Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

Video: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ಅಕ್ಷತಾ ವರ್ಕಾಡಿ
|

Updated on: Aug 22, 2024 | 12:56 PM

ಹೋಮ್‌ವರ್ಕ್ ಮಾಡದಿದ್ದಕ್ಕೆ ಬಾಲಕಿಗೆ ಬಲವಾಗಿ ಹೊಡೆದಿದ್ದರಿಂದ ಆಕೆಯ ಕಿವಿಯಿಂದ ಭಾರೀ ರಕ್ತಸ್ರಾವವಾಗಿದೆ. ಬಾಲಕಿ ಅಳುತ್ತಾ ತನ್ನ ಪುಸ್ತಕದಲ್ಲಿ ಕಿವಿಯಿಂದ ಬಿದ್ದ ರಕ್ತವನ್ನು ತೋರಿಸುತ್ತಾ, ನೋವನ್ನು ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೋಮ್‌ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 2 ನೇ ತರಗತಿಯ ವಿದ್ಯಾರ್ಥಿನಿಗೆ ಶಿಕ್ಷಕಯೊಬ್ಬರು ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಘಟನೆ ತೆಲಂಗಾಣದ ಜಗ್ತಿಯಾಲ್‌ನಲ್ಲಿ ನಡೆದಿದೆ. ಬಾಲಕಿಗೆ ಬಲವಾಗಿ ಹೊಡೆದಿದ್ದರಿಂದ ಆಕೆಯ ಕಿವಿಯಿಂದ ಭಾರೀ ರಕ್ತಸ್ರಾವವಾಗಿದೆ. ಬಾಲಕಿ ತನ್ನ ಪುಸ್ತಕದಲ್ಲಿ ರಕ್ತವನ್ನು ತೋರಿಸುತ್ತಾ, ಅನುಭವಿಸಿದ ಸಂಕಟವನ್ನು ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಘಟನೆ ಸಂಚಲನ ಮೂಡಿಸಿದ್ದು, ಶಿಕ್ಷಕನ ವಿರುದ್ಧ ಅಂತರ್ಜಾಲದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಶಿಕ್ಷಕನ ಅಮಾನುಷ ಕೃತ್ಯ ಮತ್ತು ಚಿಕ್ಕ ಮಗುವನ್ನು ಇಂತಹ ಭಯಾನಕ ಶಿಕ್ಷೆಗೆ ಒಳಪಡಿಸಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ. ಈ ವಿಡಿಯೋ ಬುಧವಾರ (ಆಗಸ್ಟ್ 21) ಸೋಶಿಯಲ್​​ ಮೀಡಿಯಾದಲ್ಲಿ ಶೇರ್​ ಮಾಡಲಾಗಿದ್ದು, ಭಾರೀ ವೈರಲ್​ ಆಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕರ ವಿರುದ್ಧ ಯಾವುದೇ ಕ್ರಮ ಜರುಗಿಸಿರುವ ಬಗ್ಗೆ ವರದಿಯಾಗಿಲ್ಲ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ನಾಯಿ ಮಾಡಿದ ಕಿತ್ತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ