AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 16 ಗಂಟೆಗಳಲ್ಲಿ 107 ಕಣ್ಣಿನ ಆಪರೇಷನ್ ಮಾಡಿ ಹೊಸ ದಾಖಲೆ ಬರೆದ ಡಾಕ್ಟರ್!

2022ರ ಫೆಬ್ರವರಿ 25ರಂದು ಬೆಳಿಗ್ಗೆ 6ರಿಂದ ರಾತ್ರಿ 10.30ರವರೆಗೆ ನಿರಂತರವಾಗಿ 16 ಗಂಟೆ 30 ನಿಮಿಷಗಳ ಅವಧಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು.

Viral News: 16 ಗಂಟೆಗಳಲ್ಲಿ 107 ಕಣ್ಣಿನ ಆಪರೇಷನ್ ಮಾಡಿ ಹೊಸ ದಾಖಲೆ ಬರೆದ ಡಾಕ್ಟರ್!
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 03, 2022 | 2:13 PM

Share

ಪ್ರಯಾಗರಾಜ್: ಕೇವಲ 16 ಗಂಟೆಯೊಳಗೆ 107 ಕಣ್ಣುಗಳ ಆಪರೇಷನ್ ಮಾಡುವ ಮೂಲಕ ಪ್ರಾದೇಶಿಕ ನೇತ್ರವಿಜ್ಞಾನ ಸಂಸ್ಥೆಯ ನಿರ್ದೇಶಕ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಎಂಎಲ್‌ಎನ್ ವೈದ್ಯಕೀಯ ಕಾಲೇಜಿನ (ಎಂಎಲ್‌ಎನ್‌ಎಂಸಿ) ಪ್ರಾಂಶುಪಾಲ ಡಾ. ಎಸ್.ಪಿ. ಸಿಂಗ್ ಹೊಸ ದಾಖಲೆ ಬರೆದಿದ್ದಾರೆ. ಅವರು ಹದಿನಾರೂವರೆ ಗಂಟೆಯ ಅವಧಿಯಲ್ಲಿ ಇಂಟ್ರಾಕ್ಯುಲರ್ ಲೆನ್ಸ್ (ಐಒಎಲ್) ಇಂಪ್ಲಾಂಟ್‌ನೊಂದಿಗೆ 107 ಫಾಕೊಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

2022ರ ಫೆಬ್ರವರಿ 25ರಂದು ಬೆಳಿಗ್ಗೆ 6ರಿಂದ ರಾತ್ರಿ 10.30ರವರೆಗೆ ನಿರಂತರವಾಗಿ 16 ಗಂಟೆ 30 ನಿಮಿಷಗಳ ಅವಧಿಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು. 1 ವಾರ ಅಬ್ಸರ್ವೇಷನ್​ನಲ್ಲಿದ್ದ ಎಲ್ಲಾ ರೋಗಿಗಳು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಡಾ. ಸಿಂಗ್ ಮಾಹಿತಿ ನೀಡಿದ್ದಾರೆ.

“ಒಂದೇ ಬಾರಿಗೆ ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದರಿಂದ ನನಗೆ ಸಂತೋಷವಾಗಿದೆ. ಇದು ಕಿರಿಯ ಸರ್ಜನ್​ಗಳಿಗೆ ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದು ಭಾವಿಸುತ್ತೇನೆ” ಎಂದು ಡಾ. ಸಿಂಗ್ ಸಂತಸ ಹಂಚಿಕೊಂಡಿದ್ದಾರೆ. ಐ ಸರ್ಜನ್ ಡಾ. ಸಿಂಗ್ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ಪತ್ರ ಬರೆದು, ಅಗತ್ಯವಿರುವ ಪುರಾವೆಗಳೊಂದಿಗೆ ತಮ್ಮ ಸಾಧನೆಯ ಬಗ್ಗೆ ತಿಳಿಸಿದ್ದಾರೆ

ಇದಕ್ಕೂ ಮೊದಲು, ನವ ದೆಹಲಿಯ ಸೇನಾ ಆಸ್ಪತ್ರೆಯ ಸಂಶೋಧನೆ ಮತ್ತು ರೆಫರಲ್‌ನ ಆಗಿನ ಬ್ರಿಗೇಡಿಯರ್ (ಡಾ) ಜೆಕೆಎಸ್ ಪರಿಹಾರ್ ಅವರು ಅಕ್ಟೋಬರ್ 2011ರಲ್ಲಿ ಪೂರ್ವ ಲಡಾಖ್‌ನಲ್ಲಿ 34 ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿದ್ದರು.

ಇದನ್ನೂ ಓದಿ: Mahashivratri: 10 ನಿಮಿಷದಲ್ಲಿ 11.71 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನಿಸ್ ದಾಖಲೆ ಬರೆದ ಉಜ್ಜಯಿನಿ

Viral Video: ಹೆಲಿಕಾಪ್ಟರ್​​ ಕೆಳಗೆ ನೇತಾಡುತ್ತಾ ಪುಲ್ ಅಪ್ಸ್​ ಮಾಡಿ ದಾಖಲೆ ಬರೆದ ಯುವಕ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!