ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಅನೌನ್ಸ್ಮೆಂಟ್ ನೀಡಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿ ಸೂಚನೆಗಳನ್ನು ಸಂಸ್ಕೃತದಲ್ಲಿ ಹೇಳುತ್ತಿರುವುದನ್ನು ಕಾಣಬಹುದು. ಆದರೆ ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್ ಮಾಡಿ ವಿಡಿಯೋ ಎಡಿಟ್ ಮಾಡಲಾಗಿದೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.
@MumbaichaDon ಎಂಬ ಟ್ವಿಟರ್ ಖಾತೆಯಲ್ಲಿ ಸಂಸ್ಕೃತದಲ್ಲಿ ಅನೌನ್ಸ್ಮೆಂಟ್ ನೀಡುತ್ತಿರುವ ವೀಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಇಂದು(ಡಿ.05) ಬೆಳಿಗ್ಗೆ ಹಂಚಿಕೊಂಡಿರುವ ವಿಡಿಯೋ ಈಗಾಗಲೇ 22 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
Mera Bharat Badal Raha Hai. 😍
First flight announcement in SANSKRIT at Varanasi.
Remembering our देव बोली!
Vote for CONgress if you want such announcements in Urdu or else keep voting for BJP to build “Bharat”! pic.twitter.com/FWsq5iTmY8
— BhikuMhatre (@MumbaichaDon) December 5, 2024
ಇದನ್ನೂ ಓದಿ: Viral Video: ಕಾಮನಬಿಲ್ಲಿನಂತಹ ಬಣ್ಣಬಣ್ಣದ ಪರ್ವತಗಳಿರುವ ದೇಶವಿದು; ವಿಡಿಯೋ ವೈರಲ್
ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ಸನಾತನ ಧರ್ಮ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್ ಮಾಡಿ ವಿಡಿಯೋ ಎಡಿಟ್ ಮಾಡಲಾಗಿದೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ