Uttar Pradesh: ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಮೃತ ಮಹಿಳೆಯನ್ನು ಸಾರಿಕಾ(24) ಎಂದು ಗುರುತಿಸಲಾಗಿದ್ದು, ಈಕೆ 2021 ರಲ್ಲಿ ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಪತಿಯ ಗುಟ್ಕಾ ಜಗಿಯುವ ಚಟಕ್ಕೆ ಬೇಸತ್ತು ಸಾಕಷ್ಟು ಸಲ ಆತನೊಂದಿಗೆ ಜಗಳವಾಡಿದ್ದಳು. ಇತ್ತೀಚಿಗಷ್ಟೇ ಕರ್ವಾ ಚೌತ್ನಂದು ಮತ್ತೆ ಜಗಳ ನಡೆದಿದೆ. ಪೂಜಾ ವಿಧಿವಿಧಾನ ಮುಗಿಸಿ ರಾತ್ರಿ 12 ಗಂಟೆ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Uttar Pradesh: ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ
Follow us
ಅಕ್ಷತಾ ವರ್ಕಾಡಿ
|

Updated on: Oct 22, 2024 | 10:52 AM

ಹಮೀರ್‌ಪುರ: ಗುಟ್ಕಾ ಸೇವನೆಯ ವಿಚಾರವಾಗಿ ಗಂಡ ಹೆಂಡತಿ ನಡುವೆ ಜಗಳ ಪ್ರಾರಂಭವಾಗಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕರ್ವಾ ಚೌತ್ನಂದು ದಿನವಿಡೀ ಉಪವಾಸದಲ್ಲಿದ್ದ ಮಹಿಳೆ ಸಂಜೆಯ ವೇಳೆ ಪತ್ನಿಗೆ ಪೂಜೆ ಮಾಡಲು ಬಂದಿದ್ದಾಳೆ. ಈ ವೇಳೆಯೂ ಆತ ಗುಟ್ಕಾ ಜಗಿಯುತ್ತಿದನ್ನು ಕಂಡು ಬೇಸರಗೊಂಡಿದ್ದಾಳೆ. ಜೊತೆಗೆ ಈ ವಿಚಾರವಾಗಿ ಜಗಳ ನಡೆದಿದ್ದು, ಬಳಿಕ ಪೂಜಾ ವಿಧಿವಿಧಾನ ಮುಗಿಸಿ ರಾತ್ರಿ 12 ಗಂಟೆ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಭಾನುವಾರ (ಅಕ್ಟೋಬರ್ 20) ರಾತ್ರಿ ಹಮೀರ್‌ಪುರದ ಜಲಾಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಲಾಲ್‌ಪುರ ಗ್ರಾಮದ ಸರಿಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸಾರಿಕಾ(24) ಎಂದು ಗುರುತಿಸಲಾಗಿದ್ದು, ಈಕೆ ಜಲಾಲ್‌ಪುರ ನಿವಾಸಿಯಾದ ಸುಲಭ್ ನಾಮದೇವ್‌ನನ್ನು 2021 ರಲ್ಲಿ ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಪತಿಯ ಗುಟ್ಕಾ ಜಗಿಯುವ ಚಟಕ್ಕೆ ಬೇಸತ್ತು ಸಾಕಷ್ಟು ಸಲ ಆತನೊಂದಿಗೆ ಜಗಳವಾಡಿದ್ದಳು.

ಇದನ್ನೂ ಓದಿ: ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾದ ಬಿಜೆಪಿ ಕಾರ್ಪೊರೇಟರ್ ಪುತ್ರ

ಇತ್ತೀಚಿಗಷ್ಟೇ ಕರ್ವಾ ಚೌತ್ನಂದು ಮತ್ತೆ ಜಗಳ ನಡೆದಿದೆ. ಬಳಿಕ ಪತಿ ಪತ್ನಿ ಇಬ್ಬರೂ ರಾತ್ರಿಯ ಊಟವನ್ನೂ ಮಾಡದೆ ಬೇರೆ ಬೇರೆ ಕೋಣೆಗಳಲ್ಲಿ ಮಲಗಿದ್ದರು. ಸೋಮವಾರ ಬೆಳಗ್ಗೆ ಪತಿ ಎದ್ದು ನೋಡಿದಾಗ ಪತ್ನಿ ಮಲಗುವ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ