AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುವುದಂತೂ ಖಂಡಿತಾ. ಈ ದೃಶ್ಯ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 28, 2024 | 12:03 PM

Share

ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್ ಜಾಮ್. ಎಲ್ಲಿ ಹೋಗ್ಬೇಕಾದ್ರೂ ಒಂದೆರಡು ಗಂಟೆ ಮುಂಚೆಯೇ ಹೊರಡಬೇಕು. ಟ್ರಾಫಿಕ್​​ ಜಾಮ್​ನಿಂದ ಎಷ್ಟೇ ಕೋಪ ಬಂದರೂ ಕೂಡ ಗಂಟೆಗಟ್ಟಲೆ ಕಾಯುವುದನ್ನು ಮಾತ್ರ ಏನು ಮಾಡಲು ಸಾಧ್ಯವಿಲ್ಲ. ಇದೀಗ ಟ್ರಾಫಿಕ್ ಜಾಮ್‌ನಿಂದಾಗಿ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡು ಬಹುಬಲಿಯಂತೆ ತನ್ನ ಬೈಕ್​​ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಯೊಬ್ಬ ಅಷ್ಟು ವಾಹನ ದಟ್ಟನೆಯ ನಡುವೆ ತನ್ನ ಬೈಕ್​​ ಎತ್ತಿಕೊಂಡು ನಡೆಯುತ್ತಿರುವ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುತ್ತದೆ. ಸಾಕಷ್ಟು ದೂರದ ವರೆಗೆ ಟ್ರಾಫಿಕ್​​ ಜಾಮ್​​ನಲಿ ಸಿಲುಕಿರುವ ಜನರು ಏಕಾಏಕಿ ಈ ದೃಶ್ಯ ಕಂಡು ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಬೈಕ್​​ ಎತ್ತಿಕೊಂಡು ಬರುವ ದೃಶ್ಯವನ್ನು ತಮ್ಮ ಮೊಬೈಲ್​​​ ಫೋನಿನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

@basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.5 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 231,489 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!