Video Viral: ತಡವಾಗಿ ಬಂದ ಶಿಕ್ಷಕಿಯ ಬಟ್ಟೆ ಹಿಡಿದೆಳೆದು ಥಳಿಸಿದ ಪ್ರಿನ್ಸ್ ಪಾಲ್
ಶಿಕ್ಷಕಿ ಹಾಗೂ ಪ್ರಿನ್ಸ್ ಪಾಲ್ ನಡುವೆ ತೀವ್ರ ವಾಗ್ವಾದ ಬಳಿಕ ಹೊಡೆದಾಟ ನಡೆದಿದೆ. ಇವರಿಬ್ಬರ ಜಗಳದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಆಗ್ರಾ: ಶಾಲೆಯ ಪ್ರಾಂಶುಪಾಲರು ಶಿಕ್ಷಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಶಿಕ್ಷಕಿ ಶಾಲೆಗೆ ತಡವಾಗಿ ಬಂದಿದ್ದು, ಇದರಿಂದ ಕೋಪಕೊಂಡ ಪ್ರಿನ್ಸ್ ಪಾಲ್ ಬಟ್ಟೆ ಹಿಡಿದೆಳೆದು ಮನಬದ್ದಂತೆ ಥಳಿಸಿದ್ದಾರೆ. ಶಿಕ್ಷಕಿ ಹಾಗೂ ಪ್ರಿನ್ಸ್ ಪಾಲ್ ನಡುವೆ ಗುದ್ದಾಟ ನಡೆದಿದ್ದು, ಇಬ್ಬರಿಬ್ಬರ ಜಗಳದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಮೇ 3 ರಂದು ಆಗ್ರಾದ ಪ್ರಾಥಮಿಕ ಶಾಲೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಅದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಒಂದೇ ದಿನದಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.ಶಾಲೆಗೆ ತಡವಾಗಿ ಬಂದಿದ್ದಕ್ಕಾಗಿ ಶಿಕ್ಷಕಿ ಗುಂಜಾ ಚೌಧರಿ ಅವರನ್ನು ಪ್ರಾಂಶುಪಾಲರು ಪ್ರಶ್ನಿಸಿದ್ದಾರೆ. ಬಳಿಕ ಇವರಿಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಉದ್ವಿಗ್ನತೆ ಹೆಚ್ಚಾದಂತೆ, ಘರ್ಷಣೆಯು ದೈಹಿಕವಾಗಿ ತಿರುಗಿದ್ದು,ವೀಡಿಯೊದಲ್ಲಿ ಸೆರೆಯಾಗಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
There was a fight between a female teacher and the school principal for coming late to school.
The video went viral on social media & the case is of the primary school of Singna village in Agra.
— Aarav Gautam (@IAmAarav8) May 3, 2024
ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ
ಸ್ಥಳದಲ್ಲಿದ್ದ ಇತರ ಸಿಬ್ಬಂದಿಗಳು ಮಧ್ಯಪ್ರವೇಶಿಸಿ ಇಬ್ಬರನ್ನು ಬೇರ್ಪಡಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರ ಪ್ರಯತ್ನಗಳು ವ್ಯರ್ಥವಾಯಿತು. ಘಟನೆ ಸಂಬಂಧ ಸಿಕಂದರಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎರಡೂ ಕಡೆಯವರು ಪರಸ್ಪರ ದೂರು ದಾಖಲಿಸಿಕೊಂಡಿದ್ದಾರೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯಿಸಿದ್ದು, “ಪಾಠ ಕಳಿಸುವ ಶಿಕ್ಷಕರೇ ಈ ರೀತಿಯ ವರ್ತನೆ ತೋರಿದರೆ ಮಕ್ಕಳ ಗತಿಯೇನು” ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 3:22 pm, Sat, 4 May 24