Viral Video: ಸ್ವೀಟ್ ಬಾಕ್ಸ್ ಪ್ಯಾಕ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ಖುಷಿಯಿಂದ ಮಾತನಾಡುತ್ತಿದ್ದ ವ್ಯಕ್ತಿ ಇದಕ್ಕಿದ್ದಂತೆ ಸಾವನ್ನಪ್ಪುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದೀಗಾ ಇಂತದ್ದೇ ಘಟನೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂಗಡಿಯಲ್ಲಿ ಸ್ವೀಟ್ ಬಾಕ್ಸ್ ಪ್ಯಾಕ್ ಮಾಡುತ್ತಿದ್ದಂತೆ ವ್ಯಕ್ತಿಯೊರ್ವ ಕುಸಿದು ಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಉತ್ತರ ಪ್ರದೇಶ: ಆಗ್ರಾದ ಕಮಲಾ ನಗರದಲ್ಲಿನ ಸಿಹಿತಿಂಡಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಇದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಕುಳಿತವರು ಕುಳಿತಿದ್ದಂತೆ, ನಿಂತಿದ್ದವರು ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಈಗಷ್ಟೇ ಖುಷಿಯಿಂದ ಮಾತನಾಡುತ್ತಿದ್ದ ವ್ಯಕ್ತಿ ಕ್ಷಣಾರ್ಧದಲ್ಲೇ ಸಾವನ್ನಪ್ಪುತ್ತಿರುವುದು ಸಾಮಾನ್ಯವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದೀಗಾ ಈ ಸಿಸಿಟಿವಿ ದೃಶ್ಯಾವಳಿ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರನ್ನು ಬೆಚ್ಚಿಬೀಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಅಂಗಡಿಯೊಳಗೆ ವ್ಯಕ್ತಿಯೊರ್ವ ಕುಳಿತುಕೊಂಡು ಸ್ವೀಟ್ ಬಾಕ್ಸ್ ಪ್ಯಾಕ್ ಮಾಡುತ್ತಿರುವುದನ್ನು ಕಾಣಬಹುದು. ಜೊತೆಗೆ ಅಂಗಡಿಯಲ್ಲಿ ಇನ್ನುಳಿದ ಮೂರ್ನಾಲ್ಕು ಸಿಬ್ಬಂದಿಗಳನ್ನು ಮಾತನಾಡುತ್ತಿರುವುದು ಕಾಣಬಹುದು. ಕೆಳಗೆ ಕುಳಿತು ಸ್ವೀಟ್ ಬಾಕ್ಸ್‌ಗಳನ್ನು ಪ್ಯಾಕ್ ಮಾಡುತ್ತಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬೀಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಡೆಂಟಲ್ ಕ್ಲಿನಿಕ್ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು; 2 ಲಕ್ಷ ರೂ. ಪರಿಹಾರ ಧನ
ವ್ಯಕ್ತಿ ಕುಸಿದು ಬೀಳುವ ವಿಡಿಯೋ ಇಲ್ಲಿದೆ ನೋಡಿ:
आगरा में मिठाई की दुकान पर काम कर रहे युवक की हार्ट अटैक से मौत pic.twitter.com/zq4PtvjlKm
— Priya singh (@priyarajputlive) February 2, 2024
ಕುಸಿದು ಬಿದ್ದ ವ್ಯಕ್ತಿಯನ್ನು ತಕ್ಷಣ ಉಳಿದ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಆತ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಪರೀಕ್ಷೆ ನಡೆಸಲಾಗುತ್ತಿದೆ” ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ