AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಳೆಯ ಚಪ್ಪಲಿ ಹಾಕೊಂಡು ಆರ್ಡರ್ ತಲುಪಿಸಲು ಬಂದ ಡೆಲಿವರಿ ಬಾಯ್‌ಗೆ ಶೂ ಕೊಟ್ಟ ವ್ಯಕ್ತಿ

ಎಲ್ಲರ ಬದುಕು ಒಂದೇ ರೀತಿ ಇರಲ್ಲ. ಹೀಗಿರುವಾಗ ಇನ್ನೊಬ್ಬರ ಕಷ್ಟಕ್ಕೆ ಸಹಾಯ ಮಾಡುವ ದೊಡ್ಡ ಮನಸ್ಸು ಬೇಕು. ಇಲ್ಲೊಬ್ಬ ವ್ಯಕ್ತಿ ಸಹಾಯ ಮಾಡುವ ಗುಣದಿಂದಲೇ ನೆಟ್ಟಿಗರ ಗಮನ ಸೆಳೆದಿದ್ದಾರೆ. ಹಳೆಯ ಸ್ಲಿಪ್ಪರ್ ಹಾಕಿದ್ದ ಡೆಲಿವರಿ ಬಾಯ್‌ಗೆ ಅಡಿಡಾಸ್ ಶೂ ಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Video: ಹಳೆಯ ಚಪ್ಪಲಿ ಹಾಕೊಂಡು ಆರ್ಡರ್ ತಲುಪಿಸಲು ಬಂದ ಡೆಲಿವರಿ ಬಾಯ್‌ಗೆ ಶೂ ಕೊಟ್ಟ ವ್ಯಕ್ತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Sep 16, 2026 | 2:28 PM

Share

ಉತ್ತರಾಖಂಡ, ಸೆಪ್ಟೆಂಬರ್ 16: ಈಗಿನ ಕಾಲದಲ್ಲಿ ಮಾನವೀಯತೆ (humanity) ಅನ್ನೋದೇ ಇಲ್ಲ. ಆದರೆ, ಕೆಲವರಂತೂ ಏನು ಪ್ರತಿಫಲ ಅಪೇಕ್ಷಿಸದೇ ಇನ್ನೊಬ್ಬರಿಗೆ ಸಹಾಯ ಮಾಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಹೃದಯ ಸ್ಪರ್ಶಿ ದೃಶ್ಯಗಳು ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಹೌದು, ಈ ಘಟನೆ ಉತ್ತರಾಖಂಡದಲ್ಲಿ ನಡೆದಿದೆ ಎನ್ನಲಾಗಿದೆ. ಹಳೆಯ ಸ್ಲಿಪ್ಪರ್ ತೊಟ್ಟಿದ್ದ ಡೆಲಿವರಿ ಬಾಯ್‌ಗೆ ತನ್ನ ಅಡಿಡಾಸ್ ಶೂ ಕೊಟ್ಟು ಹೃದಯ ಶ್ರೀಮಂತಿಕೆ ಮೆರೆದಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಡೆಲಿವರಿ ಬಾಯ್‌ಗೆ ಶೂ ಕೊಟ್ಟ ವ್ಯಕ್ತಿ

ಅಮನ್ ಶರ್ಮಾ (Aman Sharma) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ನನಗಿಂತ ಹೆಚ್ಚು ಈ ಶೂಗಳ ಅವಶ್ಯಕತೆ ಆ ಡೆಲಿವರಿ ಬಾಯ್‌ಗಿತ್ತು ಎಂದು ಬರೆದಿರುವುದನ್ನು ಕಾಣಬಹುದು.

ಮಳೆಯಲ್ಲಿ ಒದ್ದೆಯಾದ್ರು ಆರ್ಡರ್ ತಲುಪಿಸಿದ ಡೆಲಿವರಿ ಬಾಯ್

ಝೆಪ್ಟೋ ಕಂಪನಿಯ ಡೆಲಿವರಿ ಬಾಯ್ ಆಗಿದ್ದ ಈ ವ್ಯಕ್ತಿ ಮಳೆಯಲ್ಲಿ ನೆನೆದು ಒದ್ದೆಯಾಗಿದ್ದ. ರೈನ್‌ ಕೋಟ್‌ ಇಲ್ಲದಿದ್ರೂ ಸರಿಯಾದ ಸಮಯಕ್ಕೆ ಸೈಕಲ್‌ನಲ್ಲಿ ಬಂದು ಆರ್ಡರ್ ತಲುಪಿಸಿದ್ದ. ಡೆಲಿವರಿ ಬಾಯ್ ಕಾಲಿಗೆ ಚಪ್ಪಲಿ ಹಾಕಿಕೊಂಡಿದ್ದ ವ್ಯಕ್ತಿಗೆ ಶೂ ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ ಅಂತಹದ್ದೇನಿದೆ?

ಈ ವಿಡಿಯೋದಲ್ಲಿ ಮನೆಯ ಬಾಲ್ಕನಿಯಲ್ಲಿದ್ದ ವ್ಯಕ್ತಿಯೊಬ್ಬ ಕೆಳಗೆ ನಿಂತಿದ್ದ ಡೆಲಿವರಿ ಬಾಯ್‌ನ್ನು ಕರೆದು ಬ್ರೋ, ಶೂಸ್ ಬೇಕಾ? ಒರಿಜಿನಲ್ ಅಡಿಡಾಸ್ ಶೂ ಎಂದು ಕೇಳುವುದನ್ನು ಕಾಣಬಹುದು. ಆ ಬಳಿಕ ಶೂ ಬಾಕ್ಸ್ ತೋರಿಸುತ್ತಾರೆ. ಕೊನೆಗೆ ಡೆಲಿವರಿ ಬಾಯ್‌ಗೆ ಶೂ ಕೊಡುತ್ತಾರೆ. ಶೂಗಳನ್ನು ಪಡೆದು ತನ್ನ ಸೈಕಲ್ ಏರಿ ಹೋಗುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಚಾಲಕನ ಕಷ್ಟ ಅರಿತು ತಾನೇ ಕ್ಯಾಬ್ ಓಡಿಸಿ ಲಖನೌ ತಲುಪಿದ ಪ್ರಯಾಣಿಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಒಳ್ಳೆಯ ಮನಸ್ಸಿಗೆ ಯಾವತ್ತೂ ಒಳ್ಳೆಯದೇ ಆಗಲಿ ಎಂದಿದ್ದಾರೆ. ಇನ್ನೊಬ್ಬರು, ನಿಮ್ಮ ಒಳ್ಳೆತನ ಹೀಗೆಯೇ ಇರಲಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ನನ್ನ ಈ ದಿನದ ಬೆಸ್ಟ್ ವಿಡಿಯೋ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Wed, 16 September 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?