AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ನಿಮಗೆ ಏನೆಲ್ಲ ಹೇಳುವುದಿದೆ, ಪ್ರೀತಿಯ ಆಳಕ್ಕೆ ಪದಗಳೇ ಸಿಗುತ್ತಿಲ್ಲ’ ಪತಿಗಾಗಿ ಹಾಡಿದ ಪತ್ನಿ

Love : 70 ದಿನಗಳ ಆಸ್ಪತ್ರೆವಾಸದಿಂದ ಮುಕ್ತನಾಗಿರುವ 70 ವರ್ಷದ ತನ್ನ ಪತಿಗಾಗಿ ಪತ್ನಿ ಹಾಡಿರುವ ಈ ಹಾಡು ವೈರಲ್ ಆಗಿದೆ. ಈ ಹೃದಯಸ್ಪರ್ಶಿ ವಿಡಿಯೋ ಅನ್ನು 3 ಮಿಲಿಯನ್ ಜನರು ವೀಕ್ಷಿಸಿದ್ದಾರೆ.

Viral Video : ‘ನಿಮಗೆ ಏನೆಲ್ಲ ಹೇಳುವುದಿದೆ, ಪ್ರೀತಿಯ ಆಳಕ್ಕೆ ಪದಗಳೇ ಸಿಗುತ್ತಿಲ್ಲ’ ಪತಿಗಾಗಿ ಹಾಡಿದ ಪತ್ನಿ
TV9 Web
| Updated By: ಶ್ರೀದೇವಿ ಕಳಸದ|

Updated on:Sep 27, 2022 | 10:25 AM

Share

Viral Video : ಈ ವಯೋವೃದ್ಧ ದಂಪತಿಯ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 70 ವರ್ಷದ ಈ ವೃದ್ಧ 70 ದಿನಗಳ ಆಸ್ಪತ್ರೆಯ ವಾಸದಿಂದ ಮುಕ್ತರಾಗಿರುವ ಸಂದರ್ಭದಲ್ಲಿ ಅವರ ಪತ್ನಿ ಈ ಮಧುರಗೀರೆಯನ್ನು ಹಾಡಿದ್ದಾರೆ. ಈ ವಿಡಿಯೋ ನೆಟ್ಟಿಗರ ಮನ ಕಲಕಿದೆ. ಗುಡ್​ನ್ಯೂಸ್​ಮೂವ್​ಮೆಂಟ್​ ಎಂಬ ಪುಟದಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ತನ್ನ ಪತಿಯ ಬಳಿ ಕುಳಿತ ಈಕೆ, ಬ್ರೆಝಿಲಿಯನ್​ ಸಂಗೀತಗಾರ ರಾಬರ್ಟೋ ಕಾರ್ಲೋಸ್​ ಅವರ ಪೋರ್ಚುಗೀಸ್​ ಹಾಡು- ಕೊಮೊ ಎ ಗ್ರಾಂಡೆ ಒ ಮೆಯು ಅಮೋರ್ ಪೋರ್​ ವೂಕೆ (ನಿಮಗೆ ಏನೆಲ್ಲ ಹೇಳುವುದಿದೆ. ಆದರೆ ನಿಮ್ಮ ಮೇಲಿನ ಪ್ರೀತಿ ಎಷ್ಟು ಆಳವಾಗಿದೆ ಎಂದು ಹೇಳಲು ಪದಗಳೇ ಸಿಗುತ್ತಿಲ್ಲ) ಹಾಡನ್ನು ಹಾಡುತ್ತಿದ್ದಾರೆ. ಹಾಡು ಮುಗಿಯುತ್ತಿದ್ದಂತೆ ಆಕೆಯ ಪತಿಯ ಸ್ಪಂದನೆ ಹೇಗಿರುತ್ತದೆ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Good News Movement (@goodnews_movement)

ಈ ವಿಡಿಯೋ ಅನ್ನು 3ಮಿಲಿಯನ್​ಗಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಇಡೀ ನನ್ನ ಜೀವಮಾನದಲ್ಲಿ ಇದು ಅತ್ಯುತ್ತಮ ಮಧುರಗೀತೆ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಪತಿ, ಪತ್ನಿಯ ಮುಖವನ್ನು ಸ್ಪರ್ಶಿಸುವ ರೀತಿ! ಎಂದು ಮತ್ತೊಬ್ಬರು ಹೇಳಿದ್ದಾರೆ. ಇದು ನಿಜವಾದ ಪ್ರೀತಿ. ಆರೋಗ್ಯ ಮತ್ತು ಅನಾರೋಗ್ಯದಿಂದ ಹಿಡಿದು ಕೊನೆಯವರೆಗೂ ಇದು ಹೀಗೇ ಇರುತ್ತದೆ ಎಂದು ಮಗದೊಬ್ಬರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ನಾನಿಲ್ಲಿ ಅಳುತ್ತಿದ್ದೇನೆ ಈ ವಿಡಿಯೋ ನೋಡಿ ಎಂದು ಹಲವಾರು ಜನ ಪ್ರತಿಕ್ರಿಯಿಸಿದ್ದಾರೆ.

ವಯೋವೃದ್ಧರ ಪರಸ್ಪರ ಪ್ರೀತಿ, ಕಾಳಜಿ, ಆಪ್ತಭಾವವನ್ನು ಬಿಂಬಿಸುವ ಅನೇಕ ವಿಡಿಯೋಗಳನ್ನು ನೋಡುತ್ತಲೇ ಇರುತ್ತೀರಿ. ಆದರೆ ಇದು ಮಾತ್ರ ಹೃದಯಕಲಕುವಂತಿದೆಯಲ್ಲ. ಆ ವೃದ್ಧನ ಮುಖಭಾವ ನೋಡುತ್ತಿದ್ದರೆ ಬರೆಯಲು ಪದಗಳೇ ಸಿಗುತ್ತಿಲ್ಲ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:18 am, Tue, 27 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!