Viral Video: ಐಸ್ ಕ್ರೀಮ್ ಕೊಟ್ಟು ಅಪ್ರಾಪ್ತ ಬಾಲಕಿ ಜೊತೆ ಅಸಭ್ಯ ವರ್ತನೆ; ವಿಡಿಯೋ ವೈರಲ್

ಇತ್ತೀಚಿಗೆ ಅಘಾತಕಾರಿ ಘಟನೆಯೊಂದು ನಡೆದಿದ್ದು, ಐಸ್ ಕ್ರೀಮ್ ಮಾರಾಟಗಾರನೊಬ್ಬ ತನ್ನ ಬಳಿ ಐಸ್ ಕ್ರೀಮ್ ಕೊಳ್ಳಲು ಬಂದ ಬಾಲಕಿಗೆ ಫ್ರೀ ಐಸ್ ಕ್ರೀಮ್ ಕೊಟ್ಟು ಆ ಮುಗ್ಧ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಕುರಿತ ಅಘಾತಕಾರಿ ವಿಡಿಯೋವೊಂದು ವೈರಲ್ ಆಗುತ್ತಿದೆ.

Viral Video: ಐಸ್ ಕ್ರೀಮ್ ಕೊಟ್ಟು ಅಪ್ರಾಪ್ತ ಬಾಲಕಿ ಜೊತೆ ಅಸಭ್ಯ ವರ್ತನೆ; ವಿಡಿಯೋ ವೈರಲ್
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 12, 2024 | 11:41 AM

ಕಾಮುಕರ ಹೀನ ಕೃತ್ಯಗಳಿಗೆ ಅಂತ್ಯವೇ ಇಲ್ಲದಂತಾಗಿದೆ. ಅದರಲ್ಲೂ ಪುಟ್ಟ ಮಕ್ಕಳಿಗೆ ಐಸ್ ಕ್ರೀಮ್, ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಐಸ್ ಕ್ರೀಮ್ ಮಾರಾಟಗಾರನೊಬ್ಬ ತನ್ನ ಬಳಿ ಐಸ್ ಕ್ರೀಮ್ ಕೊಳ್ಳಲು ಬಂದ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ಐಸ್ ಕ್ರೀಮ್ ಮಾರಾಟಗಾರನೊಬ್ಬ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ವರದಿಗಳ ಪ್ರಕಾರ ಎರಡು ವಾರಗಳ ಹಿಂದೆ ಜಹಾಂಗೀರಾಬಾದ್‌ನಲ್ಲಿ ರಾತ್ರಿ ವೇಳೆ 11 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಐಸ್ ಕ್ರೀಮ್ ಕೊಳ್ಳಲು ಬಂದಿದ್ದು, ಆ ಸಂದರ್ಭದಲ್ಲಿ ಮಾರಾಟಗಾರ ಮೊಹಮ್ಮದ್ ಖಾಲಿದ್ ಖಾನ್ (52) ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಈತನ ಈ ಹೇಯ ಕೃತ್ಯವನ್ನು ಸ್ಥಳೀಯ ನಿವಾಸಿಯಾದ ರಮೇಶ್ ಸಾಹು ಎಂಬಾತ ರೆಕಾರ್ಡ್ ಮಾಡಿದ್ದು, ಅದನ್ನು ವಾಟ್ಸಾಪ್ ನಲ್ಲಿ ಶೇರ್ ಮಾಡಿದ್ದಾನೆ. ಹೀಗೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿಯ ತಾಯಿ ದೂರನ್ನು ನೀಡಿದ್ದು, ತಾಯಿ ನೀಡಿದ ದೂರಿನ ಮೇರೆಗೆ ಜಹಾಂಗೀರಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ತನ್ನ ಊರಿಗೆ ಪರಾರಿಯಾಗಿದ್ದ ಆರೋಪಿಯನ್ನು ಕಲ್ಪಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ ( ಎಕ್ಸ್​​ ಖಾತೆ )

ಈ ಕುರಿತ ಪೋಸ್ಟ್ ಒಂದನ್ನು CeoVoice_ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಐಸ್ ಕ್ರೀಮ್ ಕಾರ್ಟ್ ಬಳಿ ಬಂದ ಬಾಲಕಿಯನ್ನು ಹಿಡಿದ ಮಾರಾಟಗಾರ ಆಕೆಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸುವ ನಾಚಿಕೆಗೇಡಿನ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಆಪರೇಷನ್ ವೇಳೆ ಹಾಯಾಗಿ ಮೊಬೈಲ್​​​​ನಲ್ಲಿ ಗೇಮ್ ಆಡಿದ ರೋಗಿ

ಜುಲೈ 10 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ‘ ಇವನನ್ನು ಎನ್ಕೌಂಟರ್ ಮಾಡಿ ಬಿಸಾಡಬೇಕು’ ಎಂದು ಕಿಡಿಕಾರಿದ್ದಾರೆ. ಇನ್ನೂ ಅನೇಕರು ಇಂತಹ ನೀಚರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ