Video: ಮನೆಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಏಕಾಏಕಿ ಬೀದಿ ನಾಯಿ ದಾಳಿ; ಸಿಸಿಟಿವಿಯಲ್ಲಿ ಸೆರೆ
ಅದೃಷ್ಟವಶಾತ್ ಮಹಿಳೆಯೊಬ್ಬರು ಓಡಿ ಬಂದು ಬೀದಿ ನಾಯಿಗಳಿಂದ ಮಗುವನ್ನು ರಕ್ಷಿಸಿದ್ದಾರೆ. ದಾಳಿಯಲ್ಲಿ ಮಗುವಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಬಟಿಂಡಾ: ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಪಂಜಾಬ್‌ನ ಬಟಿಂಡಾದಲ್ಲಿ ಸುಮಾರು ಐದು ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ಮಾಡಿದೆ. ಸದ್ಯ ಘಟನೆಗೆ ಸಂಬಂಧಿಸಿದ ದೃಶ್ಯಗಳು ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಮಂಗಳವಾರ (ಏಪ್ರಿಲ್ 2) ಬಟಿಂಡಾದ ನ್ಯಾಷನಲ್ ಕಾಲೋನಿಯಲ್ಲಿ ಸಂಜೆ 7 ಗಂಟೆಗೆ ಸಂಭವಿಸಿದೆ. ಈ ಪ್ರದೇಶದಲ್ಲಿ ಇಬ್ಬರು ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದಂತೆ ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಅದೃಷ್ಟವಶಾತ್ ಮಹಿಳೆಯೊಬ್ಬರು ಓಡಿ ಬಂದು ಬೀದಿ ನಾಯಿಗಳಿಂದ ಮಗುವನ್ನು ರಕ್ಷಿಸಿದ್ದಾಳೆ. ದಾಳಿಯಲ್ಲಿ ಮಗುವಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:01 pm, Fri, 5 April 24