Viral: ಆಟವಾಡುತ್ತಿದ್ದ ಬಾಲಕಿಯ ಮೇಲೆ ಸಾಕು ನಾಯಿ ದಾಳಿ; ವಿಡಿಯೋ

ವನ್ಯಾ ಚೌಹಾಣ್ ಎಂದು ಗುರುತಿಸಲಾಗಿರುವ 6 ವರ್ಷದ ಬಾಲಕಿ ಸೊಸೈಟಿಯ ಕಾಂಪೌಂಡ್‌ನಲ್ಲಿ ಆಟವಾಡುತ್ತಿರುವ ವೇಳೆ ಏಕಾಏಕಿ ನಾಯಿ ಬಾಲಕಿಯ ಮೇಲೆ ದಾಳಿ ಮಾಡಿದೆ. ನಾಯಿಯ ದಾಳಿಯಿಂದ ಬಾಲಕಿಯ ಕೈಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Follow us
ಅಕ್ಷತಾ ವರ್ಕಾಡಿ
|

Updated on: Apr 30, 2024 | 11:45 AM

ಗಾಜಿಯಾಬಾದ್ : ಸಾಕು ನಾಯಿಯೊಂದು 6 ವರ್ಷದ  ಬಾಲಕಿಯ ಮೇಲೆ ದಾಳಿ ನಡೆಸಿ ಕೈ ಕಚ್ಚಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪಾಶ್ ಸೊಸೈಟಿಯೊಂದರಲ್ಲಿ ನಡೆದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ. ನಾಯಿಯ ಮಾಲೀಕರು ಇರುವಾಗಲೇ ಸಾಕು ನಾಯಿ ಅಪ್ರಾಪ್ತ ಬಾಲಕಿಯ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ.

ಬುಧವಾರ (ಏಪ್ರಿಲ್ 24) ಈ ಘಟನೆ ಸಂಭವಿಸಿದ್ದು, ವನ್ಯಾ ಚೌಹಾಣ್ ಎಂದು ಗುರುತಿಸಲಾಗಿರುವ ಅಪ್ರಾಪ್ತ ಬಾಲಕಿ ಸೊಸೈಟಿಯ ಕಾಂಪೌಂಡ್‌ನಲ್ಲಿ ಆಟವಾಡುತ್ತಿರುವ ವೇಳೆ ಏಕಾಏಕಿ ನಾಯಿ ಬಾಲಕಿಯ ಮೇಲೆ ದಾಳಿ ಮಾಡಿದೆ. ಜರ್ಮನ್ ಶೆಫರ್ಡ್ ತಳಿಯ ಶ್ವಾನವಾಗಿದ್ದು, ಬಾಲಕಿಯ ಮೇಲೆ ಕಚ್ಚಲು ಮುಂದಾದ ವೇಳೆ ಶ್ವಾನದ ಮಾಲೀಕಿ ಎಳೆದೊಯ್ದಲು ಪ್ರಯತ್ನಿಸಿದ್ದು, ವಿಡಿಯೋದಲ್ಲಿ ಸೆರೆಯಾಗಿದೆ. ನಾಯಿಯ ದಾಳಿಯಿಂದ ಬಾಲಕಿಯ ಕೈಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಅತ್ತೆ ಜೊತೆಗೆ ಮಾರ್ವಾಡಿ ಭಾಷೆ ಮಾತನಾಡುವ ರೋಬೋಟ್ ಸೊಸೆ, ಇವಳು ಸೂರ್ಯಪ್ರಕಾಶನ ಪತ್ನಿ

ವಿಡಿಯೋ ಎಲ್ಲೆಡೆ ವೈರಲ್​​ ಆಗಿದ್ದು, ನಾಯಿ ಮಾಲೀಕರು ತಮ್ಮ ನಾಯಿಗಳನ್ನು ಸಾಕುಪ್ರಾಣಿಗಳಾಗಿ ಇಟ್ಟುಕೊಳ್ಳುವ ಮೊದಲು ಅವುಗಳನ್ನು ನಿಯಂತ್ರಿಸಲು ಕಲಿಯಬೇಕು. ಅವರು ನಾಯಿಯ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕು ಮತ್ತು ಅದನ್ನು ಸಾರ್ವಜನಿಕವಾಗಿ ತೆಗೆದುಕೊಳ್ಳುವ ಮೊದಲು ಅದನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅವರು ಗಣನೆಗೆ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?