AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರ್ ಬಾನೆಟ್‌ನೊಳಗೆ 7 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ; ವಿಡಿಯೋ ವೈರಲ್​

ರಿಪೇರಿಗಾಗಿ ಗ್ಯಾರೇಜ್‌ನೊಳಗೆ ನಿಲ್ಲಿಸಿದ್ದ ಕಾರಿನ ಬಾನೆಟ್ ತೆರೆದಾಗ ಬೃಹತ್ ಹೆಬ್ಬಾವು ಕಂಡು ಮೆಕ್ಯಾನಿಕ್‌ ಬೆಚ್ಚಿಬಿದ್ದಿದ್ದಾನೆ. ಗ್ಯಾರೇಜ್ ಮಾಲೀಕರು ಕೂಡಲೇ ಕರೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ತಂಡ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

Viral Video: ಕಾರ್ ಬಾನೆಟ್‌ನೊಳಗೆ 7 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ; ವಿಡಿಯೋ ವೈರಲ್​
ಅಕ್ಷತಾ ವರ್ಕಾಡಿ
|

Updated on: Sep 15, 2024 | 3:35 PM

Share

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗ್ಯಾರೇಜ್‌ನಲ್ಲಿದ್ದ ಕಾರಿನ ಬಾನೆಟ್‌ನೊಳಗೆ ಬೃಹತ್​​ ಹೆಬ್ಬಾವುವೊಂದು ಪತ್ತೆಯಾಗಿದೆ. ರಿಪೇರಿಗಾಗಿ ಗ್ಯಾರೇಜ್‌ನೊಳಗೆ ನಿಲ್ಲಿಸಿದ್ದ ಕಾರಿನ ಬಾನೆಟ್ ತೆರೆದಾಗ ಬೃಹತ್ ಹೆಬ್ಬಾವು ಕಂಡು ಮೆಕ್ಯಾನಿಕ್‌ ಬೆಚ್ಚಿಬಿದ್ದಿದ್ದಾನೆ. ಬಳಿಕ ಅರಣ್ಯ ಇಲಾಖೆಗೆ ಕರೆಮಾಡಿದ್ದು, ಅರಣ್ಯ ಅಧಿಕಾರಿಗಳು ಬಂದು ಹಾವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಗ್‌ರಾಜ್‌ನ ಸಿವಿಲ್ ಲೈನ್ಸ್‌ನಲ್ಲಿರುವ ಹೋಟೆಲ್ ಅಜಯ್ ಇಂಟರ್‌ನ್ಯಾಶನಲ್ ಹೊರಗಿರುವ ಗ್ಯಾರೇಜ್‌ನಲ್ಲಿ ಈ ಘಟನೆ ನಡೆದಿದೆ.

ಹೆಬ್ಬಾವು ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿಯ ಬಾನೆಟ್‌ನೊಳಗೆ ಬೆಚ್ಚನೆ ಕೂತಿದ್ದು, ಮೆಕ್ಯಾನಿಕ್ ಎಸ್‌ಯುವಿಯ ಬಾನೆಟ್ ತೆರೆದಾಗ 7 ಅಡಿಯ ಬೃಹತ್ ಹೆಬ್ಬಾವು ಕಂಡು ಬೆಚ್ಚಿಬಿದ್ದದ್ದಾನೆ. ಗ್ಯಾರೇಜ್ ಮಾಲೀಕರು ಕೂಡಲೇ 112ಕ್ಕೆ ಕರೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ತಂಡ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸರ ಸರನೆ ಬಂದು ಗಣಪನ ಕೊರಳಲ್ಲಿ ಹೆಡೆ ಎತ್ತಿ ಕುಳಿತ ನಾಗಪ್ಪ; ರೋಮಾಂಚನಕಾರಿ ವಿಡಿಯೋ ವೈರಲ್‌

ರಕ್ಷಣಾ ಕಾರ್ಯಾಚರಣೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಸೆ. 14 ರಂದು @bstvlive ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಹಾವಿನ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಲು ಅನೇಕ ಜನರು ಸ್ಥಳದಲ್ಲಿ ಸೇರಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ