AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಮತಗಟ್ಟೆ ಬಳಿಯಿರುವ ಕೊಳಕ್ಕೆ EVM ಎಸೆದು ದುಷ್ಕೃತ್ಯ; ವಿಡಿಯೋ ವೈರಲ್

ಕೋಪಗೊಂಡ ಸ್ಥಳೀಯ ಜನಸಮೂಹವು ಕೆಲವು ಮತಗಟ್ಟೆ ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದ್ದು, ನಂತರ ಮತಗಟ್ಟೆಗಳಿಗೆ ಬಲವಂತವಾಗಿ ನುಗ್ಗಿ, ಎಲೆಕ್ಟ್ರಾನಿಕ್ ಮತಯಂತ್ರವನ್ನು (ಇವಿಎಂ) ವಶಪಡಿಸಿಕೊಂಡು ಹತ್ತಿರದ ಕೊಳಕ್ಕೆ ಎಸೆದಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಮತಯಂತ್ರವನ್ನು ಕೊಳಕ್ಕೆ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

West Bengal: ಮತಗಟ್ಟೆ ಬಳಿಯಿರುವ ಕೊಳಕ್ಕೆ EVM ಎಸೆದು ದುಷ್ಕೃತ್ಯ; ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on:Jun 01, 2024 | 12:27 PM

Share

ಪಶ್ಚಿಮ ಬಂಗಾಳ: ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಇಂದು(ಜೂ.01) ಏಳನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಜಯನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪಶ್ಚಿಮ ಬಂಗಾಳದ ಕುಲ್ತಾಲಿಯಲ್ಲಿನ ಮತಗಟ್ಟೆ ಸಂಖ್ಯೆ 40 ಮತ್ತು 41 ರಲ್ಲಿದ್ದ ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ (EVM) ಅನ್ನು ಅಲ್ಲಿನ ಹತ್ತಿರದ ಕರೆಗೆ ಬಿಸಾಕಿ ದುಷ್ಕೃತ್ಯ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಇದಲ್ಲದೇ ಕೋಲ್ಕತ್ತಾ ಬಳಿಯ ಜಾದವ್‌ಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭಾಂಗಾರ್‌ನ ಸತುಲಿಯಾ ಪ್ರದೇಶದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆಗಳು ವರದಿಯಾಗಿವೆ.

ಕುಲ್ತಾಲಿಯಲ್ಲಿ, ಕೋಪಗೊಂಡ ಜನಸಮೂಹವು ಕೆಲವು ಮತಗಟ್ಟೆ ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದ್ದು, ನಂತರ ಮತಗಟ್ಟೆಗಳಿಗೆ ಬಲವಂತವಾಗಿ ನುಗ್ಗಿ, ಎಲೆಕ್ಟ್ರಾನಿಕ್ ಮತಯಂತ್ರವನ್ನು (ಇವಿಎಂ) ವಶಪಡಿಸಿಕೊಂಡು ಹತ್ತಿರದ ಕೊಳಕ್ಕೆ ಎಸೆದಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಮತಯಂತ್ರವನ್ನು ಕೊಳಕ್ಕೆ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಪಶ್ಚಿಮ ಬಂಗಾಳದ ಚುನಾವಣಾ ಆಯೋಗವು ಈ ಘಟನೆಯ ಬಗ್ಗೆ ತಕ್ಷಣವೇ ಪ್ರತಿಕ್ರಿಯಿಸಿದ್ದು, ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಯಾವುದೇ ಅಡೆತಡೆಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹೊಸ ಇವಿಎಂಗಳು ಮತ್ತು ದಾಖಲೆಗಳನ್ನು ಸೆಕ್ಟರ್ ಅಧಿಕಾರಿಗೆ ನೀಡಲಾಗಿದೆ.

ಇದನ್ನೂ ಓದಿ: ಗುದನಾಳದಲ್ಲಿ 1 ಕೆಜಿ ಚಿನ್ನ ಸ್ಮಗ್ಲಿಂಗ್; ಕೇರಳದಲ್ಲಿ ಏರ್ ಇಂಡಿಯಾ ಗಗನಸಖಿ ಬಂಧನ

ಭಾರತದ ಚುನಾವಣಾ ಆಯೋಗದ ಪ್ರಕಾರ, ಸರಿಸುಮಾರು 5.24 ಕೋಟಿ ಪುರುಷರು, 4.82 ಕೋಟಿ ಮಹಿಳೆಯರು ಮತ್ತು 3574 ತೃತೀಯ ಲಿಂಗ ಮತದಾರರು ಸೇರಿದಂತೆ 10.06 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸುವ ನಿರೀಕ್ಷೆಯಿದೆ. ಬಿಹಾರ, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ, ಪಂಜಾಬ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಏಳು ರಾಜ್ಯಗಳಲ್ಲಿ ಮತದಾನ ನಡೆಯಲಿದೆ. ಒಡಿಶಾ ರಾಜ್ಯ ವಿಧಾನಸಭೆಯ ಉಳಿದ 42 ವಿಧಾನಸಭಾ ಕ್ಷೇತ್ರಗಳಿಗೂ ಏಕಕಾಲದಲ್ಲಿ ಮತದಾನ ನಡೆಯಲಿದೆ.

28 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು 486 ಸಂಸದೀಯ ಕ್ಷೇತ್ರಗಳಿಗೆ ಮತದಾನ ಸುಗಮವಾಗಿ ಮತ್ತು ಶಾಂತಿಯುತವಾಗಿ ಪೂರ್ಣಗೊಂಡಿದೆ ಎಂದು ಇಸಿಐ ತಿಳಿಸಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Sat, 1 June 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ