Viral Video: ಸೆಲ್ಫಿ ಕ್ರೇಜ್: ಕೂದಲೆಳೆ ಅಂತರದಲ್ಲಿ ಭಾರೀ ಅಪಘಾತದಿಂದ ಪಾರಾದ ಮಹಿಳೆ

ಚಲಿಸುತ್ತಿದ್ದ ರೈಲಿನ ಮುಂದೆ ಸೆಲ್ಫಿ ತೆಗೆಯಲು ಯತ್ನಿಸಿದ ಮಹಿಳೆಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತೈವಾನ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೆಲ್ಫಿ ಮತ್ತು ರೀಲ್ಸ್‌ಗಳ ಹುಚ್ಚು ಜನರನ್ನು ಅಪಾಯಕ್ಕೆ ತಳ್ಳುತ್ತಿದೆ ಎಂದು ಈ ಘಟನೆ ಎತ್ತಿ ತೋರಿಸುತ್ತದೆ. ಸದ್ಯ ವಿಡಿಯೋ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ಸೆಲ್ಫಿ ಕ್ರೇಜ್: ಕೂದಲೆಳೆ ಅಂತರದಲ್ಲಿ ಭಾರೀ ಅಪಘಾತದಿಂದ ಪಾರಾದ ಮಹಿಳೆ
Video Viral
Follow us
ಅಕ್ಷತಾ ವರ್ಕಾಡಿ
|

Updated on: Dec 18, 2024 | 12:11 PM

ಸೆಲ್ಫಿ, ರೀಲ್ಸ್​ ಕ್ರೇಜ್ ಜನರಲ್ಲಿ ಹೆಚ್ಚಾಗಿದ್ದು, ಅದಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಸಾಮಾಜಿಕ ಮಾಧ್ಯಮದ ಈ ಯುಗದಲ್ಲಿ, ಈ ಪ್ರವೃತ್ತಿಯು ಅನೇಕ ಜನರ ಪ್ರಾಣವನ್ನು ತೆಗೆದುಕೊಂಡಿದೆ. ಇದಕ್ಕೆ ಹಲವಾರು ಉದಾಹರಣೆಗಳನ್ನು ನಾವು ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಿರುತ್ತೇವೆ. ಇದೀಗ ತೈವಾನ್‌ನಲ್ಲೇ ಅಂತದ್ದೇ ಪ್ರಕರಣ ದಾಖಲಾಗಿದೆ. ಚಲಿಸುವ ರೈಲಿನ ಮುಂದೆ ನಿಂತು ಮಹಿಳೆಯೊಬ್ಬಳು ಸೆಲ್ಫಿ ತೆಗೆಯಲು ಹೋಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅಪಘಾತದಿಂದ ಪಾರಾಗಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಡಿಸೆಂಬರ್ 14 ರಂದು ಲುಯಿ ಎಂಬ ಮಹಿಳೆ ರಜೆಗಾಗಿ ತೈವಾನ್‌ನ ಚಿಯಾಯ್‌ನಲ್ಲಿರುವ ಅಲಿಶಾನ್ ಫಾರೆಸ್ಟ್ ರೈಲ್ವೆ ಬಳಿ ಹೋಗಿದ್ದಾಳೆ. ದೂರದಿಂದ ರೈಲು ಬರುತ್ತಿರುವುದನ್ನು ಕಂಡು ತಕ್ಷಣ ಮಹಿಳೆ ಸೆಲ್ಫಿ ತೆಗೆದುಕೊಳ್ಳಲು ರೈಲಿನ ಹಳಿಯ ಪಕ್ಕದಲ್ಲಿ ನಿಂತಿದ್ದಾಳೆ. ಆದರೆ ಬಂದ ರಭಸಕ್ಕೆ ಆಕೆಗೆ ಡಿಕ್ಕಿ ಹೊಡೆದಿದೆ. ಸದ್ಯ ಸಣ್ಣಪುಟ್ಟ ಗಾಯಗಳಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಡಿಕ್ಕಿಯ ರಭಸಕ್ಕೆ ಲೂಯಿಸ್ ಅವರ ಎಡಗಾಲಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೈಲಿನ ಮಹಿಳಾ ಬೋಗಿಗೆ ನಗ್ನವಾಗಿ ನುಗ್ಗಿದ ವ್ಯಕ್ತಿ; ಗಾಬರಿಗೊಂಡು ಕಿರುಚಾಡಿದ ಮಹಿಳಾ ಪ್ರಯಾಣಿಕರು

ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯವನ್ನು @Bubblebathgirl ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 16ರಂದು ಹಂಚಿಕೊಂಡಿರುವ ವಿಡಿಯೋ ಸದ್ಯ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ. ಘಟನೆಯಿಂದಾಗಿ ರೈಲು ಸಂಚಾರದಲ್ಲಿ 60 ನಿಮಿಷಗಳ ವಿಳಂಬವಾಗಿದ್ದು, ಸಾವಿರಾರೂ ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ