CCTV Footage: ನಿಂತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಹೋಮ್ ಗಾರ್ಡ್; ಸಿಸಿಟಿವಿಯಲ್ಲಿ ಸೆರೆ
ಪೊಲೀಸ್ ಠಾಣೆ ಬಳಿ ಕೆಲಸ ನಿರ್ವಹಿಸುತ್ತಿದ್ದ ಹೋಮ್ ಗಾರ್ಡ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.
ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ನಿಂತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ರಾಜಸ್ಥಾನದ ಅಜ್ಮೀರ್‌ನಿಂದ ಬಂದಿದೆ ಎನ್ನಲಾಗಿದೆ. ಅಲ್ಲಿನ ಪೊಲೀಸ್ ಠಾಣೆ ಬಳಿ ಕೆಲಸ ನಿರ್ವಹಿಸುತ್ತಿದ್ದ ಹೋಮ್ ಗಾರ್ಡ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೆಲ ಕ್ಷಣ ನೋವಿನಿಂದ ಒದ್ದಾಡುತ್ತಾ ಪ್ರಾಣ ಬಿಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಮಾಹಿತಿ ಪ್ರಕಾರ ಹೋಮ್ ಗಾರ್ಡ್ ಹೆಸರು ಹರಿರಾಮ್ ಗುರ್ಜರ್(35). ಈತ ಡಿಟಿಎಚ್ ಸಂಪರ್ಕ ಕಚೇರಿಯಲ್ಲಿ ಕೆಲ ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಜುಲೈ 5ರಂದು ಕಚಾರಿ ರಸ್ತೆಯಲ್ಲಿರುವ ಎಚ್ ಡಿಎಫ್ ಸಿ ಬ್ಯಾಂಕ್ ಗೆ ಹೋಗಿದ್ದು, ಕೆಲಸದಲ್ಲಿರುವಾಗಲೇ ಏಕಾಏಕಿ ಕುಸಿದು ಬಿದ್ದಿದ್ದಾರೆ.
ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ:
View this post on Instagram
ಇದನ್ನೂ ಓದಿ: 20 ಪ್ರಿಯಕರರಿಂದ 20 ಐಫೋನ್ ಗಿಫ್ಟ್, ಕೊನೆಗೆ ಎಲ್ಲ ಫೋನ್ ಮಾರಿ ಹೊಸ ಮನೆ ಖರೀದಿಸಿದ ಯುವತಿ
ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಹರಿರಾಮ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಗೃಹರಕ್ಷಕ ದಳದ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಮಾಡಲು ಕುಟುಂಬಸ್ಥರು ನಿರಾಕರಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸದೆ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ