Viral Video: ತಿಂಗಳಿಗೆ 800 ರೂ ಸಂಬಳ ಪಡೆಯುತ್ತಿದ್ದ ಈಕೆ ಈಗ ಕೋಟಿ ಕೋಟಿ ಆಸ್ತಿಯ ಒಡತಿ

ಮುಂಬೈನಲ್ಲಿ ಮಧ್ಯಮ ವರ್ಗದ ಗುಜರಾತಿ ಕುಟುಂಬದಲ್ಲಿ ಜನಿಸಿದ್ದ ನೀತಾ ಅವರು ತನ್ನ ನಾರ್ಸಿ ಮೊಂಜಿ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್‌ನಲ್ಲಿ ಪದವಿ ಪಡೆದಿದ್ದರು. ಬಳಿಕ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ನೀತಾ ತಿಂಗಳಿಗೆ 800 ರೂಪಾಯಿ ಸಂಬಳ ಪಡೆಯುತ್ತಿದ್ದರು. ಸಂದರ್ಶನವೊಂದರಲ್ಲಿ ನೀತಾ ತಮ್ಮ ಆರಂಭಿಕ ಜೀವನದ ಬಗ್ಗೆ ಹೇಳಿಕೊಂಡಿರುವುದು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

Viral Video: ತಿಂಗಳಿಗೆ 800 ರೂ ಸಂಬಳ ಪಡೆಯುತ್ತಿದ್ದ ಈಕೆ ಈಗ ಕೋಟಿ ಕೋಟಿ ಆಸ್ತಿಯ ಒಡತಿ
Nita AmbaniImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Mar 13, 2024 | 12:36 PM

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿಯವರ ಹಳೆಯ ಸಂದರ್ಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಅಂಬಾನಿ ಕುಟುಂಬದ ಸೊಸೆಯಾದ ಮೇಲೂ ಕೂಡ ಕೇವಲ 800 ರೂ ಸಂಬಳಕ್ಕೆ ಶಾಲಾ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದೆ ಎಂದು ಸಂದರ್ಶನದಲ್ಲಿ ನೀತಾ ಅಂಬಾನಿ ಹೇಳಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮಧ್ಯಮ ವರ್ಗದ ಗುಜರಾತಿ ಕುಟುಂಬದಲ್ಲಿ ಜನಿಸಿದ ನೀತಾ ನಾರ್ಸಿ ಮೊಂಜಿ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್‌ನಲ್ಲಿ ಪದವಿ ಪಡೆದಿದ್ದರು. ಇದಲ್ಲದೇ ನೃತ್ಯಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದ ನೀತಾ. ಸನ್​​​ಪ್ಲವರ್​​​ ನರ್ಸರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಈ ಸಮಯದಲ್ಲಿ ಅವರಿಗೆ ಸಿಗುತ್ತಿದ್ದ ಸಂಬಳ ತಿಂಗಳಿಗೆ 800 ರೂ. 1985 ರಲ್ಲಿ ಧೀರೂಭಾಯಿ ಅಂಬಾನಿ ಮತ್ತು ಕೋಕಿಲಾಬೆನ್ ಅಂಬಾನಿಯವರ ಹಿರಿಯ ಮಗ ಮುಖೇಶ್ ಅಂಬಾನಿಯನ್ನು ನೀತಾ ಮದುವೆಯಾದರು. “ಕೋಟ್ಯಾಧೀಶ್ವರನ ಮನೆಯ ಸೊಸೆಯಾಗಿದ್ದರೂ ಕೂಡ ಒಂದು ವರ್ಷಗಳ ವರೆಗೆ 800 ರೂ ಸಂಬಳಕ್ಕೆ ಶಾಲಾ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದೆ. ನನ್ನನ್ನು ನೋಡಿ ಸಾಕಷ್ಟು ಜನರು ಅಪಹಾಸ್ಯ ಮಾಡಿದ್ದರೂ ಸಹ ನನ್ನ ಕೆಲಸ ನನಗೆ ತೃಪ್ತಿ ನೀಡಿತ್ತು” ಎಂದು ನೀತಾ ಅಂಬಾನಿಯವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಸಂದರ್ಶನದ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಂಪೂರ್ಣವಾಗಿ ಚಿನ್ನ, ವಜ್ರದಿಂದ ವಿನ್ಯಾಸಗೊಳಿಸಿದ ಬ್ಲೌಸ್‌ ತೊಟ್ಟು ಮಿಂಚಿದ ಅಂಬಾನಿಯ ಏಕೈಕ ಪುತ್ರಿ

‘ರೆಂಡೆಜ್ವಸ್ ವಿತ್ ಸಿಮಿ ಗರೆವಾಲ್’ ಚಾಟ್​​​ ಶೋ ಒಂದರಲ್ಲಿನ ಹಳೆಯ ತುಣುಕನ್ನು ಒಂದು ದಿನದ ಹಿಂದೆ ಹಂಚಿಕೊಂಡಾಗಿನಿಂದ Instagram ನಲ್ಲಿ 3.3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಇದೀಗ ನೀತಾ ಅಂಬಾನಿ ಕೋಟಿ ಕೋಟಿ ಆಸ್ತಿಯ ಒಡತಿಯಾಗಿದ್ದಾರೆ. ಸದ್ಯ ತಮ್ಮ ಐಷಾರಾಮಿ ಜೀವನದಿಂದಲೇ ಸಖತ್​​ ಟ್ರೆಂಡ್​​ ಸೆಟ್​​ ಕ್ರಿಯೇಟ್​​ ಮಾಡಿದ್ದಾರೆ ನೀತಾ ಅಂಬಾನಿ. ಇತ್ತೀಚೆಗಷ್ಟೇ ಕಿರಿಯ ಪುತ್ರ ಅನಂತ್​ ಅಂಬಾನಿಯವರ ವಿವಾಹ ಪೂರ್ವ ಸಮಾರಂಭದಲ್ಲಿ ಕೋಟಿ ಕೋಟಿ ಬೆಲೆ ಬಾಳುವ ಆಭರಣದಲ್ಲಿ ಮಿಂಚಿದ್ದ ನೀತಾ ಅಂಬಾನಿ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Wed, 13 March 24

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್