Video Viral: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್​​

ಬೈಕ್​ ರೈಡ್​​ ಬಂದ ಈ ಜೋಡಿ ಮಳೆ ಪ್ರಾರಂಭವಾಗುತ್ತಿದ್ದಂತೆ ಬೈಕ್​​ನಿಂದ ಇಳಿದು ನಡು ರಸ್ತೆಯಲ್ಲೇ ರೋಮ್ಯಾಂಟಿಕ್ ಆಗಿ ಡ್ಯಾನ್ಸ್​​​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

Video Viral: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್​​

Updated on: Jun 13, 2024 | 2:26 PM

ಭಾರತದ ಕೆಲವು ಭಾಗಗಳಲ್ಲಿ ಮಾನ್ಸೂನ್ ಆಗಮನವಾಗಿದೆ. ಮಳೆಯ ತಂಪಾದ ವಾತಾವರಣವನ್ನು ಇಷ್ಟಪಡುವ ಕೆಲವರು ದೂರಪ್ರಯಾಣ ಬೆಳೆಸಲು ಯೋಚಿಸುತ್ತಿದ್ದರೆ, ಇನ್ನೂ ಕೆಲವರು ಮನೆಯಲ್ಲೇ ಕುಳಿತು ಬಿಸಿ ಬಿಸಿ ಟೀ ಕಾಫಿ ಜೊತೆಗೆ ಜಜ್ಜಿ ಪಕೋಡಾ ತಿನ್ನುತ್ತಾ ಆನಂದಿಸುತ್ತಿದ್ದಾರೆ. ಆದರೆ ಇಲ್ಲೊಂದು ಜೋಡಿ ಮಳೆಗೆ ನಡುರಸ್ತೆಯಲ್ಲೇ ರೋಮ್ಯಾಂಟಿಕ್ ಆಗಿ ಡ್ಯಾನ್ಸ್​​​ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಬೈಕ್​ ರೈಡ್​​ ಬಂದ ಈ ಜೋಡಿ ಮಳೆ ಪ್ರಾರಂಭವಾಗುತ್ತಿದ್ದಂತೆ ಬೈಕ್​​ನಿಂದ ಇಳಿದು ನಡು ರಸ್ತೆಯಲ್ಲೇ ರೋಮ್ಯಾಂಟಿಕ್ ಆಗಿ ಡ್ಯಾನ್ಸ್​​​ ಮಾಡುತ್ತಿರುವುದನ್ನು ಕಾಣಬಹುದು. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ವಿಡಿಯೋಗೆ ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೈಲಿನಲ್ಲಿ ಮಲಗಿಕೊಂಡು ಪ್ರೇಮಿಗಳಿಬ್ಬರ ರೊಮಾನ್ಸ್, ಮುಜುಗರಕ್ಕೊಳಗಾದ ಸಹ ಪ್ರಯಾಣಿಕರು

@themayurchouhan ಹೆಸರಿನ ಟ್ವಿಟರ್​​ ಖಾತೆಯಲ್ಲಿ ಜೂನ್​​​ 7ಕ್ಕೆ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 6ದಿನಗಳಲ್ಲಿ 2.3 ಮಿಲಿಯನ್​​ ಅಂದರೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us