ಮಹಾರಾಷ್ಟ್ರ: ದೇಶದ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಗೆ ಜನರು ನಲುಗಿಹೋಗಿದ್ದು, ಮಳೆ ಆರ್ಭಟಕ್ಕೆ ರಸ್ತೆಗಳ ಜಲಾವೃತಗೊಂಡಿವೆ. ಇದೀಗ ಮಳೆಗೆ ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್ ರಸ್ತೆಯಲ್ಲಿ ದೈತ್ಯ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಳೆಗೆ ವಾಹನ ದಟ್ಟನೆಯ ನಡುವೆ ಮೊಸಳೆ ಓಡಾಡುತ್ತಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ರತ್ನಗಿರಿ ಜಿಲ್ಲೆಯ ಚಿಪ್ಲುನ್ ಮತ್ತು ಇತರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದೆ. ಸಮೀಪದ ಶಿವನದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೊಸಳೆಗಳಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಮೊಸಳೆ ರಸ್ತೆಗೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ನದಿಗಳ ನೀರಿನ ಮಟ್ಟವೂ ಹೆಚ್ಚಿದೆ. ಹವಾಮಾನ ಇಲಾಖೆ ಪ್ರಕಾರ ರತ್ನಗಿರಿ ಜಿಲ್ಲೆಯಲ್ಲಿ ಜುಲೈ 2ರವರೆಗೆ ಮಳೆ ಮುಂದುವರೆಯಲಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ; ರೀಲ್ಸ್ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ
@chiplun ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಡು ರಸ್ತೆಯಲ್ಲೇ ದೈತ್ಯ ಮೊಸಳೆಯ ಓಡಾಟದ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 10 ಗಂಟೆಗಳಲ್ಲಿ 1ಲಕ್ಷಕ್ಕೂ ಅಧಿಕ ಜನರು ವಿಡಿಯೋ ವೀಕ್ಷಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:22 pm, Mon, 1 July 24