AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಮ್ಮ ಮಕ್ಕಳು ಮಾತ್ರ ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!

ಮನೆಯಲ್ಲಿ ಮಕ್ಕಳಿಗೆ ಫೋನ್​​ ಕೊಟ್ಟಿಲ್ಲ ಅಂದ್ರೆ ಹಠ ಮಾಡಿ, ಊಟ ತಿಂಡಿ ಬಿಡುವುದುಂಟು. ಆದರೆ ಇದು ನಿಮ್ಮ ಮಕ್ಕಳಲ್ಲಿ ಮಾತ್ರ ಅಲ್ಲ. ಇಲ್ಲೊಂದು ನಾಯಿ ಮರಿಗೆ ಫೋನ್​​​ ಕೊಟ್ಟಿಲ್ಲ ಅಂದ್ರೆ ಊಟ, ನಿದ್ರೆ ಏನೂ ಮಾಡಲ್ವಂತೆ. ಸದ್ಯ ಈ ನಾಯಿ ಮರಿಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

Viral Video: ನಿಮ್ಮ ಮಕ್ಕಳು ಮಾತ್ರ  ಅಲ್ಲ, ಈ ನಾಯಿ ಮರಿಗೂ ಮೊಬೈಲ್​ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಮಾಡಲ್ಲ!
dog watching cartoon
ಅಕ್ಷತಾ ವರ್ಕಾಡಿ
|

Updated on:Jan 23, 2024 | 4:16 PM

Share

ಬಿಡುವಿನ ವೇಳೆಯಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಸ್ಕ್ರೋಲ್ ಮಾಡುವಾಗ, ಅನೇಕ ತಮಾಷೆಯ ವೀಡಿಯೊಗಳು ಕಂಡುಬರುತ್ತವೆ. ಇದೀಗಾ ನಾಯಿ ಮರಿಯ ವಿಡಿಯೋವೊಂದು ಭಾರೀ ವೈರಲ್​​ ಆಗಿದೆ. ಕೇವಲ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳು ಕೂಡ ಫೋನಿಗೆ ಅಡಿಕ್ಟ್​​​ ಆಗಿದೆ ಎಂಬುದನ್ನು ಇಲ್ಲಿ ಕಾಣಬಹುದು. ಈ ನಾಯಿ ಮರಿಗೆ ಫೋನ್​​​ನಲ್ಲಿ ಕಾರ್ಟೂನ್​​ ವಿಡಿಯೋ ಹಾಕಿ ಕೊಟ್ಟಿಲ್ಲ ಅಂದ್ರೆ ನಿದ್ದೆನೇ ಬರಲ್ವಾಂತೆ. ವಿಡಿಯೋ ನೋಡಿಕೊಂಡು ಆರಾಮಾಗಿ ಮಲಗಿರುವ ವಿಡಿಯೋ ಸದ್ಯ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ನಾಯಿ ಮರಿ ಮಲಗಿರುವುದು ಕಾಣಬಹುದು. ತಲೆದಿಂಬು ಮೇಲೆ ಹಾಯಾಗಿ ತಲೆಯಿಟ್ಟು, ಮೊಬೈನ್​​​ ಫೋನಿನಲ್ಲಿ ಕಾರ್ಟೂನ್ಗಳನ್ನು ವೀಕ್ಷಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನ ‘ಅನಿಮಲ್ ಲವರ್ಸ್’ ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ಕೇವಲ 20 ಸೆಕೆಂಡ್‌ಗಳ ಈ ವಿಡಿಯೋ ಅಂತರ್ಜಾಲದಲ್ಲಿ ಸಾಕಷ್ಟು ಜನಪ್ರಿಯವಾಗಿದ್ದು, 9 ಲಕ್ಷಕ್ಕೂ ಹೆಚ್ಚು ಬಳಕೆದಾರರು ಇದನ್ನು ಲೈಕ್ ಮತ್ತು 27 ಸಾವಿರಕ್ಕೂ ಹೆಚ್ಚು ಜನರು ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರೊಬ್ಬರು ‘ಡಿಜಿಟಲ್ ನಾಯಿ’ ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 23 January 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು