Viral Video: ನಿಯಂತ್ರಣ ತಪ್ಪಿದ ಕಾರು ; ನಡುರಸ್ತೆಯಲ್ಲೇ 3 ವಾಹನಗಳಿಗೆ ಡಿಕ್ಕಿ

@Madan_Chikna ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​​ 10ರಂದು ಈ ಆಘಾತಕಾರಿ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನಗಳಲ್ಲಿ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಅಕ್ಕಪಕ್ಕದಲ್ಲಿ ಸಾಗುತ್ತಿದ್ದ ಆಟೋ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದೆ

Viral Video: ನಿಯಂತ್ರಣ ತಪ್ಪಿದ ಕಾರು ; ನಡುರಸ್ತೆಯಲ್ಲೇ 3 ವಾಹನಗಳಿಗೆ ಡಿಕ್ಕಿ

Updated on: Jun 12, 2024 | 11:46 AM

ಪುಣೆ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಪುಣೆಯ ಪಿಂಪ್ರಿ-ಚಿಂಚ್‌ವಾಡ್ ಪ್ರದೇಶದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯ ಮತ್ತೊಂದು ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಕಾರು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿಕ ಬೈಕ್​​ಗೆ ಡಿಕ್ಕಿ ಹೊಡೆದಿರುವುದನ್ನು ಕಾಣಬಹುದು.

@Madan_Chikna ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​​ 10ರಂದು ಈ ಆಘಾತಕಾರಿ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನಗಳಲ್ಲಿ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಅಕ್ಕಪಕ್ಕದಲ್ಲಿ ಸಾಗುತ್ತಿದ್ದ ಆಟೋ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯ ಸಂದರ್ಭದಲ್ಲಿ ಕಾರು ಹೇಗೆ ಮೇಲೇರಿತು ಎಂಬುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?

ಸದ್ಯ ಈ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: