ಅಸಭ್ಯವಾಗಿ ವರ್ತಿಸುವುದು, ರೀಲ್ಸ್, ಕಿತ್ತಾಟದಂತಹ ಘಟನೆಗಳು ಸಾಮಾನ್ಯವಾಗಿ ದೆಹಲಿ ಮೆಟ್ರೋದಲ್ಲಿ ನಡೆಯುತ್ತಿರುತ್ತವೆ. ಇದೀಗ ಅಂತದ್ದೇ ಒಂದು ಘಟನೆ ಬೆಂಗಳೂರು ಮೆಟ್ರೋದಲ್ಲಿ ನಡೆದಿದೆ. ಪುರುಷರಿಬ್ಬರ ಅವಾಚ್ಯ ಶಬ್ದಗಳಿಂದ ಬೈಯುತ್ತಾ ಮೆಟ್ರೋದಲ್ಲಿ ಪರಸ್ಪರ ಕಿತ್ತಾಟ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
@ChristinMP_ ಎಂಬ ಟ್ವಿಟರ್ ಖಾತೆಯಲ್ಲಿ ಜುಲೈ 09ರಂದು ಕಿತ್ತಾಟದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗಿದೆ. ವಿಡಿಯೋ ಹಂಚಿಕೊಂಡ ದಿನದಿಂದ ಇಲ್ಲಿಯವರೆಗೆ ಅಂದರೆ ಎರಡೇ ದಿನದಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು “ದೆಹಲಿ ಮೆಟ್ರೋ ಜಗಳದ ವೈರಸ್ ಬೆಂಗಳೂರು ತಲುಪಿದೆಯೇ?” ಎಂದು ಕಾಮೆಂಟ್ ಮಾಡಿದ್ದಾರೆ.
A fight broke out between two passengers inside an overcrowded Metro train in Bengaluru.
BMRCL is reviewing the video & investigating further details@OfficialBMRCL pic.twitter.com/x7uwMVqAfs
— ChristinMathewPhilip (@ChristinMP_) July 9, 2024
ಇದನ್ನೂ ಓದಿ: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ
ವೈರಲ್ ಆಗಿರುವ ವಿಡಿಯೋದಲ್ಲಿ ಮೆಟ್ರೋದ ಒಳಗೆ ಕಿಕ್ಕಿರಿದ ಜನಸಂದಣಿಯ ನಡುವೆ ಇಬ್ಬರು ಪುರುಷರು ಕಿತ್ತಾಡುತ್ತಿರುವುದನ್ನು ಕಾಣಬಹುದು. ಪರಸ್ಪರ ಹೊಡೆದಾಟದ ನಡುವೆ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ