ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು

ತಂದೆಯ ಕೈಯಿಂದ ಜಾರಿದ ಹಸುಗೂಸನ್ನು ಎತ್ತಿದ ಕೋತಿ ಮೂರು ಅಂತಸ್ತಿನ ಕಟ್ಟಡದಿಂದ ಕೆಳಗೆ ಎಸೆದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಾಮಕರಣದ ಸಿದ್ಧತೆಯಲ್ಲಿದ್ದ ಕುಟುಂಬವು ಇದೀಗ 4 ತಿಂಗಳ ಹಸುಗೂಸನ್ನು ಕಳೆದುಕೊಂಡು ದುಃಖತಪ್ತವಾಗಿದೆ.

ತಂದೆ-ತಾಯಿಯ ಎದುರೇ ಟೆರೇಸ್ ಮೇಲಿಂದ ನಾಲ್ಕು ತಿಂಗಳ ಮಗುವನ್ನು ಎಸೆದ ಕೋತಿ; ಸ್ಥಳದಲ್ಲೇ ಸಾವನ್ನಪ್ಪಿದ ಮಗು
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Jul 18, 2022 | 12:31 PM

ಬರೇಲಿ: ಕೆಲವೊಮ್ಮೆ ಮಂಗಗಳು ಅತಿರೇಖದಿಂದ ವರ್ತಿಸಿ ಜನರಿಗೆ ತೊಂದರೆಯನ್ನು ನೀಡುತ್ತವೆ. ಇಂತಹ ಅನೇಕ ಘಟನೆಗಳು ನಡೆದಿದ್ದು, ಇದೀಗ ಉತ್ತರಪ್ರದೇಶದ ಬರೇಲಿ ಗ್ರಾಮಾಂತರ ಪ್ರದೇಶದಲ್ಲಿ ಮಗುವಿನ ಸಾವಿಗೆ ಕಾರಣವಾಗಿದೆ. ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋದ ಮಂಗವೊಂದು, ನಾಲ್ಕು ತಿಂಗಳ ಗಂಡು ಮಗುವನ್ನು ಕೆಳಗೆ ಎಸದ ಘಟನೆ ನಡೆದಿದ್ದು, ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಈ ಬಗ್ಗೆ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.

ವರದಿಯ ಪ್ರಕಾರ, ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಮತ್ತು ಅವರ ಪತ್ನಿ ಶುಕ್ರವಾರ ಸಂಜೆ ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದಿವೆ. ದಂಪತಿಗಳು ಮಂಗಗಳನ್ನು ಓಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಏಕೆಂದರೆ ಕೋತಿಗಳ ಹಿಂಡು ಅವರನ್ನ ಸತ್ತಿವೆ.

ಕೋತಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನದಲ್ಲಿ ನಿರ್ದೇಶ್ ಅವರ ಕೈಯಿಂದ ಮಗು ಜಾರಿದೆ. ಈ ವೇಳೆ ಮಗುವನ್ನು ನಿರ್ದೇಶ್ ಅವರು ಎತ್ತಿಕೊಳ್ಳಲು ಮುಂದಾಗುತ್ತಿದ್ದಂತೆ ಕೂತಿ ಮಗುವನ್ನು ಹಿಡಿದು ಛಾವಣಿಯಿಂದ ಕಳೆಗೆ ಎಸೆದಿದೆ. ಪರಿಣಾಮವಾಗಿ ಮಗು ನೆಲಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವನ್ನಪ್ಪಿದೆ.

ನಿರ್ದೇಶ್ ಅವರಿಗೆ 7 ವರ್ಷದ ಮಗಳಿದ್ದರು. ಅಲ್ಲದೆ 4ತಿಂಗಳ ಮಗುವಿಗೆ ಸ್ವಲ್ಪ ದಿನದಲ್ಲಿಯೇ ನಾಮಕರಣ ಮಾಡಲು ಕಾರ್ಯಕ್ರಮ ನಡೆಸಲು ಸಿದ್ಧತೆಗಳ್ನು ನಡೆಸುತ್ತಿದ್ದರು. ಅಷ್ಟರೊಳಗೆ ಈ ಅವಘಡ ಸಂಭವಿಸಿದ್ದು, ಕುಟುಂಬವು ದುಃಖತಪ್ತವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Published On - 12:31 pm, Mon, 18 July 22

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​