Video: ವರ್ಗಾವಣೆಗೊಂಡ ಶಿಕ್ಷಕ; ಶಾಲೆಯ ಗೇಟಿನ ಬಳಿ ನಿಂತು ಗಳಗಳನೆ ಅತ್ತ ವಿದ್ಯಾರ್ಥಿಗಳು

ತೆಲಂಗಾಣದ ಜನಗಾಮ ಜಿಲ್ಲೆಯ ಸಮೀರ್‌ಪೇಟೆಯ ಪ್ರಾಥಮಿಕ ಶಾಲೆಯ ಸುಧೀರ್ ಎಂಬವರು ಮಕ್ಕಳ ಪ್ರೀತಿಯ ಶಿಕ್ಷಕರಾಗಿದ್ದರು. ಆದರೆ ಇತ್ತೀಚಿಗಷ್ಟೇ ಅವರಿಗೆ ವರ್ಗಾವಣೆಯಾಗಿದೆ. ಈ ವಿಷಯ ಮಕ್ಕಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Follow us
ಅಕ್ಷತಾ ವರ್ಕಾಡಿ
|

Updated on:Jun 28, 2024 | 5:15 PM

ತೆಲಂಗಾಣ: ವರ್ಗಾವಣೆಗೊಂಡ  ಪ್ರೀತಿಯ ಶಿಕ್ಷಕನಿಗಾಗಿ ಇಡೀ ಶಾಲೆಯ ಮಕ್ಕಳು ಕಣ್ಣೀರು ಹಾಕಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿದ್ಯಾರ್ಥಿಗಳು ಶಾಲೆಯ ಗೇಟಿನ ಬಳಿ ನಿಂತು “ನಮ್ಮನ್ನು ಬಿಟ್ಟು ಹೋಗಬೇಡಿ ಸರ್​​ ” ಎಂದು ಅಳುತ್ತಾ ಅಂಗಲಾಚಿದ್ದಾರೆ. ತೆಲಂಗಾಣದ ಜನಗಾಮ ಜಿಲ್ಲೆಯ ಸಮೀರ್‌ಪೇಟೆಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಸುಧೀರ್ ಎಂಬವರು ಮಕ್ಕಳ ಪ್ರೀತಿಯ ಶಿಕ್ಷಕರಾಗಿದ್ದು, ಇತ್ತೀಚಿಗಷ್ಟೇ ಅವರಿಗೆ ವರ್ಗಾವಣೆಯಾಗಿದೆ. ಈ ವಿಷಯ ಮಕ್ಕಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಇದರಿಂದಾಗಿ ಮಕ್ಕಳು ಶಾಲೆಯ ಗೇಟ್​ ಬಳಿ ಅಳುತ್ತಾ ನಿಂತು ಸುಧೀರ್ ಸರ್ ಪ್ಲೀಸ್​​ ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಅತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇದನ್ನೂ ಓದಿ: ಜನನಿಬಿಡ ರಸ್ತೆಯಲ್ಲಿ ನಗ್ನವಾಗಿ ಓಡಾಡಿದ ಯುವತಿ, ಬೆತ್ತಲೆ ಅವತಾರಕ್ಕೆ ಬೆಚ್ಚಿ ಬಿದ್ದ ಜನ

ಶಿಕ್ಷಕ ಸುಧೀರ್ ಸಮೀರ್ ಪೇಟಾದಿಂದ ಬಚ್ಚನ್ನಪೇಟೆ ಮಂಡಲದ ಕೊನ್ನೆ ಗ್ರಾಮ ಶಾಲೆಗೆ ವರ್ಗಾವಣೆಯಾಗಿದೆ. ಮಕ್ಕಳ ಪ್ರೀತಿಯನ್ನು ಕಂಡು ಶಿಕ್ಷಕ ಸುಧೀರ್ ಕೂಡ ಬಾವುಕರಾಗಿದ್ದಾರೆ. ಶಿಕ್ಷಕನ ವಿದಾಯದ ವೇಳೆ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Fri, 28 June 24

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ