Trending: ಹಣ್ಣು ಕೀಳುವುದು ಇನ್ನಷ್ಟು ಸುಲಭ, ಹೇಗೆ ಗೊತ್ತಾ? ಉದ್ಯಮಿ ಆನಂದ್ ಮಹೀಂದ್ರಾ ಹಂಚಿಕೊಂಡ ವಿಡಿಯೋ ನೋಡಿ

ಕೈಕಾರಿಕೋದ್ಯಮಿಯೊಬ್ಬರು ಹಣ್ಣು ಕೀಳಲು ತಯಾರಿಸಿದ ಸಾಧನವನ್ನು ನೋಡಿದ ಆನಂದ್ ಮಹೀಂದ್ರಾ ಅವರು ಅದರ ವಿಡಿಯೋವನ್ನು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

Trending: ಹಣ್ಣು ಕೀಳುವುದು ಇನ್ನಷ್ಟು ಸುಲಭ, ಹೇಗೆ ಗೊತ್ತಾ? ಉದ್ಯಮಿ ಆನಂದ್ ಮಹೀಂದ್ರಾ ಹಂಚಿಕೊಂಡ ವಿಡಿಯೋ ನೋಡಿ
ಹಣ್ಣು ಕೀಳುವ ಸಾಧನ ಮತ್ತು ಉದ್ಯಮಿ ಆನಂದ್ ಮಹೀಂದ್ರ
Follow us
TV9 Web
| Updated By: Rakesh Nayak Manchi

Updated on:Jun 03, 2022 | 2:53 PM

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಟ್ವಿಟರ್​ನಲ್ಲಿ ಹೆಚ್ಚು ಆಕ್ಟಿವ್ ಆಗಿರುತ್ತಾರೆ. ಯಾರೇ ಆಗಲಿ ಹೊಸತ್ತನ್ನು ಆವಿಷ್ಕರಿಸಿದರೆ ಅಂಥ ವಿಡಿಯೋ, ಫೋಟೋಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡು ಹುರಿದುಂಬಿಸುತ್ತಾರೆ. ಇದೀಗ 66 ವರ್ಷದ ಕೈಗಾರಿಕೋದ್ಯಮಿಯೊಬ್ಬರು ಹಣ್ಣು ಕೀಳಲು ತಯಾರಿಸಿದ ಸಾಧನವನ್ನು ನೋಡಿದ ಆನಂದ್ ಮಹೀಂದ್ರಾ (Anand Mahindra) ಅವರು, ಅದರ ವಿಡಿಯೋವನ್ನು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹಣ್ಣು ಕೀಳುವ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ.

ಇದನ್ನೂ ಓದಿ: Trending: ಕೆಂಪು ತೋಳಕ್ಕೆ ಜನ್ಮ ನೀಡಿದ ‘ಬ್ರೇವ್’, ಅಪರೂಪದ ಘಟನೆಗೆ ಸಾಕ್ಷಿಯಾಯ್ತು ಯುಎಸ್​ನ ಮೃಗಾಲಯ

ಆವಿಷ್ಕಾರದಿಂದ ಅವರು ಬೆಚ್ಚಿಬೀಳದಿದ್ದರೂ ಸರಳ ಉಪಾಯದ ಮೂಲಕ ಯಾವುದೇ ಏಟು ಬೀಳದೆ ಹಣ್ಣನ್ನು ಕೀಳುವ ಸಾಧನ ವಿಶೇಷವೆನಿಸಿದೆ. ವಿಡಿಯೋದಲ್ಲಿ ನೋಡುವಂತೆ, ಪ್ಲಾಸ್ಟಿಕ್ ಬಾಟಲ್​ ಹಿಂಭಾಗವನ್ನು ನಾಲ್ಕು ಭಾಗವನ್ನಾಗಿ ಮಾಡಿ ಅದಕ್ಕೆ ಹಗ್ಗದ ಸಹಾಯದಿಂದ ಬೇಕಾದಾಗ ಹಾಗೆ ಕಟ್ಟಿ ಪೈಪ್ ಅಳವಡಿಸಿದ್ದಾರೆ. ಈ ಪೈಪ್​ನ ಕೆಳಭಾಗದಲ್ಲಿ ಹಗ್ಗ ಎಳೆಯಲು ಮತ್ತೊಂದು ಸಣ್ಣ ಪೈಪ್ ಫಿಕ್ಸ್ ಮಾಡಲಾಗಿದೆ. ಇದರ ನೆರವಿನಿಂದ ಸೇಬು ಹಣ್ಣನ್ನು ಕೀಳುವುದನ್ನು ಕಾಣಬಹುದು. ಮಾತ್ರವಲ್ಲದೆ ಆ ಸಾಧನವನ್ನು ಮಾಡುವುದು ಹೇಗೆ ಎಂಬುದನ್ನೂ ವಿಡಿಯೋದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: Viral Video: ಚಾಲಕನಿಲ್ಲದೆ ಮುಂದಕ್ಕೆ ಚಲಿಸಿ ಹಿಂದಕ್ಕೆ ಬಂದ ಸೈಕಲ್ ಆಟೋ ರಿಕ್ಷಾ! ವಿಡಿಯೋ ವೈರಲ್

”ನಾನು ಉತ್ಸುಕನಾಗಿದ್ದೇನೆ ಏಕೆಂದರೆ ಈ ‘ಟಿಂಕರಿಂಗ್’ ಬೆಳೆಯುತ್ತಿರುವ ಸಂಸ್ಕೃತಿಯನ್ನು ತೋರಿಸುತ್ತದೆ. ಟಿಂಕರ್‌ಗಳು ಹೊಸತನದ ಟೈಟಾನ್ಸ್ ಆಗಬಹುದು” ಎಂದು ಅವರು ಹಂಚಿಕೊಂಡ ವಿಡಿಯೋಗೆ ಶೀರ್ಷಿಕೆ ನೀಡಿದ್ದಾರೆ.

ಸರಳವಾಗಿ ಹಣ್ಣು ಕೀಳುವ ಸಾಧನವನ್ನು ನೋಡಿದ ನೆಟ್ಟಿಜನ್ಸ್, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ಆ ವಿಡಿಯೋವನ್ನು ಹಂಚಿಕೊಂಡು ಮಾಹಿತಿ ತಿಳಿಸಿದ್ದಕ್ಕಾಗಿ ಆನಂದ್ ಮಹೀಂದ್ರಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಯಾರು ಏನು ಹೇಳಿದರು ಎಂದು ಈ ಕೆಳಗಿನ ಕಮೆಂಟ್​ಗಳನ್ನು ನೋಡಿ:

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Fri, 3 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ