Video: ಖುಷಿಯಿಂದ ಡಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಕುಸಿದು ಬಿದ್ದು ಸಾವು; ವಿಡಿಯೋ ಇಲ್ಲಿದೆ ನೋಡಿ
ಶಿಕ್ಷಕರೊಬ್ಬರು ಖುಷಿಯಿಂದ ಡಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತವಾಗಿದ್ದು, ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಭಯಾನಕ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.
ಜೈಪುರ: ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಶಿಕ್ಷಕರೊಬ್ಬರು ಖುಷಿಯಿಂದ ಡಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತವಾಗಿದ್ದು, ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಸಮಾರಂಭವೊಂದರಲ್ಲಿ ತೃತೀಯಲಿಂಗಿಯೊಂದಿಗೆ ನೃತ್ಯ ಮಾಡುವಾಗ ಶಿಕ್ಷಕರ ಕುಸಿದು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಮೃತ ಶಿಕ್ಷಕನನ್ನು ಮನ್ನಾ ರಾಮ್ ಜಖರ್ ಎಂದು ಗುರುತಿಸಲಾಗಿದೆ. ಈ ಭಯಾನಕ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶಿಕ್ಷಕರ ನಿವೃತ್ತಿ ಸಮಾರಂಭದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಈ ವೇಳೆ ನೃತ್ಯ ತಂಡವನ್ನು ಕರೆಸಲಾಗಿದ್ದು, ನೃತ್ಯ ಸಂಗೀತ ಕಾರ್ಯಕ್ರಮ ನಡೆಯುತ್ತಿರುವಾಗ ಶಿಕ್ಷಕ ಖಷಿಯಿಂದ ಕುಣಿಯಲು ಪ್ರಾರಂಭಿಸಿದ್ದಾರೆ. ಆದರೆ ಖುಷಿ ಕೆಲಕ್ಷಣದಲ್ಲೇ ಮರೆಯಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Video Viral : ವೃದ್ದೆಯನ್ನು ಅಲ್ಯೂಮಿನಿಯಂ ಪಾತ್ರೆಯಲ್ಲಿ ಕೂರಿಸಿ ಹೊಳೆ ದಾಟಿ ಆಸ್ಪತ್ರೆಗೆ ಕರೆದುಕೊಂಡು ಬಂದ ವ್ಯಕ್ತಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

