Video: ಶೆಡ್ ಕುಸಿದು 100 ಕ್ಕೂ ಹೆಚ್ಚು ಜನರಿಗೆ ಗಾಯ; ವಿಡಿಯೋ ವೈರಲ್
ಮೆರವಣಿಗೆ ವೇಳೆ ನೃತ್ಯ ಪ್ರದರ್ಶನಗಳನ್ನು ವೀಕ್ಷಿಸಲು ಶೆಡ್‌ನಲ್ಲಿ ಜನ ಜಮಾಯಿಸಿದ್ದು, ಏಕಾಏಕಿ ಶೆಡ್ ಕುಸಿದು ಬಿದ್ದಿದೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಶೆಡ್ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಬಿಹಾರ: ಬಿಹಾರದ ಸರನ್ ಜಿಲ್ಲೆಯಲ್ಲಿ ಈಶಾವ್‌ಪುರ ಬ್ಲಾಕ್‌ನಲ್ಲಿ ಮಹಾವೀರ ಅಖಾರ ಮೆರವಣಿಗೆ ವೇಳೆ ಶಿಥಿಲಗೊಂಡಿದ್ದ ಶೆಡ್ ಕುಸಿದು 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೆರವಣಿಗೆ ವೇಳೆ ನೃತ್ಯ ಪ್ರದರ್ಶನಗಳನ್ನು ವೀಕ್ಷಿಸಲು ಶೆಡ್‌ನಲ್ಲಿ ಜನ ಜಮಾಯಿಸಿದ್ದರಿಂದ ಈ ಘಟನೆ ನಡೆದಿದೆ. ಅಷ್ಟೂ ಜನರ ಭಾರವನ್ನು ತಾಳಲಾರದೆ ಇದ್ದ ಶೆಡ್ ದಿಢೀರ್ ನೆಲಕ್ಕುರುಳಿದೆ. ಶಿಥಿಲಗೊಂಡಿದ್ದ ಶೆಡ್ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Latest Videos