AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಕ್ಕೆ ಎಂಟು ದಿನ ಇರುವಾಗಲೇ ಸಹೋದರರೊಂದಿಗೆ ಪರಾರಿಯಾದ ಸಹೋದರಿಯರು, ತನಿಖೆಯಲ್ಲಿ ರಿವೀಲ್ ಆಯ್ತು ಅಸಲಿ ವಿಚಾರ

ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಎಷ್ಟೋ ಮದುವೆಗಳು ರದ್ದಾಗಿರುವ ಪ್ರಕರಣಗಳು ಬೆಳಕಿಗೆ ಬರುತ್ತದೆ. ಆದರೆ ಇಲ್ಲಿ ಇಬ್ಬರೂ ಸಹೋದರಿಯರಿಗೆ ಮದುವೆ ನಿಶ್ಚಯವಾಗಿತ್ತು. ಹುಡುಗಿಯರ ಕುಟುಂಬವು ಮದುವೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸಂಬಂಧಿಕರಿಗೂ ಕಾರ್ಡ್‌ಗಳನ್ನು ವಿತರಿಸಿದ್ದರು. ಆದರೆ ವಿವಾಹಕ್ಕೆ ಕೆಲವೇ ಕೆಲವು ದಿನ ಇರುವಾಗಲೇ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಇಬ್ಬರೂ ಸಹೋದರಿಯರು ತಮ್ಮ ಸಹೋದರರೊಂದಿಗೆ ಪರಾರಿಯಾಗಿದ್ದಾರೆ. ಹಾಗಾದ್ರೆ ಏನಿದು ಪ್ರಕರಣ? ಎನ್ನುವ ಮಾಹಿತಿ ಇಲ್ಲಿದೆ.

ವಿವಾಹಕ್ಕೆ ಎಂಟು ದಿನ ಇರುವಾಗಲೇ ಸಹೋದರರೊಂದಿಗೆ ಪರಾರಿಯಾದ ಸಹೋದರಿಯರು, ತನಿಖೆಯಲ್ಲಿ ರಿವೀಲ್ ಆಯ್ತು ಅಸಲಿ ವಿಚಾರ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 16, 2025 | 6:36 PM

ಉತ್ತರ ಪ್ರದೇಶ, ಏಪ್ರಿಲ್ 16: ಮದುವೆ (marriage) ಮಂಟಪದಲ್ಲಿ ಮದುವೆ ಮುರಿದು ಬಿದ್ದಂತಹ ಘಟನೆಗಳು, ಮದುವೆ ಇಷ್ಟ ಇಲ್ಲದೇ ವಧು (bride) ಅಥವಾ ವರ (groom) ಪರಾರಿಯಾದ ಪ್ರಕರಣಗಳ ಬಗ್ಗೆ ಒಂದಷ್ಟು ಸುದ್ದಿಗಳನ್ನು ನೀವು ಕೇಳಿರುತ್ತೀರಿ. ಅದರಲ್ಲಿಯೂ ಮನೆಯವರ ಬಲವಂತಕ್ಕೆ ಮದುವೆಗೆ ಒಪ್ಪಿ ಕೊನೆ ಕ್ಷಣದಲ್ಲಿ ಮದುವೆ ಮಂಟಪದಿಂದ ಎಸ್ಕೇಪ್ (escape) ಆಗುವ ಪ್ರಕರಣ ಗಳು ನಡೆಯುತ್ತಿರುತ್ತದೆ. ಆದರೆ ಇದೀಗ ಮದುವೆಗೆ ಎಂಟು ದಿನ ಇರುವಾಗಲೇ ಸಹೋದರಿ (sisters) ಯರಿಬ್ಬರೂ ಇಬ್ಬರು ಯುವಕರೊಂದಿಗೆ ಪರಾರಿಯಾದ ಘಟನೆಯೂ ಉತ್ತರ ಪ್ರದೇಶ (uttara pradesh) ದ ಗ್ರೇಟರ್ ನೋಯ್ಡಾ (greater noida) ದಲ್ಲಿ ನಡೆದಿದೆ.

ಹೌದು, ಮನೆಯಲ್ಲಿ ಗುರು ಹಿರಿಯರು ತಮ್ಮ ಇಬ್ಬರೂ ಪುತ್ರಿಯರಿಗೆ ಮದುವೆ ನಿಶ್ಚಯಿಸಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಬ್ಬರೂ ಸಹೋದರಿಯರು ಗುರು ಹಿರಿಯರು ನೋಡಿದ್ದ ವರರೊಂದಿಗೆ ಏಪ್ರಿಲ್ 14 ರಂದು ಮದುವೆಯಾಗಬೇಕಿತ್ತು. ವರರು ಇವರಿಗಿಂತ ವಯಸ್ಸಿನಲ್ಲಿ ದೊಡ್ಡವರಾಗಿದ್ದು, ಇವರಿಬ್ಬರಿಗೂ ಬೇರೆ ಯುವಕರ ಜೊತೆಗೆ ಪ್ರೇಮವಿತ್ತು. ಹೀಗಾಗಿ ಈ ಮದುವೆ ಇಬ್ಬರಿಗೂ ಇಷ್ಟವಿರಲಿಲ್ಲ. ಈ ಕಾರಣದಿಂದಾಗಿ ವಿವಾಹಕ್ಕೆ ಎಂಟು ದಿನ ಇರುವಾಗಲೇ ಇಬ್ಬರೂ ಪರಾರಿಯಾಗಿದ್ದಾರೆ. ಕುಟುಂಬಸ್ಥರು ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ : ಚಲಿಸುವ ರೈಲಿಗೆ ಸೆಡ್ಡು ಹೊಡೆದು ಓಟಕ್ಕೆ ಇಳಿದ ಫಿಟ್ ನೆಸ್ ಇನ್ಫ್ಲುಯೆನ್ಸರ್, ವಿಡಿಯೋ ವೈರಲ್

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂಭಾಲ್ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಇಬ್ಬರೂ ಸಹೋದರಿಯರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಅವರೊಂದಿಗೆ ಇಬ್ಬರೂ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸಿದ ವೇಳೆ ಈ ಯುವತಿಯರು ತಮ್ಮ ಸೋದರ ಸಂಬಂಧಿಯ ಸಹೋದರರನ್ನು ಮದುವೆಯಾಗಿದ್ದಾರೆ ಎನ್ನುವುದು ವಿಚಾರ ತಿಳಿದು ಬಂದಿದೆ.

ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಈ ಇಬ್ಬರೂ ಸಹೋದರಿಯರು ತಾವು ಸಹೋದರರನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ಅವರೊಂದಿಗೆ ಇರಲು ಇಷ್ಟ ಪಡುತ್ತೇವೆ ಎಂದಿದ್ದಾರಂತೆ. ತಮ್ಮ ತಂದೆ ತಮ್ಮ ಮದುವೆಯನ್ನು ನಿಶ್ಚಯಿಸಿದ ಸ್ಥಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದು ಈ ಮದುವೆ ಇಷ್ಟವಿಲ್ಲದ ಕಾರಣ ಈ ರೀತಿ ಮಾಡಿದೆವು ಎಂದಿದ್ದಾರೆ. ಇನ್ನು ಮಂಗಳವಾರ ಇಬ್ಬರೂ ಯುವತಿಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸಾಕ್ಷ್ಯಗಳನ್ನು ಅಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್ ಸುದ್ದಿ ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ