ಕಾರಿನಲ್ಲಿ ಸ್ಟಂಟ್ ಮಾಡಿಕೊಂಡು ಹೋಗಿ ಸ್ಕೂಟರ್‌ ಡಿಕ್ಕಿ ಹೊಡೆದ ಯುವಕರು; ಮಹಿಳೆ ಸಾವು, ಮಗು  ಸ್ಥಿತಿ ಗಂಭೀರ

ಅಪ್ರಾಪ್ತ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್​​ ಮಾಡುತ್ತಾ ವೇಗವಾಗಿ ಬಂದಿದ್ದಾರೆ. ಕ್ಲಿನಿಕ್‌ನಿಂದ ಮನೆಗೆ ತೆರಳುತ್ತಿದ್ದ ಮಹಿಳೆ ಮತ್ತು ಆಕೆಯ 12 ವರ್ಷದ ಮಗಳಿರುವ ಸ್ಕೂಟರ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ.

ಕಾರಿನಲ್ಲಿ  ಸ್ಟಂಟ್ ಮಾಡಿಕೊಂಡು ಹೋಗಿ ಸ್ಕೂಟರ್‌ ಡಿಕ್ಕಿ ಹೊಡೆದ ಯುವಕರು; ಮಹಿಳೆ ಸಾವು, ಮಗು  ಸ್ಥಿತಿ ಗಂಭೀರ

Updated on: Aug 03, 2024 | 3:09 PM

ಉತ್ತರಪ್ರದೇಶ: ವೇಗವಾಗಿ ಬಂದ ಕಾರು, ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿದ್ದ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್​​ ಮಾಡುತ್ತಾ ವೇಗವಾಗಿ ಚಲಾಯಿಸಿಕೊಂಡು ಬಂದ ಪರಿಣಾಮ, ಕಾರು ನಿಯಂತ್ರಣ ತಪ್ಪಿ ಎದುರಿಗೆ ಬಂದ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿಯಲ್ಲಿದ್ದ ತಾಯಿ ಹಾಗೂ ಮಗು 30 ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ.

ಶುಕ್ರವಾರ ಮಧ್ಯಾಹ್ನ ಕಾನ್ಪುರದ ಕಿದ್ವಾಯಿ ನಗರದಲ್ಲಿ ಈ ನಡೆದಿರುವುದಾಗಿ ವರದಿಯಾಗಿದೆ. ಕಿದ್ವಾಯಿ ನಗರದಲ್ಲಿ ಅಪ್ರಾಪ್ತ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್​​ ಮಾಡುತ್ತಾ ವೇಗವಾಗಿ ಬಂದಿದ್ದಾರೆ. ಈ ವೇಳೆ ಕ್ಲಿನಿಕ್‌ನಿಂದ ಮನೆಗೆ ತೆರಳುತ್ತಿದ್ದ ಮಹಿಳೆ ಮತ್ತು ಆಕೆಯ 12 ವರ್ಷದ ಮಗಳಿರುವ ಸ್ಕೂಟರ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುತ್ತಿದ್ದಾಗ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ನಂತರ, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಚಾಲಕ ಮತ್ತು ಇತರ ಪ್ರಯಾಣಿಕರನ್ನು ವಶಕ್ಕೆ ತೆಗೆದುಕೊಂಡರು. ಸ್ಥಳೀಯರು ತಕ್ಷಣ ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಹಿಳೆ ಅದಾಗಲೇ ಸಾವನ್ನಪ್ಪಿದ್ದು, ಬಾಲಕಿಗೆ ತೀವ್ರ ಗಾಯಗಳಾಗಿವೆ.

ಇದನ್ನೂ ಓದಿ: ಫೋನ್​​​ ಪಕ್ಕಕ್ಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು

ಹೆಲ್ಮೆಟ್ ಧರಿಸಿದ್ದರೂ ಡಿಕ್ಕಿಯ ರಭಸಕ್ಕೆ ಮಹಿಳೆಯ ತಲೆಗೆ ಗಾಯವಾಗಿದ್ದು,ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಿದ್ವಾಯಿ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಪ್ರಾಪ್ತ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 3 August 24