Viral Video: ಮೋಡಿ ಮಾಡುತ್ತಿದೆ ‘ಬಹರ್ಲಾ ಹಾ ಮಧುಮಾಸ್’ಹಾಡಿಗೆ ಈ ಜೋಡಿಯ ನೃತ್ಯ

ಮರಾಠಿ ಹಾಡು ಬಹರ್ಲಾ ಹಾ ಮಧುಮಾಸ್ ಸಧ್ಯಕ್ಕೆ ಇನ್ಸ್ಟಾಗ್ರಾಮ್ ರೀಲ್ಸ್ ನಲ್ಲಿ ಟ್ರೆಂಡಿಂಗ್ ನಲ್ಲಿರುವ ಹಾಡು. ಈ ಹಾಡಿಗೆ ಜೋಡಿಯೊಂದು ಹೆಜ್ಜೆ ಹಾಕುವ ಮೂಲಕ ನೋಡುಗರ ಗಮನ ಸೆಳೆದಿದೆ.

Viral Video: ಮೋಡಿ ಮಾಡುತ್ತಿದೆ ‘ಬಹರ್ಲಾ ಹಾ ಮಧುಮಾಸ್’ಹಾಡಿಗೆ ಈ ಜೋಡಿಯ ನೃತ್ಯ
Video Viral
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: May 10, 2023 | 6:35 PM

ಸಾಮಾಜಿಕ ಜಾಲತಾಣದಲ್ಲಿ ಡಾನ್ಸ್ ವೀಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿರುತ್ತವೆ. ಜನರು ವಿವಿಧ ನೃತ್ಯ ಸಂಯೋಜನೆಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಕೆಲವು ಹಾಡುಗಳು ಮತ್ತು ಅದರ ಜೊತೆಗಿನ ನೃತ್ಯ ಸಂಯೋಜನೆಯು ಪ್ರೇಕ್ಷಕರನ್ನು ಆಕರ್ಷಿಸುತ್ತದೆ. ಯಾವುದಾದರೂ ಒಂದು ಹಾಡು ಹಿಟ್ ಆದರೆ ಸಾಕು ಜನರೆಲ್ಲರು ಅದೇ ಹಾಡಿಗೆ ರೀಲ್ಸ್ ವೀಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಅದೇ ರೀತಿ ಮಹಾರಾಷ್ಟ್ರ ಶಾಹಿರ್ ಎಂಬ ಮರಾಠಿ ಚಿತ್ರದ ‘ಬಹರ್ಲಾ ಹಾ ಮಧುಮಾಸ್ ಎಂಬ ಹಾಡು ಇತ್ತೀಚಿಗೆ ಹೆಚ್ಚು ಟ್ರೆಂಡಿನಲ್ಲಿದ್ದು, ಅನೇಕ ಜನರು ಈ ಹಾಡಿಗೆ ಹೆಜ್ಜೆಗಳನ್ನಾಕುತ್ತ ರೀಲ್ಸ್ ವೀಡಿಯೋಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಈ ಜೋಡಿಯ ನೃತ್ಯವಂತೂ ಎಲ್ಲರನ್ನು ಮೋಡಿ ಮಾಡಿದೆ.

ಅಕ್ಷಯ ಉದಯಕುಮಾರ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಡಾನ್ಸ್ ವೀಡಿಯೋವನ್ನು ಹಂಚಿಕೊಂಡಿದ್ದು, ಇವರ ಡಾನ್ಸ್ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಮಹಿಳೆ ಲಕ್ಷಣವಾಗಿ ಸೀರೆ ಉಟ್ಟು ಹಾಗೂ ಹುಡುಗ ಪಂಚೆ ತೊಟ್ಟು, ಜೋಡಿಯು ಬಹರ್ಲಾ ಹಾ ಮಧುಮಾಸ್ ಹಾಡಿಗೆ ಅದ್ಭುತವಾಗಿ ನೃತ್ಯ ಮಾಡುವುದನ್ನು ನೋಡಬಹುದು.

ಇದನ್ನೂ ಓದಿ: ‘ಬೆಕ್ಕನ್ನು ಹುಡುಕಲು ಹೋಗಿ ತಲೆತಿರುಗಿತು, ಅಷ್ಟರಲ್ಲಿ ಬೆಕ್ಕು ಓಡಿಹೋಯಿತು’ ಹೌದೆ?

ಸಧ್ಯಕ್ಕೆ ವೈರಲ್ ಆಗಿರುವ ಈ ರೀಲ್ಸ್ ವೀಡಿಯೋ 1.4 ಮಿಲಿಯನ್ ಗೂ ಹೆಚ್ಚು ವೀಕ್ಷಣೆಗಳನ್ನು ಹಾಗೂ 10 ಸಾವಿರ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ ಗಳು ಈ ವೀಡಿಯೋಗೆ ಹರಿದುಬಂದಿವೆ. ಒಬ್ಬ ಬಳಕೆದಾರರು ಅದ್ಭುತವಾದ ನೃತ್ಯ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ನನ್ನ ಕಣ್ಣುಗಳು ಆ ಹುಡುಗನ ನೃತ್ಯ ಸುಂದರವಾಗಿದೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಅನೇಕರು ತುಂಬಾ ಅದ್ಭುತವಾಗಿ ನೃತ್ಯ ಮಾಡಿದ್ದೀರೀ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ