Video: ಮನೆಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಏಕಾಏಕಿ ಬೀದಿ ನಾಯಿ ದಾಳಿ; ಸಿಸಿಟಿವಿಯಲ್ಲಿ ಸೆರೆ

ಅದೃಷ್ಟವಶಾತ್ ಮಹಿಳೆಯೊಬ್ಬರು ಓಡಿ ಬಂದು ಬೀದಿ ನಾಯಿಗಳಿಂದ ಮಗುವನ್ನು ರಕ್ಷಿಸಿದ್ದಾರೆ. ದಾಳಿಯಲ್ಲಿ ಮಗುವಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಬಟಿಂಡಾ: ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಪಂಜಾಬ್‌ನ ಬಟಿಂಡಾದಲ್ಲಿ ಸುಮಾರು ಐದು ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ಮಾಡಿದೆ. ಸದ್ಯ ಘಟನೆಗೆ ಸಂಬಂಧಿಸಿದ ದೃಶ್ಯಗಳು ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆ ಮಂಗಳವಾರ (ಏಪ್ರಿಲ್ 2) ಬಟಿಂಡಾದ ನ್ಯಾಷನಲ್ ಕಾಲೋನಿಯಲ್ಲಿ ಸಂಜೆ 7 ಗಂಟೆಗೆ ಸಂಭವಿಸಿದೆ. ಈ ಪ್ರದೇಶದಲ್ಲಿ ಇಬ್ಬರು ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದಂತೆ ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಅದೃಷ್ಟವಶಾತ್ ಮಹಿಳೆಯೊಬ್ಬರು ಓಡಿ ಬಂದು ಬೀದಿ ನಾಯಿಗಳಿಂದ ಮಗುವನ್ನು ರಕ್ಷಿಸಿದ್ದಾಳೆ. ದಾಳಿಯಲ್ಲಿ ಮಗುವಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Fri, 5 April 24

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us