Viral Video: ಸಿಲಿಂಡರ್ ಡ್ಯಾನ್ಸ್; 2 ಗ್ಯಾಸ್ ಸಿಲಿಂಡರ್ ತಲೆ ಮೇಲಿಟ್ಟು ಮಹಿಳೆಯ ರೀಲ್ಸ್
ಜೂನ್ 10ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.3 ಮಿಲಿಯನ್ ಅಂದರೆ 30ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಮಹಿಳೆ ಎರಡು ಸಿಲಿಂಡರ್ಗಳನ್ನು ಒಂದರ ಮೇಲೆ ಒಂದರಂತೆ ಇಟ್ಟುಕೊಂಡು ಬೀಳದಂತೆ ಬ್ಯಾಲೆನ್ಸ್ ಮಾಡುತ್ತಾ ನೃತ್ಯ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಮಹಿಳೆಯೊಬ್ಬರು ತನ್ನ ತಲೆಯ ಮೇಲೆ ಎರಡು ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಎರಡು ಸಿಲಿಂಡರ್ಗಳನ್ನು ಒಂದರ ಮೇಲೆ ಒಂದರಂತೆ ಇಟ್ಟುಕೊಂಡು ಬೀಳದಂತೆ ಬ್ಯಾಲೆನ್ಸ್ ಮಾಡುತ್ತಾ ನೃತ್ಯ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಹಿಳೆಯ ಈ ಸ್ಟಂಟ್ ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಈ ರೀತಿ ಸ್ಟಂಟ್ ಮಾಡುತ್ತಿರುವ ಮಹಿಳೆಯ ಹೆಸರು ನೀತು. ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ನೀತು ಇಂತಹ ಸ್ಟಂಟ್ಗಳ ವಿಡಿಯೋ ಹಂಚಿಕೊಳ್ಳುತ್ತಿರುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ 59 ಸಾವಿರ ಫಾಲೋವರ್ಸ್ಗಳನ್ನು ನೀತು ಹೊಂದಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
View this post on Instagram
ಇದನ್ನೂ ಓದಿ: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್
ಜೂನ್ 10ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.3 ಮಿಲಿಯನ್ ಅಂದರೆ 30ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 66 ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಲೈಕ್ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ