‘ಶ್ರವಣ ಕುಮಾರ’; 90 ವರ್ಷದ ಅತ್ತೆಯನ್ನು ತಲೆ ಮೇಲೆ ಹೊತ್ತು 260 ಕಿ.ಮೀ ಪಾದಯಾತ್ರೆ ಮಾಡಿದ ಗಾಯಕಿ!

ಈ ಫೋಟೋ ಮತ್ತು ವಿಡಿಯೋ ಎಕ್ಸ್ (ಟ್ವಿಟರ್)ನಲ್ಲಿ ವೈರಲ್ ಆಗಿದ್ದು, “ತಾಯಿಯೇ ತನ್ನ ಸ್ವಂತ ಮಗಳ ಸಂಸಾರವನ್ನು ಹೇಗೆ ಮುರಿಯಬಹುದು? ಈಕೆ ತಾಯಿ ಎಂದು ಕರೆಸಿಕೊಳ್ಳಲು ಲಾಯಕ್ಕಿಲ್ಲ” ಎಂಬ ಕ್ಯಾಪ್ಷನ್ ನೀಡಿ ಹಂಚಿಕೊಳ್ಳಲಾಗಿದೆ. ಇವರಿಬ್ಬರ ಈ ವರ್ತನೆ ಕೌಟುಂಬಿಕ ಸಂಬಂಧಗಳ ವ್ಯಾಖ್ಯಾನಕ್ಕೇ ಮಸಿ ಬಳಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನ ಸ್ವಂತ ಮಗಳ ಸಂಸಾರವನ್ನು ಹಾಳುಗೆಡವಿ ಒಬ್ಬ ತಾಯಿಗೆ ಏನು ಸಿಗಲು ಸಾಧ್ಯ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಈ ಮಹಿಳೆಯು ಮಗಳು ಮತ್ತು ಗಂಡನ ಮನೆಯವರನ್ನು ಧಿಕ್ಕರಿಸಿ ತನ್ನ ಅಳಿಯನೊಂದಿಗೆ ಮನೆಯಿಂದ ಓಡಿಹೋಗಿ, ನಂತರ ಕೋರ್ಟ್‌ನಲ್ಲಿ ಮದುವೆಯಾಗಿದ್ದಾಳೆ ಎಂದು ವರದಿಯಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Mon, 8 June 26

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us