AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಜಾರೋಷವಾಗಿ ದೇವಾಲಯದ ಬಳಿ ಡ್ರಗ್ಸ್‌ ಸೇವನೆ; ಎತ್ತ ಸಾಗುತ್ತಿದೆ ನಮ್ಮ ಯುವ ಸಮಾಜ

ಇತ್ತೀಚಿಗಂತೂ ಯುವ ಜನತೆ ಡ್ರಗ್ಸ್‌, ಮಧ್ಯ ಸೇವನೆ, ಸಿಗರೇಟ್‌ ಸೇವನೆ ಎನ್ನುತ್ತಾ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನಗಳು ನಡೆಯುತ್ತಲೇ ಇವೆ. ಹೀಗಿದ್ರೂ ಕೂಡಾ ಅದೆಷ್ಟೋ ಜನರು ಇಂದಿಗೂ ರಾಜರೋಷವಾಗಿ ಗಂಜಾ, ಡ್ರಗ್ಸ್‌ ಸೇವನೆ ಮಾಡ್ತಿದ್ದಾರೆ. ಇದಕ್ಕೆ ಸೂಕ್ತ ನಿದರ್ಶನ ಎಂಬಂತಿರುವ ವಿಡಿಯೋ ಇದೀಗ ವೈರಲ್‌ ಆಗಿದ್ದು, ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಯಾರ ಭಯವೂ ಇಲ್ಲದೆ ಮಧ್ಯರಾತ್ರಿ ದೇವಾಲಯದ ಆವರಣದಲ್ಲಿ ಡ್ರಗ್ಸ್‌ ಸೇವನೆ ಮಾಡಿದ್ದಾರೆ.

Video: ರಾಜಾರೋಷವಾಗಿ ದೇವಾಲಯದ ಬಳಿ ಡ್ರಗ್ಸ್‌ ಸೇವನೆ; ಎತ್ತ ಸಾಗುತ್ತಿದೆ ನಮ್ಮ ಯುವ ಸಮಾಜ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Aug 08, 2024 | 12:38 PM

Share

ಮಾದಕ ವಸ್ತುಗಳ ಸೇವನೆ ಅತೀ ದೊಡ್ಡ ಪಿಡುಗು ಅಂತಾನೇ ಹೇಳಬಹುದು. ದಶಕಗಳಿಂದಲೂ ಮಾದಕ ವ್ಯಸನ ಗಂಭೀರ ಸಮಸ್ಯೆಯಾಗಿ ಕಾಡುತ್ತಲೇ ಇದೆ. ಹೆಚ್ಚಾಗಿ ಯುವ ಜನರು, ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನದ ದಾಸರಾಗುತ್ತಿದ್ದಾರೆ. ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನಗಳು, ಜಾಗೃತಿ ಕಾರ್ಯಗಳು ನಡೆಯುತ್ತಲೇ ಇವೆ. ಹೀಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದಿದ್ರೂ ಕೂಡಾ ಅದೆಷ್ಟೋ ಯುವ ಜನರು ಇಂದಿಗೂ ಡ್ರಗ್ಸ್‌, ಗಾಂಜಾ ಅಂತ ಮಾದಕ ವಸ್ತುಗಳನ್ನು ನಿರಂತರವಾಗಿ ಸೇವಿಸುತ್ತಿದ್ದಾರೆ. ಇದಕ್ಕೆ ಸೂಕ್ತ ನಿದರ್ಶನ ಎಂಬಂತಿರುವ ಆಘಾತಕಾರಿ ವಿಡಿಯೋ ಇದೀಗ ವೈರಲ್‌ ಆಗಿದ್ದು, ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಯಾರ ಭಯವೂ ಇಲ್ಲದೆ ತಡರಾತ್ರಿಯಲ್ಲಿ ದೇವಾಲಯದ ಆವರಣದಲ್ಲಿ ಡ್ರಗ್ಸ್‌ ಸೇವನೆ ಮಾಡಿದ್ದಾರೆ.

ಈ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದ್ದು, ಇಲ್ಲಿನ ಮನಾಲಿಯ ಭೂತನಾಥ ದೇವಾಲಯದ ಪಕ್ಕದಲ್ಲಿರುವ ಸ್ಮಶಾನದ ಆವರಣದಲ್ಲಿ ಯಾರ ಭಯವೂ ಇಲ್ಲದೆ ಮಧ್ಯರಾತ್ರಿ ಮೂವರು ಯುವಕರು ಡ್ರಗ್ಸ್‌ ಸೇವನೆ ಮಾಡಿದ್ದಾರೆ. ಈ ದೃಶ್ಯವನ್ನು ಅಲ್ಲಿದ್ದ ಯಾರೋ ರೆಕಾರ್ಡ್‌ ಮಾಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು Gems of Himachal ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಕುಲು ಮನಾಲಿ ಪೊಲೀಸರನ್ನು ಟ್ಯಾಗ್‌ ಮಾಡಿ “ಅವರಿಗೆ ಯಾವ ಭಯವೂ ಇಲ್ಲ, ತಡರಾತ್ರಿ ಮನಾಲಿಯ ಭೂತನಾಥ ದೇವಸ್ಥಾನದ ಸ್ಮಶಾನದ ಬಳಿ ಕೆಲ ಯುವಕರು ಡ್ರಗ್ಸ್‌ ಸೇವಿಸುತ್ತಿರುವುದು ಕಂಡು ಬಂದಿದೆ. ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಇಲ್ಲದಿದ್ದರೆ ಯುವ ಪೀಳಿಗೆಯೇ ನಾಶವಾಗುತ್ತದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವ ವಿಡಿಯೋದಲ್ಲಿ ಯಾರ ಭಯವೂ ಇಲ್ಲದೆ ಒಬ್ಬಳು ಯುವತಿ ಹಾಗೂ ಇಬ್ಬರು ಯುವಕರು ಜೊತೆ ಸೇರಿ ಸಿರಿಂಜ್‌ ಮೂಲಕ ಡ್ರಗ್ಸ್‌ ತೆಗೆದುಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿದ್ಯಾದೇಗುಲದಲ್ಲಿ ಇದೆಂತಾ ಅಸಹ್ಯ ಕೃತ್ಯ, ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಕಿಸ್ಸಿಂಗ್‌

ಆಗಸ್ಟ್‌ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಿಡಿಯೋ ಮಾಡಿದವರು ಅದೇ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದರೆ ಚೆನ್ನಾಗಿ ಇರುತ್ತಿತ್ತುʼ ಎಂದು ತಮ್ಮ ಅಭಿಪ್ರಾಯವನ್ನು ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂಬ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Mon, 5 August 24

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ