AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಮದುವೆಯ ನಂತರ ಒಂಟಿಯಾಗಿದ್ದೇನೆ ಎಂದು 25ರ ಯುವತಿಯನ್ನು ವರಿಸಿದ 70ರ ವೃದ್ದ

ಮಕ್ಕಳ ಮದುವೆಯ ನಂತರ ಒಂಟಿಯಾಗಿದ್ದೇನೆ, ನನಗೆ ಆಸರೆಯಾಗಿ ಯಾರು ಇಲ್ಲ ಎಂಬ ಕಾರಣಕ್ಕೆ  70ರ ವೃದ್ದನೊಬ್ಬ 25ರ ಹರೆಯದ ಯುವತಿಯನ್ನು ಮದುವೆಯಾಗಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಇವರಿಬ್ಬರು ಮದುವೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಮಕ್ಕಳ ಮದುವೆಯ ನಂತರ ಒಂಟಿಯಾಗಿದ್ದೇನೆ ಎಂದು 25ರ ಯುವತಿಯನ್ನು ವರಿಸಿದ 70ರ ವೃದ್ದ
25ರ ಯುವತಿಯನ್ನು ವರಿಸಿದ 70ರ ವೃದ್ದ
ಅಕ್ಷತಾ ವರ್ಕಾಡಿ
|

Updated on:Jul 28, 2024 | 3:05 PM

Share

ಬಿಹಾರದ 70 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಸಾವಿನ ನಂತರ 25 ವರ್ಷದ ಯುವತಿಯೊಂದಿಗೆ ಮರುಮದುವೆ ಮಾಡಿಕೊಂಡಿರುವ ಘಟನೆ ಗಯಾ ಜಿಲ್ಲೆಯ ಬೈದಾ ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ಸಲೀಮುಲ್ಲಾ ನೂರಾನಿ(70) ಹಮ್ಜಾಪುರದ ಇಸ್ಲಾಂನಗರ ನಿವಾಸಿ ರೇಷ್ಮಾ ಪರ್ವೀನ್(25)ಅವರನ್ನು ವಿವಾಹವಾಗಿದ್ದಾರೆ. ವೃದ್ಧ ರೈತನಾಗಿದ್ದು, ಆತನ ಮೊದಲ ಹೆಂಡತಿ ನಾಲ್ಕು ವರ್ಷಗಳ ಹಿಂದೆ ನಿಧನರಾಗಿದ್ದರು.

ತನ್ನ ಮಕ್ಕಳಿಗೆ ಮದುವೆ ಮಾಡಿದ ನಂತರ ನಾನು ಒಂಟಿ ಜೀವನ ನಡೆಸುತ್ತಿದ್ದೇನೆ. ನನಗೆ ಆಸರೆಯಾಗಲು ಯಾರೂ ಇರಲಿಲ್ಲ. ಅದೇ ಸಮಯದಲ್ಲಿ, ಸ್ಥಳೀಯ ಜನರು ವಧು ರೇಷ್ಮಾ ಪರ್ವೀನ್ ಅವರನ್ನ ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಮುಂದಿಟ್ಟರು. ಅದಕ್ಕೊಪ್ಪಿ ಮದುವೆಯಾದೆ ಎಂದು ಮೊಹಮ್ಮದ್ ಸಲೀಮುಲ್ಲಾ ಹೇಳಿಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಫೇಸ್​​ ಬುಕ್​​ ಲವ್​​; 2 ಮಕ್ಕಳ ತಂದೆಯಾಗಿರುವ ಪ್ರಿಯಕರನ ಭೇಟಿಗೆ ಭಾರತಕ್ಕೆ ಓಡೋಡಿ ಬಂದ ಪಾಕಿಸ್ತಾನಿ ಯುವತಿ

ದಂಪತಿಗಳು ಇಸ್ಲಾಮಿಕ್ ಆಚರಣೆಗಳ ಪ್ರಕಾರ ವಿವಾಹವಾಗಿದ್ದು, ವದು-ವರ ಇಬ್ಬರೂ ಸ್ವ ಇಚ್ಚೆಯಿಂದಲೇ ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ. ವಿವಾಹದ ನಂತರದ ಇವರ ಸಂದರ್ಶನದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. “ಅಕ್ರಮ ಸಂಬಂಧಗಳನ್ನು ಹೊಂದುವುದಕ್ಕಿಂತ ಇದು ಉತ್ತಮ, ಅವರು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ” ಎಂದು ಒಬ್ಬರು ಕಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Sun, 28 July 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ