Video: ತರಗತಿಯಲ್ಲಿ ಕೂತು ಪಾಠ ಕೇಳುತ್ತಿದ್ದ ಪುಟ್ಟ ಬಾಲಕಿಯ ತಲೆ ಮೇಲೆ ಬಿದ್ದ ಫ್ಯಾನ್
ತರಗತಿಯಲ್ಲಿ ಕೂತು ಪಾಠ ಕೇಳುತ್ತಿದ್ದ ಪುಟ್ಟ ಬಾಲಕಿಯ ತಲೆಯ ಮೇಲೆ ಇದ್ದಕ್ಕಿದ್ದಂತೆ ಫ್ಯಾನ್ ಬಿದ್ದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಧ್ಯಪ್ರದೇಶ: ತರಗತಿಯಲ್ಲಿ ಕೂತು ಪಾಠ ಕೇಳುತ್ತಿದ್ದ ಪುಟ್ಟ ಬಾಲಕಿಯ ತಲೆಯ ಮೇಲೆ ಇದ್ದಕ್ಕಿದ್ದಂತೆ ಫ್ಯಾನ್ ಬಿದ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸೆಹೋರ್ ಜಿಲ್ಲೆಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ ಬಾಲಕಿಗೆ ಕೈಗೆ ಗಾಯಗಳಾಗಿವೆ. ತಕ್ಷಣ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಬಾಲಕಿ ಬಹುತೇಕ ಚೇತರಿಸಿಕೊಂಡಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ನಿರ್ಲಕ್ಷ್ಯ ಕಂಡು ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ದ ದೂರು ದಾಖಲಿಸಿದ್ದಾರೆ. ಲಕ್ಷ ಲಕ್ಷ ಶುಲ್ಕ ತೆಗೆದುಕೊಂಡರೂ ಈ ರೀತಿಯ ನಿರ್ಲಕ್ಷ್ಯ ಕಂಡು ಬಂದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?