Video: ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸ್ಟಂಟ್​

|

Updated on: Sep 29, 2024 | 4:18 PM

ಯುವಕನೊಬ್ಬ 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಹತ್ತಿ ಪುಲ್-ಅಪ್‌ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. "ತನಿಖೆ ಮಾಡಲಾಗುತ್ತಿದೆ, ತನಿಖೆಯ ನಂತರ, ನಿಯಮಗಳ ಪ್ರಕಾರ ಸ್ಟಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಅಮೇಥಿ ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಯುವಕನೊಬ್ಬ ಸೋಶಿಯಲ್​​ ಮೀಡಿಯಾಗಳಲ್ಲಿ ಫೇಮಸ್​ ಆಗಲು 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಹತ್ತಿ ಪುಲ್-ಅಪ್‌ ಮಾಡಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಬಳಿಯ ರಾಷ್ಟ್ರೀಯ ಹೆದ್ದಾರಿ 931 ರಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಇಂತಹ ಹುಚ್ಚು ಸಾಹಸಕ್ಕೆ ಕೈ ಹಾಕುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಕಷ್ಟು ಜನರು ಪೊಲೀಸರಿಗೆ ಆಗ್ರಹಿಸಿದ್ದಾರೆ.

ಈ ಅಪಾಯಕಾರಿ ಸಾಹಸದಲ್ಲಿ ಇಬ್ಬರು ಯುವಕರು ಭಾಗಿಯಾಗಿದ್ದು, ಒಬ್ಬ ಸೈನ್‌ಬೋರ್ಡ್‌ನ ಮೇಲೆ ಪುಲ್-ಅಪ್‌ ಮಾಡುತ್ತಿದ್ದರೆ, ಮತ್ತೊಬ್ಬ ಸೈನ್‌ಬೋರ್ಡ್‌ನ ಬದಿಯಲ್ಲಿ ಕುಳಿತು ವಿಡಿಯೋ ರೆಕಾರ್ಡ್​​ ಮಾಡುತ್ತಿರುವುದು ಕಂಡು ಬಂದಿದೆ.

ಇದನ್ನೂ ಓದಿ: ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೈರಲ್ ವೀಡಿಯೊವನ್ನು ತನಿಖೆ ಮಾಡಲಾಗುತ್ತಿದೆ, ತನಿಖೆಯ ನಂತರ, ನಿಯಮಗಳ ಪ್ರಕಾರ ಸ್ಟಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅಮೇಥಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Sun, 29 September 24