ನೀವು ಧರಿಸುವ ಬಟ್ಟೆಯ ಬಣ್ಣ ರಸ್ತೆ ಅಪಘಾತಕ್ಕೆ ಕಾರಣವಾಗಬಹುದು; ವಿಡಿಯೋ ಇಲ್ಲಿದೆ ನೋಡಿ
ನೀವು ಧರಿಸುವ ಬಟ್ಟೆ ರಸ್ತೆ ಅಪಘಾತಕ್ಕೂ ಕಾರಣವಾಗಬಹುದು ಎಂಬುದಕ್ಕೆ ಇತ್ತೀಚಿನ ಘಟನೆಯೊಂದು ಸಾಕ್ಷಿಯಾಗಿದೆ. ಹೈದರಾಬಾದ್ನ ಸೈಬರಾಬಾದ್ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
ರಸ್ತೆ ಅಪಘಾತಗಳಿಗೆ ಹಲವು ಕಾರಣಗಳಿವೆ. ಕೆಲವು ಸಂದರ್ಭಗಳಲ್ಲಿ, ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳು ಉಂಟಾಗುತ್ತದೆ. ಆದರೆ ಎಂದಾದರೂ ನೀವು ಧರಿಸುವ ಬಟ್ಟೆಯಿಂದಲೂ ಅಪಘಾತಕ್ಕೆ ಕಾರಣವಾಗಬಹುದು ಎಂದು ತಿಳಿದಿದೆಯೇ? ಅದಕ್ಕಾಗಿಯೇ ಸರ್ಕಾರ ಮತ್ತು ಪೊಲೀಸರು ಯಾವಾಗಲೂ ರಸ್ತೆ ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಾರೆ.
ನೀವು ಧರಿಸುವ ಬಟ್ಟೆ ರಸ್ತೆ ಅಪಘಾತಕ್ಕೂ ಕಾರಣವಾಗಬಹುದು ಎಂಬುದಕ್ಕೆ ಇತ್ತೀಚಿನ ಘಟನೆಯೊಂದು ಸಾಕ್ಷಿಯಾಗಿದೆ. ಹೈದರಾಬಾದ್ನ ಸೈಬರಾಬಾದ್ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
ಇದನ್ನೂ ಓದಿ: ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು
ರಾತ್ರಿ ವೇಳೆ ಕಪ್ಪು ಬಣ್ಣದ ಡ್ರೆಸ್ ಧರಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ವಿವರಿಸಿ ವಿಡಿಯೋ ಪೋಸ್ಟ್ ಮಾಡಲಾಗಿದೆ. ರಾತ್ರಿ ಕಪ್ಪು ಟೀ ಶರ್ಟ್ ಧರಿಸಿದ್ದ ಯುವಕನೊಬ್ಬ ರಸ್ತೆ ದಾಟುತ್ತಿದ್ದ ವೇಳೆ ಆ ಮೂಲಕ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಹೀಗಾಗಿ ರಾತ್ರಿ ವೇಳೆ ಬೈಕ್, ಸೈಕಲ್, ವಾಕಿಂಗ್ ಮಾಡುವವರು ಹಳದಿ, ಬಿಳಿ, ಹಸಿರು ಬಣ್ಣದ ಡ್ರೆಸ್‌ಗಳನ್ನು ಧರಿಸಬೇಕು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ