AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನೋಟಿನ ಮಾಲೆಯಿಂದ ಹಣ ಎಗರಿಸಿದ ಕಳ್ಳನನ್ನು ಬೆನ್ನಟ್ಟಿ ಹಿಡಿದ ವರ; ವಿಡಿಯೋ ವೈರಲ್

ಹಣ ಕಂಡ್ರೆ ಹೆಣ ಕೂಡಾ ಬಾಯಿ ಬಿಡುತ್ತೇ ಅನ್ನೋ ಹಾಗೆ ಇಲ್ಲೊಬ್ಬ ವ್ಯಕ್ತಿ ರಸ್ತೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರವನ್ನು ಕಂಡು ಆ ಹಾರದಿಂದ ಒಂದೆರಡು ನೋಟುಗಳನ್ನು ಎಗರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಇದರಿಂದ ಸಿಟ್ಟಿಗೆದ್ದ ವರ ಆ ಖದೀಮನನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡಿ ಆತನಿಗೆ ಹಿಗ್ಗಾಮುಗ್ಗ ಥಳಿಸಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ನೋಟಿನ ಮಾಲೆಯಿಂದ ಹಣ ಎಗರಿಸಿದ ಕಳ್ಳನನ್ನು ಬೆನ್ನಟ್ಟಿ ಹಿಡಿದ ವರ; ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Nov 25, 2024 | 6:11 PM

Share

ಹಣ ಕಂಡರೆ ಹೆಣ ಕೂಡಾ ಬಾಯಿ ಬಿಡುತ್ತೆ ಎಂಬ ಮಾತೊಂದಿದೆ. ಹಣದ ಮಹಿಮೆಯೇ ಅಂಥದ್ದು, ಬಿಟ್ಟಿ ಸಿಗುವ ದುಡ್ಡಿಗಾಗಿ ಈ ಜನ ಕಳ್ಳತನ, ಕೊಲೆ ಮಾಡೋದಕ್ಕೂ ತಯಾರಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಬಿಟ್ಟಿ ಹಣಕ್ಕೆ ಆಸೆ ಪಟ್ಟು ಸರಿಯಾಗಿ ಗೂಸಾ ತಿಂದಿದ್ದಾನೆ. ಹೌದು ರಸ್ತೆಯಲ್ಲಿ ಕುದುರೆ ಸವಾರಿಯಲ್ಲಿ ಹೋಗ್ತಿದ್ದ ವರನ ಕೊರಳಲ್ಲಿ ಗರಿಗರಿ ನೋಟಿನ ಹಾರವನ್ನು ನೋಡಿದ ಆ ವ್ಯಕ್ತಿ ಸಿಕ್ಕಿದ್ದೇ ಚಾನ್ಸ್‌ ಎನ್ನುತ್ತಾ ನೋಟುಗಳನ್ನು ಎಗರಿಸಿದ್ದಾನೆ. ಇದರಿಂದ ಕೋಪಗೊಂಡ ವರ ಕುದುರೆಯಿಂದ ಕೆಳಗಿಳಿದು ಹಣ ಕದ್ದ ಖದೀಮನನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡಿ, ಆತನಿಗೆ ಸರಿಯಾಗಿ ಗೂಸಾ ಕೊಟ್ಟಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದು, ವರ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಕಳ್ಳನೊಬ್ಬ ಮದುಮಗನ ಕೊರಳಲ್ಲಿದ್ದ 50 ರೂಪಾಯಿನ ನೋಟಿನ ಹಾರದಿಂದ ಒಂದೆರಡು ನೋಟನ್ನು ಎಗರಿಸಿ ಗಾಡಿಯಲ್ಲಿ ಪರಾರಿಯಾಗಿದ್ದಾನೆ. ಇದರಿಂದ ಕೋಪಗೊಂಡ ಮದುಮಗ ಕುದುರೆಯಿಂದ ಕೆಳಗಿಳಿದು, ಕಳ್ಳನನ್ನು ಬೆನ್ನಟ್ಟಿ ಆತನನನ್ನು ಹಿಡಿದು ಹೆದ್ದಾರಿಯಲ್ಲಿಯೇ ಆತನಿಗೆ ಹಿಗ್ಗಾಮುಗ್ಗ ಥಳಿಸಿ ಗ್ರಹಚಾರ ಬಿಡಿದಿದ್ದಾನೆ.

ನರೇಂದ್ರ ಪ್ರತಾಪ್‌ (hindipatrakar) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಮದುಮಗ ನೋಟಿನ ಹಾರದಿಂದ ಹಣ ಕದ್ದ ಕಳ್ಳನ ಗಾಡಿಯನ್ನು ಫಿಲ್ಮಿ ಸ್ಟೈಲ್‌ನಲ್ಲಿ ಚೇಸ್‌ ಮಾಡುವಂತಹ ದೃಶ್ಯವನ್ನು ಕಾಣಬಹುದು. ಮದುಮಗ ಸಿನೆಮಾ ಹೀರೋನಂತೆ ಸಾಹಸ ಮಾಡಿ ಹಾಗೋ ಹೀಗೋ ಗಾಡಿಯೊಳಗೆ ನುಗ್ಗಿ, ಖದೀಮನನ್ನು ಗಾಡಿಯಿಂದ ನಡು ರಸ್ತೆಗೆ ದರದರನೇ ಎಳೆದೊಯ್ದು ತನ್ನ ಸ್ನೇಹಿತರ ಜೊತೆ ಸೇರಿ ಆತನಿಗೆ ಸರಿಯಾಗಿ ಗೂಸಾ ಕೊಟ್ಟಿದ್ದಾನೆ.

ಇದನ್ನೂ ಓದಿ:ಹುಲಿ ಘರ್ಜನೆ ಕೇಳಿ ಮರವೇರಿ ಕುಳಿತ ಫಾರೆಸ್ಟ್‌ ಗಾರ್ಡ್; ಮುಂದೇನಾಯ್ತು ನೋಡಿ…

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 2.7 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಒಂದೆರಡು ನೋಟಿಗಾಗಿ ವರ ಪ್ರಾಣವನ್ನು ಪಣಕ್ಕಿಡಬಾರದಿತ್ತುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼವಧುವಿನ ಭವಿಷ್ಯ ಅಪಾಯದಲ್ಲಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!