AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಇತ್ತೀಚಿಗಂತೂ ರೀಲ್ಸ್‌ ಹುಚ್ಚು ಮಿತಿಮೀರಿಬಿಟ್ಟಿದೆ. ಲೈಕ್ಸ್‌, ಫಾಲೋವರ್ಸ್‌ ವೀವ್ಸ್‌ಗಾಗಿ ಜನ ಚಿತ್ರ ವಿಚಿತ್ರ ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಕೂಡಾ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದು, ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ
ಮಾಲಾಶ್ರೀ ಅಂಚನ್​
| Edited By: |

Updated on: Sep 22, 2024 | 11:32 AM

Share

ರೀಲ್ಸ್‌ ರೀಲ್ಸ್‌ ರೀಲ್ಸ್‌… ಈಗಂತೂ ಎಲ್ಲಿ ನೋಡಿದ್ರೂ ರೀಲ್ಸ್‌ ವಿಡಿಯೋಗಳದ್ದೇ ಹವಾ. ಅದರಲ್ಲೂ ಕೆಲ ರೀಲ್ಸ್‌ ಹುಚ್ಚರು ಚಿತ್ರ ವಿಚಿತ್ರ ರೀಲ್ಸ್‌ ವಿಡಿಯೋ ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಹೀಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟು ವಿಡಿಯೋ ಮಾಡುವ, ಪ್ರಾಣಕ್ಕೆ ಅಪಾಯ ತಂದೊಡ್ಡುವ ರೀಲ್ಸ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದವರು ಹಲವರಿದ್ದಾರೆ. ಇಲ್ಲೊಬ್ಬಳು ಮಹಿಳೆ ಕೂಡಾ ಲೈಕ್ಸ್‌ ವೀವ್ಸ್‌ಗಾಗಿ ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

RawAndRealMan ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ತೆರೆದ ಬಾವಿಯ ಅಂಚಲ್ಲಿ ಕುಳಿತ ಮಹಿಳೆಯೊಬ್ಬಳು ಪುಟಾಣಿ ಮಗುವನ್ನು ಬರೀ ಒಂದು ಕೈಯಲ್ಲಿ ಹಿಡಿದುಕೊಂಡು ಡೇಂಜರಸ್‌ ರೀಲ್ಸ್‌ ಮಾಡಿ ಹುಚ್ಚಾಟ ಮೆರೆಯುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಸೆಪ್ಟೆಂಬರ್‌ 18 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 71 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆದಷ್ಟು ಬೇಗ ಈ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈಕೆಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯವಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೆಕರು ಇದೆಲ್ಲಾ ಎಂಥಾ ಹುಚ್ಚಾಟ ಎಂದು ಗರಂ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ