ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು
ತಲೆಯ ಮೇಲೆ ಮಡಕೆ ಇಟ್ಟುಕೊಂಡು ಕುಣಿಯುತ್ತಿದ್ದ ವರನ ಚಿಕ್ಕಪ್ಪ ಕಮಲೇಶ್ ಢಾಕಾ. ಕುಣಿದು ಕುಪ್ಪಳಿಸುತ್ತಲೇ ಇದ್ದಕ್ಕಿದ್ದ ಹಾಗೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಧಾವಿಸಿ ಬಂದು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಕಮಲೇಶ್ ಅವರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ರಾಜಸ್ಥಾನ: ಅಳಿಯನ ಮದುವೆಯ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಜುಂಜುನುದಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿ ಮಾವ ಕುಣಿತು ಕುಪ್ಪಳಿಸುತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬೀಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ತಲೆಯ ಮೇಲೆ ಮಡಕೆ ಇಟ್ಟುಕೊಂಡು ಕುಣಿಯುತ್ತಿದ್ದ ವರನ ಚಿಕ್ಕಪ್ಪ ಕಮಲೇಶ್ ಢಾಕಾ. ಕುಣಿದು ಕುಪ್ಪಳಿಸುತ್ತಲೇ ಇದ್ದಕ್ಕಿದ್ದ ಹಾಗೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಧಾವಿಸಿ ಬಂದು ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಕಮಲೇಶ್ ಅವರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ:
शादी में मटका डांस करते समय हुई व्यक्त की मौत। यह घटना राजस्थान के झुंझुनू जिले की नवलगढ़ तहसील की है। pic.twitter.com/mtaHXEbFYV
— Priya singh (@priyarajputlive) April 26, 2024
ಕಮಲೇಶ್ ಢಾಕಾ ಅವರು ನವಲಗಢ್ ಚೌಕಾನಿ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರತಿನಿತ್ಯ ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ತಲುಪಿಸುವಂತಹ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ವ್ಯಕ್ತಿಯ ಸಾವು ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.
ಇದನ್ನೂ ಓದಿ: ಗಿನ್ನೆಸ್ ವಿಶ್ವ ದಾಖಲೆ ಬರೆದ ವಿಶ್ವದ ಅತೀ ಚಿಕ್ಕ ಎಸ್ಕಲೇಟರ್; ವಿಡಿಯೋ ಇಲ್ಲಿದೆ ನೋಡಿ
ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದು, “ಇತ್ತೀಚಿನ ದಿನಗಳಲ್ಲಿ ಹೃದಯ ಸ್ತಂಭನದಿಂದ ಹಠಾತ್ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಇಡೀ ದೇಶದಿಂದ ಇಂತಹ ಹಲವಾರು ಘಟನೆಗಳು ಮುನ್ನೆಲೆಗೆ ಬಂದಿವೆ. COVID-19 ಸಾಂಕ್ರಾಮಿಕ ರೋಗ ಹರಡಿದ ನಂತರ ಇಂತಹ ಘಟನೆಗಳು ಹೆಚ್ಚಿವೆ” ಎಂದು ಹೇಳಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ