AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್​​​ ಸವಾರನ ಮೇಲೆ ಏಕಾಏಕಿ ದಾಳಿ ಮಾಡಿದ ದನ; ವಿಡಿಯೋ ವೈರಲ್​​

ನಡುರಸ್ತೆಯಲ್ಲಿ ಮಲಗಿದ್ದ ದನವೊಂದು ಏಕಾಏಕಿ ದ್ವಿಚಕ್ರ ವಾಹನ ಸವಾರನ ಮೇಲೆ ದಾಳಿ ಮಾಡಿದೆ. ಆ ವ್ಯಕ್ತಿಯನ್ನು ಬೈಕ್‌ನಿಂದ ತಳ್ಳಿ ಹಾಕಿ, ಕೊಂಬಿನಿಂದ ಆತನ ಮೇಲೆ ದಾಳಿ ಮಾಡಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಬೈಕ್​​​ ಸವಾರನ ಮೇಲೆ ಏಕಾಏಕಿ ದಾಳಿ ಮಾಡಿದ ದನ; ವಿಡಿಯೋ ವೈರಲ್​​
Video Viral
ಅಕ್ಷತಾ ವರ್ಕಾಡಿ
|

Updated on: Jan 09, 2024 | 2:09 PM

Share

ಸಾಮಾನ್ಯವಾಗಿ ರಸ್ತೆಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದ್ದು, ಅವುಗಳ ದಾಳಿಗೆ ಸಂಬಂಧಿಸಿದ ಅನೇಕ ಪ್ರಕರಣಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ದನಕರುಗಳು ನಡು ರಸ್ತೆಯಲ್ಲಿ ಮಲಗಿದ್ದರೂ ಕೂಡ ಯಾರ ತಂಟೆಗೂ ಹೋಗುವುದಿಲ್ಲ ಎಂಬ ನಂಬಿಕೆ. ಆದರೆ ಇಲ್ಲೊಂದು ವಿಡಿಯೋ ಇದೀಗಾ ಭಾರೀ ವೈರಲ್​ ಆಗಿದ್ದು, ಈ ಘಟನೆಯಿಂದ ನಿಮ್ಮ ಎದೆಯಲ್ಲಿ ನಡುಕ ಉಂಟಾಗುವುದಂತೂ ಖಂಡಿತಾ. ನಡುರಸ್ತೆಯಲ್ಲಿ ಮಲಗಿದ್ದ ದನವೊಂದು ಏಕಾಏಕಿ ದ್ವಿಚಕ್ರ ವಾಹನ ಸವಾರನ ಮೇಲೆ ದಾಳಿ ಮಾಡಿದೆ. ಆ ವ್ಯಕ್ತಿಯನ್ನು ಬೈಕ್‌ನಿಂದ ತಳ್ಳಿ ಹಾಕಿ, ಕೊಂಬಿನಿಂದ ಆತನ ಮೇಲೆ ದಾಳಿ ಮಾಡಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 3 ಲಕ್ಷಕ್ಕೂ ಹೆಚ್ಚು ನಗದು ಹೊಂದಿದ್ದ ನೋಟಿನ ಕಂತನ್ನು ಹರಿದು ತಿಂದ ಸಾಕು ನಾಯಿ

ವೈರಲ್ ವೀಡಿಯೊ ದನ ನಡುರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು. ರಸ್ತೆಯ ಇನ್ನೊಂದು ಬದಿಯಲ್ಲಿ ಟ್ರಾಫಿಕ್​​​ ಸಿಗ್ನಲ್​ನಿಂದಾಗಿ ವಾಹನಗಳು ನಿಂತಿರುವುದು ಕಾಣಬಹುದು. ಬೈಕ್‌ ಬರುತ್ತಿದ್ದಂತೆ ಏಕಾಏಕಿ ಓಡಿ ಬಂದು ದಾಳಿ ಮಾಡಿದೆ.ಆ ವ್ಯಕ್ತಿಯನ್ನು ಬೈಕ್‌ನಿಂದ ತಳ್ಳಿ ಕೆಳಗೆ ಎಸೆದಿದೆ. ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಮುಂದಾಗಿದ್ದಾರೆ. ಆದರೆ ಸ್ಥಳೀಯರ ಮೇಲೂ ದನ ದಾಳಿ ಮಾಡಲು ಮುಂದಾಗಿದೆ. ಅವರೆಲ್ಲರೂ ಪ್ರಾಣ ಉಳಿಸಿಕೊಳ್ಳಲು ಓಡಿಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವೀಡಿಯೊವನ್ನು @gharkekalesh ಎಂಬ ಎಕ್ಸ್ ಖಾತೆಯಲ್ಲಿ ಜನವರಿ 7ರಂದು ಹಂಚಿಕೊಳ್ಳಲಾಗಿದ್ದು, ಸಾಕಷ್ಟು ನೆಟ್ಟಿಗರು ವಿಡಿಯೋ ನೋಡುತ್ತಿದ್ದಂತೆ ಕಾಮೆಂಟ್​​ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!