ಉತ್ತರಾಖಂಡ: ಉತ್ತರಾಖಂಡದಲ್ಲಿ (Uttarakhand Flood) ಸುರಿಯುತ್ತಿರುವ ಮಳೆಗೆ 2 ದಿನದಲ್ಲಿ 16 ಜನರು ಸಾವನ್ನಪ್ಪಿದ್ದಾರೆ. ಕೇಂದ್ರ ಸರ್ಕಾರದಿಂದ ರಕ್ಷಣಾ ಕಾರ್ಯಾಚರಣೆಗೆ (Rescue Operation) ಎಲ್ಲ ರೀತಿಯ ಸಹಾಯ ಮಾಡುವುದಾಗಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇದರ ನಡುವೆ ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದ ಆಘಾತಕಾರಿ ವಿಡಿಯೋಗಳು ಟ್ವಿಟ್ಟರ್ನಲ್ಲಿ ಹರಿದಾಡುತ್ತಿವೆ.
ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದು ಭಾರೀ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಆ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣದ ಮೇಲಿನ ಆಸೆಯನ್ನು ಬಿಟ್ಟಾಗಿತ್ತು. ಭೂಕುಸಿತದಿಂದ ಕೊರೆದುಹೋಗಿದ್ದ ಜಾಗದಲ್ಲಿನ ಬಂಡೆಗಳ ನಡುವೆ ಆ ಕಾರು ಸಿಲುಕಿಕೊಂಡಿತ್ತು. ಆ ಕಾರನ್ನು ಬಾರ್ಡರ್ ರೋಡ್ ಆರ್ಗನೈಸೇಷನ್ (BRO) ಸಿಬ್ಬಂದಿ ಸುರಕ್ಷಿತವಾಗಿ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಭೋರ್ಗರೆದು ಹರಿಯುತ್ತಿದ್ದ ನೀರಿನಿಂದ ಕಾರನ್ನು ಜೆಸಿಬಿಯಲ್ಲಿ ಮೇಲೆತ್ತಿ ಪ್ರಯಾಣಿಕರನ್ನು ಕಾಪಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ.
#WATCH | Uttarakhand: Occupants of a car that was stuck at the swollen Lambagad nallah near Badrinath National Highway, due to incessant rainfall in the region, was rescued by BRO (Border Roads Organisation) yesterday. pic.twitter.com/ACek12nzwF
— ANI (@ANI) October 19, 2021
ಮಳೆಯಲ್ಲಿ ಕೊಚ್ಚಿ ಹೋಗುವಾಗ ಎರಡು ಬಂಡೆಗಳ ನಡುವೆ ಸಿಲುಕಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬದರೀನಾಥ ರಾಷ್ಟ್ರೀಯ ಹೆದ್ದಾರಿಯ ಬಳಿ ಈ ಘಟನೆ ನಡೆದಿದ್ದು, ಕಾರನ್ನು ಯಾವ ರೀತಿ ಸಿನಿಮೀಯವಾಗಿ ರಕ್ಷಣೆ ಮಾಡಲಾಯಿತು ಎಂಬ ವಿಡಿಯೋ ಇಲ್ಲಿದೆ.
#WATCH | An under construction bridge, over a raging Chalthi River in Champawat, washed away due to rise in the water level caused by incessant rainfall in parts of Uttarakhand. pic.twitter.com/AaLBdClIwe
— ANI (@ANI) October 19, 2021
ಉತ್ತರಾಖಂಡದ ಪ್ರವಾಹ ಸ್ಥಿತಿ ಗಂಭೀರವಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿಯೊಂದಿಗೆ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಧಾಮಿ ಪ್ರಧಾನಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ. ಉತ್ತರಾಖಂಡದಲ್ಲಿ ಕಳೆದ ಎರಡು ದಿನಗಳ ಮಳೆಯಲ್ಲಿ ನೇಪಾಳದ ಕಾರ್ಮಿಕರು ಸೇರಿದಂತೆ 16 ಜನರು ಸಾವನ್ನಪ್ಪಿದ್ದಾರೆ. ಹವಾಮಾನ ಸುಧಾರಿಸುವವರೆಗೂ ಹಿಮಾಲಯದ ದೇವಸ್ಥಾನಗಳಿಗೆ ತೆರಳದಂತೆ ಅಧಿಕಾರಿಗಳು ಚಾರ್ಧಾಮ್ ಯಾತ್ರಿಕರಿಗೆ ಸೂಚಿಸಿದ್ದಾರೆ.
#WATCH | Uttarakhand: Nainital Lake overflows and floods the streets in Nainital & enters building and houses here. The region is receiving incessant heavy rainfall. pic.twitter.com/G2TLfNqo21
— ANI (@ANI) October 19, 2021
ಇನ್ನೊಂದು ಘಟನೆಯಲ್ಲಿ, ಚಂಪಾವತ್ ಜಿಲ್ಲೆಯ ಸೆಲ್ಖೋಲಾದಲ್ಲಿ ಭೂಕುಸಿತದಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಹಿಮಾಲಯದ ತಪ್ಪಲಿನ ದೇವಸ್ಥಾನಗಳಿಗೆ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ತಪೋವನ, ಹೃಷಿಕೇಶ, ಗಂಗೋತ್ರಿ, ಯಮುನೋತ್ರಿ, ಬದರಿನಾಥ ಮುಂತಾದ ಸ್ಥಳಗಳಿಗೆ ಭಕ್ತರು ಹಾಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
#WATCH | Uttarakhand: Nainital Lake overflows and floods the streets in Nainital & enters building and houses here. The region is receiving incessant heavy rainfall. pic.twitter.com/G2TLfNqo21
— ANI (@ANI) October 19, 2021
ಹಲ್ದ್ವಾನಿ ಜಿಲ್ಲೆಯ ಗೌಲಾ ನದಿಯ ಮೇಲೆ ಇನ್ನೇನು ಮುರಿದು ಬೀಳುತ್ತಿದ್ದ ಸೇತುವೆಯನ್ನು ದಾಟಲು ಆಚೆ ಕಡೆಯಿಂದ ಬೈಕ್ನಲ್ಲಿ ಬರುತ್ತಿದ್ದ ಪ್ರಯಾಣಿಕನಿಗೆ ಜನರು ಜೋರಾಗಿ ಕೂಗಿ ಹೇಳುತ್ತಿದ್ದರೂ ಆತನಿಗೆ ಕೇಳಿಸಿಲ್ಲ. ಹಂದ್ವಾನಿ ಜಿಲ್ಲೆಯ ಗೌಲಾ ನದಿಯ ಸೇತುವೆ ದಾಟುತ್ತಿದ್ದ ಯುವಕರಿಬ್ಬರು ಕೊನೆ ಕ್ಷಣದಲ್ಲಿ ಬೈಕನ್ನು ಹಿಂದಕ್ಕೆ ತಿರುಗಿಸಿದರು. ಬಳಿಕ ಸೇತುವೆ ಮುರಿದು ಬಿದ್ದಿತು. ಕೆಲವೇ ಕ್ಷಣಗಳ ಅಂತರದಲ್ಲಿ ಆ ಬೈಕ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: Uttarakhand Rain: ಉತ್ತರಕಾಶಿಯಲ್ಲಿ ಭೂಕುಸಿತದಿಂದ ಗಂಗೋತ್ರಿ, ಯಮುನೋತ್ರಿ ಹೆದ್ದಾರಿ ಬಂದ್
Published On - 1:24 pm, Tue, 19 October 21