AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ತ್ರಿವಳಿ ತಲಾಖ್​​ನಿಂದ ನೊಂದು ಹಿಂದೂ ಯುವಕನೊಂದಿಗೆ ಮದುವೆಯಾದ ಮುಸ್ಲಿಂ ಮಹಿಳೆ

ಹಲವು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ಗಂಡ ಒಂದು ಸಣ್ಣ ಜಗಳಕ್ಕೆ ತ್ರಿವಳಿ ತಲಾಖ್​​​​ ನೀಡಿ ನಡು ರಸ್ತೆಯಲ್ಲೇ ಕೈ ಬಿಟ್ಟು ಹೋಗಿದ್ದರಿಂದ ಮನನೊಂದಿದ್ದ ಮಹಿಳೆ. ಇದೀಗ ಹಿಂದು ಯುವಕನೊಂದಿಗೆ ದೇವಾಲಯವೊಂದರಲ್ಲಿ ಮದುವೆಯಾಗಿದ್ದಾಳೆ.

Uttar Pradesh: ತ್ರಿವಳಿ ತಲಾಖ್​​ನಿಂದ ನೊಂದು ಹಿಂದೂ ಯುವಕನೊಂದಿಗೆ ಮದುವೆಯಾದ ಮುಸ್ಲಿಂ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 17, 2024 | 10:36 AM

Share

ಉತ್ತರ ಪ್ರದೇಶ: ಪತಿ ತ್ರಿವಳಿ ತಲಾಖ್ ನೀಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ಪತಿ ಒಂದು ಸಣ್ಣ ಕಾರಣಕ್ಕೆ ತ್ರಿವಳಿ ತಲಾಖ್​​​​ ನೀಡಿ ಬಿಟ್ಟು ಹೋಗಿದ್ದರಿಂದ ಮನನೊಂದಿದ್ದ ಮಹಿಳೆ. ಇದೀಗ ಹಿಂದು ಯುವಕನೊಂದಿಗೆ ದೇವಾಲಯವೊಂದರಲ್ಲಿ ಸಪ್ತಪದಿ ತುಳಿದಿದ್ದಾಳೆ. ಇದೀಗ ರುಬಿನಾದಿಂದ ಪ್ರೀತಿ ಆಗಿ ಹೆಸರನ್ನೂ ಕೂಡ ಬದಲಾಯಿಸಿಕೊಂಡಿದ್ದಾಳೆ.

ಉತ್ತರಾಖಂಡದ ಹಲ್ದ್ವಾನಿ ನಿವಾಸಿಯ ಜೊತೆ ರುಬಿನಾ ಪ್ರೇಮ ಸಂಬಂಧ ಹೊಂದಿದ್ದಳು. ಸುಮಾರು ಒಂಬತ್ತು ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರು. ಮದುವೆಯಾದ ಕೆಲವು ವರ್ಷಗಳ ನಂತರ ದಂಪತಿಗಳ ನಡುವೆ ಜಗಳ ಪ್ರಾರಂಭವಾಯಿತು. ವರದಿಗಳ ಪ್ರಕಾರ ಆಕೆಯ ಪತಿ ಆಕೆಯನ್ನು ಥಳಿಸುತ್ತಿದ್ದ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಒಂದು ವಾರದ ಹಿಂದೆ, ಪತಿಯ ಜೊತೆ ಮತ್ತೆ ಜಗಳವಾಗಿದೆ, ನಂತರ ಆಕೆಯ ಪತಿ ಆಕೆಯ ಮೇಲೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಮಹಿಳೆ ಹೇಳಿದ್ದಾಳೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ಬಳಿಕ ಬರೇಲಿಯ ಹೊರವಲಯದಲ್ಲಿರುವ ನವಾಬ್‌ಗಂಜ್‌ನ ನಿವಾಸಿ ಪ್ರಮೋದ್‌ ಕಶ್ಯಪ್​​ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ರುಬೀನಾ ಆತನನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾನೆ. ಇದರಂತೆ ಮಥುರಾ ಮೂಲದ ರುಬೀನಾ ಮತ್ತು ಪ್ರಮೋದ್‌ ಬರೇಲಿಗೆ ಹೋಗಿ ಹಿಂದೂ ಸಂಪ್ರದಾಯಗಳ ಮೂಲಕ ಮದುವೆಯಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು