AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ರಕ್ಷಿಸಲು ಯತ್ನಿಸಿದ್ದಾರೆ.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jun 18, 2024 | 4:25 PM

Share

ಮಕ್ಕಳನ್ನು ಹೊರಗಡೆ ತಮ್ಮೊಂದಿಗೆ ಕರೆದುಕೊಂಡು ಹೋದಾಗ ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಪೋಷಕರ ಆದ್ಯ ಕರ್ತವ್ಯ. ಮಕ್ಕಳನ್ನು ಅವರ ಪಾಡಿಗೆ ಅವರನ್ನು ಬಿಟ್ಟು ನೀವು ಶಾಪಿಂಗ್​ನಲ್ಲಿ ಬ್ಯೂಸಿಯಾಗಿ ಬಿಟ್ಟರೆ ಆಘಾತಕಾರಿ ಘಟನೆಗಳಿಗೆ ಕಾರಣವಾಗಬಹುದು. ಸದ್ಯ ಇದೀಗ ಅಂತದ್ದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಮಾಲ್​​ನ ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ಹಿಂದಿರುಗಿ ನೋಡಿ, ರಕ್ಷಿಸಲು ಯತ್ನಿಸಿದ್ದಾರೆ. ಅದೇ ಸಮಯಕ್ಕೆ ಅಲ್ಲಿಂದ ಜೋಕರ್​​ ವೇಷ ಹಾಕಿಕೊಂಡಿದ್ದ ವ್ಯಕ್ತಿ ಚಲಿಸುತ್ತಿರುವ ಎಸ್ಕಲೇಟರನ್ನು ನಿಲ್ಲಿಸಿದ್ದಾರೆ. ಬಳಿಕ ಮಾಲ್‌ನ ಇತರ ಉದ್ಯೋಗಿಗಳು ಸಹ ಅಲ್ಲಿಗೆ ತಲುಪಿದ್ದು, ಮತ್ತು ಸಾಕಷ್ಟು ಪ್ರಯತ್ನದ ನಂತರ ಬಾಲಕಿಯ ಕಾಲನ್ನು ಒಳಗಿನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

@farhan.safdar.01 ಎಂಬ ಹೆಸರಿನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಜೂನ್​​ 04ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 2.2ಮಿಲಿಯನ್​​ ಅಂದರೆ 20ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:26 pm, Tue, 18 June 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು